ರಾಯಚೂರು | ಕಲುಷಿತ ನೀರಿಗೆ ಬಾಲಕ ಬಲಿ; 30 ಮಂದಿ ಅಸ್ವಸ್ಥ

Date:

ಕಲುಷಿತ ನೀರು ಕುಡಿದು ಐದು ವರ್ಷದ ಬಾಲಕ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌ಅನ್ನು ಹಲವು ವರ್ಷಗಳಿಂದ ಸ್ವಚ್ಚಗೊಳಿಸಿಲ್ಲ. ಅದೇ ಟ್ಯಾಂಕ್‌ನಿಂದ ಗ್ರಾಮಕ್ಕೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಟ್ಯಾಂಕ್‌ ಸ್ವಚ್ಛಗೊಳಿಸದ ಕಾರಣ, ನೀರು ಕಲುಷಿತಗೊಂಡಿದ್ದು, ಆ ನೀರು ಕುಡಿದರು ಅಸ್ವಸ್ಥರಾಗಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಅಸ್ವಸ್ಥರಾದವರಲ್ಲಿ 11 ಮಂದಿಯನ್ನು ರಾಯಚೂರಿನ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಲಕ ಹನುಮಂತ ಈರಪ್ಪ ಮೃತಪಟ್ಟಿದ್ದಾನೆ. ಉಳಿದವರನ್ನು ಅರಕೇರಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳೆದ ಕೆಲವು ದಿನಗಳಿಂದ ಓವರ್‌ಹೆಡ್‌ ಟ್ಯಾಂಕ್‌ ಅರ್ಧದಷ್ಟು ಮಾತ್ರ ತುಂಬುತ್ತಿದೆ. ಗ್ರಾಮಕ್ಕೆ ಡೆಡ್ ಸ್ಟೋರೇಜ್ ನೀರು ಪೂರೈಕೆಯಾಗುತ್ತಿದೆ. ಹೀಗಾಗಿ, ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಟ್ಯಂಕ್‌ಅನ್ನು ಸ್ವಚ್ಚಗೊಳಿಸದ ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಓವರ್‌ ಹೆಡ್‌ ಟ್ಯಾಂಕ್‌ನಿಂದ ಗ್ರಾಮಕ್ಕೆ ನೀರು ಸರಬರಾಜು ಮಾಡುವುದನ್ನು ನಿಲ್ಲಿಸಲಾಗಿದೆ. ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ” ಎಂದು ಗ್ರಾಮ ಪಂಚಾಯತಿ ಪಿಡಿಒ ಶಂಕ್ರಪ್ಪ ತಿಳಿಸಿದ್ದಾರೆ.

ದೇವದುರ್ಗ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್ ಅವರು ಓವರ್ ಹೆಡ್ ಟ್ಯಾಂಕ್‌ಗೆ ನೀರು ಸರಬರಾಜು ಮಾಡುವ ಪೈಪ್ ಒಡೆದು ಒಳಚರಂಡಿ ನೀರು ಪೈಪ್‌ಗೆ ನುಗ್ಗಿದೆ ಎಂಬುದು ಗೊತ್ತಾಗಿದೆ. ಶೀಘ್ರ ದುರಸ್ತಿಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬಿಜೆಪಿಯಿಂದ ಸಂವಿಧಾನ ಆಶಯಗಳು ಬುಡಮೇಲು : ಡಿ.ಜಿ.ಸಾಗರ್

ದೇಶದಲ್ಲಿ ಪ್ರತಿ ಆರು ನಿಮಿಷಗಳಿಗೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ...

ಯಾದಗಿರಿ | ಈಜಲು ಹೋಗಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವು

ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ...

ದಾವಣಗೆರೆ | ಹೆಗಡೆ ನಗರಕ್ಕೆ ಪಕ್ಷೇತರ ಅಭ್ಯರ್ಥಿ ವಿನಯ್ ಕುಮಾರ್ ಭೇಟಿ; ಸಮಸ್ಯೆಗಳ ಅನಾವರಣ

ದಾವಣಗೆರೆ ನಗರದ ರಿಂಗ್ ರಸ್ತೆಯಲ್ಲಿ ವಾಸವಿದ್ದ ನೂರಾರು ಕುಟುಂಬಗಳನ್ನು ಒಕ್ಕಲೆಬ್ಬಿಸಿ, ತಾಲೂಕಿನ...

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...