ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಆರೋಪಿ ಮುಬಿನ್ ಲಿಂಗಸೂಗೂರು ಪೊಲೀಸ್ ಠಾಣೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಎಂಎಸ್‌ಸಿ ವ್ಯಾಸಂಗ ಮಾಡುತ್ತಿದ್ದ ಅಸ್ಮಾ(22) ಮೃತ ವಿದ್ಯಾರ್ಥಿನಿ. ಮೂಲತಃ ಲಿಂಗಸೂಗೂರು ನಿವಾಸಿ ಅಸ್ಮಾಳನ್ನು ಖಾಸಗಿ ಲೇಔಟ್‌ಗೆ ಕರೆದೊಯ್ದು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇಬ್ಬರೂ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಅಸ್ಮಾ ಬೇರೊಬ್ಬನನ್ನು ಪ್ರೀತಿಸುತ್ತಿದ್ದಾಳೆಂದು ಅನುಮಾನಗೊಂಡ ಮುಬಿನ್, ಇಂದು ಕಾಲೇಜಿಗೆ ಬಂದಾಗ ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಸಿಂಧನೂರು ಟೌನ್ ಹಾಗೂ ಎಸ್ ಪಿ ಪುಟ್ಟಮಾದಯ್ಯ ಸ್ಥಳಕ್ಕಾಗಮಿಸಿ ಪರಿಶೀಲನೆ ಮಾಡಿದ್ದು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇಂದು ಬೆಳಿಗ್ಗೆ ಅಸ್ಮಾ ಕಾಲೇಜಿಗೆ ಬರುತ್ತಿದ್ದ ವೇಳೆ ಲಿಂಗಸೂಗೂರಿನಿಂದ ಬೈಕ್‌ನಲ್ಲಿ ಬಂದ ಪರಿಚಿತ ಮುಬಿನ್, ಮಾತನಾಡುವುದಿದೆ ಬಾ ಎಂದು ಕರೆದುಕೊಂಡು ಹೋಗಿದ್ದಾನೆ. ಏಕಾಏಕಿ ಆಕೆಯ ಮೇಲೆ ಹಲ್ಲೆ ಮಾಡಿ ಚಾಕು ಇರಿದು ಕೊಲೆ ಮಾಡಿದ್ದಾನೆ.

ಈ ಸುದ್ದಿ ಓದಿದ್ದೀರಾ?: ರಾಜ್ಯದ ಹೆಣ್ಣು ಮಕ್ಕಳಿಗಾಗಿ ಆರಂಭವಾಗಿದ್ದ ‘ಶುಚಿ ಯೋಜನೆ’ ಸ್ಥಗಿತ; ರಾಯಚೂರು ಬಾಲಕಿಯರಿಗೆ ಸಂಕಷ್ಟ
