ರಾಯಚೂರು | ಅಂಗನವಾಡಿ ಕೇಂದ್ರದಲ್ಲಿ 20 ದಿನಗಳಿಂದ ಉಪಹಾರವಿಲ್ಲ — ಸಾರ್ವಜನಿಕರ ಆಕ್ರೋಶ

Date:

ಸಿರವಾರ ತಾಲ್ಲೂಕು ಚಾಗಬಾವಿ ಗ್ರಾಮದ ವಾರ್ಡ್ ಸಂಖ್ಯೆ 1ರ ಅಂಗನವಾಡಿ ಕೇಂದ್ರ ಸಂಖ್ಯೆ 1ರಲ್ಲಿ ಕಳೆದ ಸುಮಾರು 20 ದಿನಗಳಿಂದ ಗ್ಯಾಸ್ ಖಾಲಿಯಾಗಿರುವ ಕಾರಣದಿಂದ ಮಕ್ಕಳಿಗೆ ಉಪಹಾರ ದೊರೆಯದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಮಕ್ಕಳಿಗೆ ಉಪಹಾರವಿಲ್ಲದೆ ಮೊಟ್ಟೆ ಕೈಯಲ್ಲಿ ಹಿಡಿದು ಮನೆಗೆ ಹಿಂತಿರುಗುವಂತಾದ ಘಟನೆ ನಡೆದಿದೆ.

ಸರ್ಕಾರ ಶಿಶು ಅಭಿವೃದ್ಧಿ ಇಲಾಖೆಗೆ ಕೋಟ್ಯಂತರ ರೂಪಾಯಿಗಳನ್ನು ಮಂಜೂರು ಮಾಡುತ್ತಿದ್ದರೂ, ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವೇ ಈ ಪರಿಸ್ಥಿತಿಗೆ ಕಾರಣವಾಗಿದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಸ್ಥಳೀಯ ನಿವಾಸಿ ಮಾನವ ಬಂಧುತ್ವ ವೇದಿಕೆ ಮುಖಂಡ ಬಸವ ಛಾಗಭಾವಿ ಮಾತನಾಡಿ ಪಾಲಕರು ದಿನಗೂಲಿ ಕೆಲಸಕ್ಕೆ ತೆರಳುವ ಮುನ್ನ ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕಳಿಸುತ್ತಾರೆ. ಮಕ್ಕಳು ಕೇಂದ್ರದಲ್ಲಿ ಉಪಹಾರ ಸೇವಿಸಿ ಮಧ್ಯಾಹ್ನ ಮನೆಗೆ ಬರುತ್ತಾರೆ ಎಂಬ ನಂಬಿಕೆಯಿಂದ ಅವರನ್ನು ಕಳುಹಿಸುತ್ತಿದ್ದರೂ, ಕಳೆದ 20 ದಿನಗಳಿಂದ ಕೇಂದ್ರದಲ್ಲಿ ಅಡುಗೆ ಸೌಲಭ್ಯವೇ ಇಲ್ಲದ ಸ್ಥಿತಿ ಉಂಟಾಗಿದೆ.

- Advertisement -

ಸಮಸ್ಯೆ ಬಗ್ಗೆ ಅಂಗನವಾಡಿ ಸಿಬ್ಬಂದಿಯವರು ಕೂಡ ಮೇಲಧಿಕಾರಿಗಳಿಗೆ ಗಮನಕ್ಕೆ ತಂದಿದ್ದಾರೆ ಆದರೂ ಬಗೆಹರಿಸಿಲ್ಲ ಅಧಿಕಾರಿಗಳ ನಿರ್ಲಕ್ಷ್ಯ ಕಾರಣಕ್ಕೆ ಇಂತಹ ಪರಿಸ್ಥಿತಿ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಯರಗೇರಾ ಹೋಬಳಿಗೆ ಬಸ್‌ ನಿಲ್ದಾಣ ನಿರ್ಮಾಣಕ್ಕೆ ; ಸಿಪಿಐಎಂಎಲ್ ಪ್ರತಿಭಟನೆ

ಸಾರ್ವಜನಿಕರು ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ತಕ್ಷಣದ ಹಸ್ತಕ್ಷೇಪವನ್ನು ಬೇಡಿದ್ದಾರೆ. ಮಕ್ಕಳ ಪೌಷ್ಠಿಕತೆ ಹಾಗೂ ಆರೋಗ್ಯದ ವಿಚಾರದಲ್ಲಿ ಇಂತಹ ನಿರ್ಲಕ್ಷ್ಯ ಅಸಹ್ಯಕರ ಎಂದು ಗ್ರಾಮಸ್ಥರು ಖಂಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...