ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಯಚೂರು ನಗರದ ಶಕ್ತಿನಗರ ವಿದ್ಯುತ್ ಸ್ಥಾವರ ಮುಖ್ಯದ್ವಾರದ ಬಳಿ ನಡೆದಿದೆ.
ಸುರೇಶ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸ್ಥಳೀಯರ ಪ್ರಕಾರ, ಬೆಳಿಗ್ಗೆ ಸುಮಾರು 9 ಗಂಟೆ ವೇಳೆಗೆ ಸುರೇಶ್ ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಶಕ್ತಿನಗರ ಪ್ರದೇಶದಲ್ಲಿ ನೂರಾರು ಫ್ಯಾಕ್ಟರಿಗಳು ಇರುವುದರಿಂದ ವಾಹನ ಸಂಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಸ್ತೆ ಬದಿಯಲ್ಲಿ ನೂರಾರು ವಾಹನಗಳನ್ನು ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಹಾಗೂ ಅಪಘಾತಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಗಣೇಶ ಮೆರವಣಿಗೆಯ ವೇಳೆ ವಿದ್ಯುತ್ ಸ್ಪರ್ಶ – ಯುವಕ ಸಾವು
ಈ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆಗಾಗಿ ತಕ್ಷಣ ಕ್ರಮ ಕೈಗೊಳ್ಳುವಂತೆ ಕಾರ್ಮಿಕರು ಒತ್ತಾಯ ವ್ಯಕ್ತಪಡಿಸಿದ್ದಾರೆ. ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲದಂತೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
