ರಾಯಚೂರು | ಭೋವಿ ಸಮಾಜದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನಿರಾಕರಣೆ: ತಹಶೀಲ್ದಾರ್ ವಿರುದ್ಧ ಕ್ರಮಕ್ಕೆ ಆಗ್ರಹ

Date:

Advertisements

ಮೂಲ ಭೋವಿ ಸಮಾಜದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದೆ ಅನ್ಯಾಯ ಮಾಡುತ್ತಿರುವ ಮಸ್ಕಿ ತಹಶೀಲ್ದಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅಖಿಲ ಕರ್ನಾಟಕ ಭೋವಿ ಸಮಾಜ ವಿವಿಧೋದ್ದೇಶ ಕಲ್ಯಾಣ ಸಂಘದಿಂದ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಟಿಪ್ಪುಸುಲ್ತಾನ್ ಉದ್ಯಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಮೂಲ ಭೋವಿ ಸಮಾಜ ಹಿಂದಿನಿಂದಲೂ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ. ಆದರೆ, ಮಸ್ಕಿ ತಹಶೀಲ್ದಾರ್ ಮಲ್ಲಪ್ಪ ಯರಗೋಳ ಉದ್ದೇಶಪೂರ್ವಕವಾಗಿ ನಮ್ಮ ಜಾತಿಯವರಿಗೆ ಪ್ರಮಾಣ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ. ಇದರಿಂದ ನಮ್ಮ ಸಮಾಜಕ್ಕೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Advertisements

ಲಿಂಗಸುಗೂರು ಸಹಾಯಕ ಆಯುಕ್ತರು ಕೂಡ ಈಗಾಗಲೇ ಜಾತಿ ಪ್ರಮಾಣ ನೀಡುವಂತೆ ಆದೇಶ ಮಾಡಿದ್ದಾರೆ. ಆದರೂ ಅವರ ಆದೇಶ ಧಿಕ್ಕರಿಸಿ ತಹಶೀಲ್ದಾರ್ ಪ್ರಮಾಣ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಷ್ಟೇ ಅಲ್ಲದೇ, ಸಮಾಜ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿಗಳ ಸುತ್ತೋಲೆ ಕೂಡ ಇದೆ. ಅದರಲ್ಲಿ ಮೂಲ ಭೋವಿಗಳು (ಬೆಸ್ತರಲ್ಲದ, ವಡ್ಡರಲ್ಲದ) ಪರಿಶಿಷ್ಟ ಜಾತಿ ಪ್ರಮಾಣ ಪತ್ರ, ಸಿಂಧುತ್ವ ನೀಡಬೇಕು ಎಂದು ಸೂಕ್ತ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಮೇಲಧಿಕಾರಿಗಳ ಆದೇಶಗಳನ್ನು ಉಲ್ಲಂಘಿಸಿರುವ ಮಸ್ಕಿ ತಹಶೀಲ್ದಾರ್ ಮಲ್ಲಪ್ಪ ಯರಗೋಳರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ಭೋವಿ ಸಮುದಾಯದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಕೂಡಲೇ ವಿತರಣೆಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ಸಂಘದ ರಾಜ್ಯಾಧ್ಯಕ್ಷ ಲಕ್ಷ್ಮಣ, ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ ಎಚ್.ಭೋವಿ, ಕಾರ್ಯಾಧ್ಯಕ್ಷ ರಾಮಣ್ಣ ಎಚ್. ಭೋವಿ, ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಿ. ಕಂದಗಲ್ಲ, ಶರಣಬಸವ ಆನೆಹೋಸುರು ಸೇರಿದಂತೆ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X