ರಾಯಚೂರು | ಒಳ ಮೀಸಲಾತಿ ಜಾರಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲು ಬೈಕ್ ರ್ಯಾಲಿ, ಸಿ.ಎಂ ಪ್ರತಿಕೃತ ದಹಿಸಿ ಪ್ರತಿಭಟನೆ

Date:

ಎಸ್ ಸಿ,ಎಸ್ ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಲು ವಿಫಲವಾದ ರಾಜ್ಯ ಸರ್ಕಾರದ ಕಾರ್ಯವೈಖರಿ ಖಂಡಿಸಿ ಕರ್ನಾಟಕ ರಾಜ್ಯ ಮಾದಿಗ ಪದವಿಧರ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ನಗರದ ಬಾಬು ಜಗಜೀವನ್ ರಾಮ್ ವೃತ್ತದಿಂದ ಬೈಕ್ ರ್ಯಾಲಿ ನಡೆಸಿ ಬಳಿಕ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಸಿಎಂ, ಡಿಸಿಎಂ, ಸಚಿವ ಮಹಾದೇವಪ್ಪ, ಶಿವರಾಜ ತಂಗಡಗಿ, ಪರಮೇಶ್ವರ, ಸೇರಿದಂತೆ ಇತರೆ ಸಚಿವರ ಭಾವಚಿತ್ರ ಧಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ರಾಜ್ಯದಲ್ಲಿ ಪ.ಜಾತಿ, ಪ.ಪಂಗಡ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಸಂವಿಧಾನಬದ್ಧವಾಗಿ ಮಿಸಲಾತಿ ಪ್ರಮಾಣ ಹೆಚ್ಚಿಸಿ ಹಲವಾರು ವರ್ಷಗಳಿಂದ ಅನುಷ್ಟಾನ ಗೊಳಿಸುತ್ತಿರುವಾಗ ಜನಸಂಖ್ಯೆಗೆ ಅನುಗುಣವಾಗಿ ಸಿಗಬೆಕಾದ ಸಾಮಾಜಿಕ ನ್ಯಾಯದ ಪಾಲನ್ನು ನೀಡದೆ ಮೋಸ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಒಳ ಮೀಸಲಾತಿಯಲ್ಲಿ ಅನ್ಯಾಯ ಮಾಡುತ್ತಿರುವ ಸರ್ಕಾರದ ವಿರುದ್ಧ ಘೋಷಣೆ ಹಾಕಿದರು.

ಪ.ಜಾತಿಗೆ 15-17 ಮತ್ತು ಪ.ಪಂಗಡಕ್ಕೆ 3 -7 ಮಿಸಲು ಪ್ರಮಾಣ ಹೆಚ್ಚಳದಂತೆ ಉದ್ಯೋಗಗಳನ್ನು ನೀಡದೆ ಪರಿಶಿಷ್ಟ ಜಾತಿಗೆ ಶೇ.2 ರಷ್ಟು ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ 4 ರಷ್ಟು ಮೀಸಲಾತಿ ನೀಡಿ ವಂಚಿಸಿದೆ. ಹೆಚ್ಚಿನ ಹುದ್ದೆಗಳನ್ನು ತಪ್ಪಿಸಿ 56432 ಹುದ್ದೆಗಳ ಭರ್ತಿಗೆ ಮುಂದಾದ ದಲಿತ ವಿರೋಧಿ ನೀತಿ ಹಿಂಪಡೆದು ಮತ್ತು 35 ವರ್ಷಗಳ ಸಾಮಾಜಿಕ ನ್ಯಾಯದ ಬೇಡಿಕೆ ಈಡೇರಿಸಿ ನೀಡಲಾದ ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರ ನಡೆಸಿರುವ ಸರ್ಕಾರದ ಧೋರಣೆಯನ್ನು ಖಂಡಿಸಿದರು.

ಮಾದಿಗ ಸಂಭಂದಿತ ಜಾತಿಗೆ ಪ.ಜಾತಿ ಪ್ರ ವರ್ಗ-ಎ ರಂತೆ ಸಿಗಬೇಕಾದ ಸುಮಾರು 3387ಕ್ಕು ಹೆಚ್ಚಿನ ಹುದ್ದೆಗಳನ್ನು ತಪ್ಪಿಸಲು ಕೈಗೊಂಡ ಸರ್ಕಾರದ ನಿರ್ಧಾರ ಹಿಂಪಡೆದುಕೊಳ್ಳಬೇಕು ಎಂದು ಅಗ್ರಹಿಸಿದರು.

ಶೇ.56 ರಷ್ಟು ಮೀಸಲಾತಿಯನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಿ ನ್ಯಾಯ ನೀಡಲು ಆಗದಿದ್ದಲ್ಲಿ ಪಜಾ 17 ರಷ್ಟು ಅಥವಾ 15 ರಷ್ಟು ಮೀಸಲಾತಿಯಲ್ಲಿ ಒಳ ಮಿಸಲಾತಿ ಕಲ್ಪಿಸಿ ಆದೇಶಸಿಸಬೇಕು, ಒಳ ಮೀಸಲಾತಿ ಇಲ್ಲದೆ ನೇಮಕಾತಿ ಮಾಡಲು ತರಾತುರಿಯಲ್ಲಿ ಹೊರಡಿಸಿರುವ ಸರ್ಕಾರದ ಆದೇಶ ಹಿಂಪಡೆಯಲು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ದ್ವಿತೀಯ ಪಿಯು ಪರೀಕ್ಷೆ : ಮೊದಲ ದಿನ 16,434 ವಿದ್ಯಾರ್ಥಿಗಳು ಹಾಜರು, 1,067 ಗೈರು

ಪ್ರತಿಭಟನೆಯಲ್ಲಿ ಮಾದಿಗ ಸಮಾಜದ ಮುಖಂಡರುಗಳಾದ ಎಂ.ವಿರೂಪಾಕ್ಷಿ, ರವಿಂದ್ರ ಜಲ್ದಾರ್, ಎಸ್.ಮಾರೆಪ್ಪ ವಕೀಲ, ರಾಜು, ಹೇಮರಾಜ ಅಸ್ಕಿಹಾಳ, ಹನುಮಂತಪ್ಪ ಮನ್ನಾಪೂರ, ರಾಘವೇಂದ್ರ ಬೋರಡ್ಡಿ, ನರಸಿಂಹಲು, ಮಾದಿಗ ಪದವಿದರ ವೇದಿಕೆ ಅಧ್ಯಕ್ಷ ಶರಣು ತುಗ್ಗಲದಿನ್ನಿ, ರಾಜು ಮನ್ಸಲಾಪೂರ, ಮಲ್ಲಿಕಾರ್ಜುನ ಶಾಖವಾದಿ, ಗೊವಿಂದ ಬಾಪೂರ, ಸುರೇಶ ಬೋರಡ್ಡಿ, ನರಸಿಂಹ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...