ರಾಯಚೂರು | ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Date:

ಕೇಂದ್ರ ಬಿಜೆಪಿ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಎತ್ತಿನ ಬಂಡಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಜಮಾಯಿಸಿ ರಸಗೊಬ್ಬರ ಬೆಲೆ ಏರಿಕೆ ಮಾಡಿರುವುದು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿದರು ಹಾಗೂ ಎತ್ತಿನ ಬಂಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಜೆಪಿ ನಡ್ಡಾ ಅವರ ಮುಖವಾಡ ಧರಿಸಿದ ಕಾರ್ಯಕರ್ತರು ಬಾರಕೋಲ್ ಮೂಲಕ ರೈತನಿಗೆ ಹೊಡೆಯುವಂತೆ ಬಿಂಬಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟಿಸಿದರು.

ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 4 ಸಾವಿರ ನೀಡಿ ರಸಗೊಬ್ಬರ, ಔಷಧಿ, ಮತ್ತು ಬಿತ್ತನೆ ಬೀಜಗಳ ಬೆಲೆ ಏರಿಕೆ ಮಾಡಿ ರೈತರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದೆ ಎಂದು ಕಿಡಿಕಾರಿದರು. ಇಫ್ಕೋ 15-15-15 ರಸ ಗೊಬ್ಬರ ಬೆಲೆ ಹಿಂದೆ 1250 ರೂ. ಇದ್ದು, ಇದೀಗ 1650 ರೂ.ಹೆಚ್ಚಳ ಮಾಡಲಾಗಿದೆ. ಆರ್‌ಸಿಎಫ್ ರಸಗೊಬ್ಬರ ಬೆಲೆ 1470 ರಿಂದ 1650 ಕ್ಕೆ ಹೆಚ್ಚಿಸಲಾಗಿದೆ. ಇಫ್ಕೋ ರಸಗೊಬ್ಬರ 1470 ರಿಂದ 1725 ಕ್ಕೆ ಏರಿಕೆ ಮಾಡಿದೆ. ರಸಗೊಬ್ಬರವು 1250 ರಿಂದ 1700 ಕ್ಕೆ ಏರಿಸಿಲಾಗಿದೆ, 20-20-20 ರಸಗೊಬ್ಬರ 1020 ರಿಂದ 1360 ರೂಗೆ ಏರಿಕೆ ಮಾಡಿದೆ. 12-31-16 ಹೆಸರಿನ ರಸಗೊಬ್ಬರ ಬೆಲೆ 1470 ರಿಂದ 1775 ರೂ.ಗೆ ಹೆಚ್ಚಳ ಮಾಡಿದೆ. ಯೂರಿಯಾ ಬೆಲೆ 266 ರಿಂದ 280 ಕ್ಕೆ ಏರಿಕೆ ಮಾಡಿದೆ. ಎಂಓಓ ಪೊಟ್ಯಾಶ್ 1550 ದಿಂದ 1800 ರೂ ಹೆಚ್ಚಳ ಮಾಡಲಾಗಿದೆ ಎಂದು ದೂರಿದರು.

ರೈತರು ಅತಿವೃಷ್ಠಿ ಮತ್ತು ಅನಾವೃಷ್ಠಿಯಿಂದಾಗಿ ಸಂಕಷ್ಟದಲ್ಲಿದ್ದಾರೆ, ಬೆಳೆಹಾನಿ ಸಾಲ ಮಾಡಿದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದೀಗ ರಸಗೊಬ್ಬರ ಬೆಲೆ ಏರಿಕೆ ಮಾಡಿ ರೈತರನ್ನು ದಿವಾಳಿಯನ್ನಾಗಿ ಮಾಡಲು ಕೇಂದ್ರ ಬಿಜೆಪಿ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರ ಈ ಕೂಡಲೇ ರಸಗೊಬ್ಬರ ಬೆಲೆ ಇಳಿಕೆ ಮಾಡದಿದ್ದರೆ ಬೀದಿಗಿಳಿದು ಹೋರಾಟ ಬೃಹತ್ ಹೋರಾಟ ಮಾಡಲಾಗುವುದು ಮತ್ತು ರಸಗೊಬ್ಬರ ಖಾತೆ ಸಚಿವ ಜೆಪಿ ನಡ್ಡಾ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಸೇತುವೆ ಮೇಲೆ ದಂಪತಿಯ ಫೋಟೋಶೂಟ್: ಪತಿಯನ್ನು ನದಿಗೆ ತಳ್ಳಿದ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮರಿಸ್ವಾಮಿ ಗಟ್ಟುಬಿಚ್ಚಾಲಿ, ರಾಜ್ಯ ಕಾರ್ಯದರ್ಶಿ ಫೈಸಲ್ ಖಾನ್, ಮಹಮದ್ ಶೈಬಾದ್, ಬಿ.ಮಧು ಕುಮಾರ, ಕಿಶೋರ, ರಷೀದ್, ಮಹಮದ್ ಅಜ್ಜು, ಎಂಡಿ ರಫಿ, ಅಬ್ದುಲ್ ಗೌಸ್, ಪ್ರತಾಪ್ ರೆಡ್ಡಿ, ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...