ಲಿಂಗಸೂಗೂರು ತಾಲ್ಲೂಕಿನ ಚಿಕ್ಕಹೆಸರೂರು ಗ್ರಾಮದಲ್ಲಿ ಗರ್ಭಿಣಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ಗರ್ಭಿಣಿ ಉವಮ್ಮ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ಸ್ಥಳೀಯ ಲಿಂಗಸೂಗೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ರಾಯಚೂರು ರಿಮ್ಸ್ ಆಸ್ಪತ್ರೆಗೆ ರವಾನಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಹೆರಿಗೆ ಕಾರ್ಯ ನೆರವೇರಿಸಿದ ವೈದ್ಯರು!
ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ, ರೋಗಿಯನ್ನು ಬೆಂಗಳೂರಿಗೆ ಕಳುಹಿಸಲು ಸಲಹೆ ನೀಡಲಾಯಿತು. ಆದರೆ ಬೆಂಗಳೂರಿಗೆ ಹೋದಾಗ ಗರ್ಭಿಣಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ರಕ್ತಹೀನತೆ ಹಾಗೂ ಬಿಪಿ ಕಡಿಮೆಯಾಗಿರುವುದೇ ಸಾವಿಗೆ ಕಾರಣವೆಂದು ತಿಳಿದುಬಂದಿದೆ.
