ರಾಯಚೂರು | ಡ್ಯೂಟಿಗೆ ಹಾಕುವ ವಿಚಾರಕ್ಕೆ ಲಂಚ; ಹೋಮ್‌ ಗಾರ್ಡ್ ಕಮಾಂಡರ್‌ ಲೋಕಾಯುಕ್ತ ಬಲೆಗೆ

Date:

ಹೋಮ್ ಗಾರ್ಡ್(ಗೃಹರಕ್ಷಕ ದಳ) ಡ್ಯೂಟಿಗೆ ಹಾಕುವ ವಿಚಾರಕ್ಕೆ ಲಂಚ ಸ್ವೀಕರಿಸುವ ವೇಳೆ ಹೋಮ್‌ ಗಾರ್ಡ್ ಕಮಾಂಡರ್‌ವೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ರಾಯಚೂರು ನಗರದಲ್ಲಿ ನಡೆದಿದೆ.

- Advertisement -

ಜಂಬಣ್ಣ ಎಂಬಾತ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿಬಿದ್ದ ಹೋಮ್‌ ಗಾರ್ಡ್ ಕಮಾಂಡರ್. ನಗರದ ಮಹಿಳಾ ಪೊಲೀಸ್ ಠಾಣೆಗೆ ಡ್ಯೂಟಿ ಹಾಕುವ ವಿಚಾರಕ್ಕೆ ಹೋಮ್‌ ಗಾರ್ಡ್​ವೊಬ್ಬರ ‌ಬಳಿ ಇವರು 10 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ರಾಯಚೂರು ಲೋಕಾಯುಕ್ತ ಎಸ್​ಪಿ ಸತೀಶ್ ಎಸ್ ಚಿಟ್ಟಗುಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಕಮಾಂಡರ್ ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ಹೋಮ್ ಗಾರ್ಡ್ ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ವೇಳೆ ಹೋಮ್ ಗಾರ್ಡ್​​ ಬಳಿ ₹5,000 ಹಣ ಪಡೆಯುವ ವೇಳೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ. ಆಗ ರೆಡ್ ಹ್ಯಾಂಡ್ ಆಗಿ ಕಮಾಂಡರ್ ಸಿಕ್ಕಿಬಿದ್ದಿದ್ದು, ಸದ್ಯ ಲೋಕಾಯುಕ್ತ ಪೊಲೀಸರು ಜಂಬಣ್ಣನ ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮದ್ದೂರು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ, ಪ್ರಗತಿಪರ ಸಂಘಟನೆ ಪ್ರತಿನಿಧಿಗಳ ಸಭೆ

ಹೋಮ್‌ ಗಾರ್ಡ್​​ಗಳನ್ನು ನಗರದ ವಿವಿಧ ಇಲಾಖೆಯ ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ. ಹೋಮ್‌ ಗಾರ್ಡ್‌ಗಳಿಗೆ ಕೆಲಸವನ್ನು ನಿಗದಿಗೊಳಿಸುವ ಮೂಲಕ ಕೆಲಸಕ್ಕೆ ಕಮಾಂಡರ್ ಸೂಚನೆ ನೀಡುತ್ತಾರೆ. ಅಲ್ಲದೇ, ಡ್ಯೂಟಿ ಹಾಕುವುದಕ್ಕೆ ಕಮಾಂಡರ್‌ಗಳು ಹಣ ಪಡೆಯುತ್ತಾರೆ ಎನ್ನುವ ಆರೋಪಗಳು ಆಗಾಗ ಕೇಳಿ ಬರುತ್ತಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...

ಇಂಡಿ | ಸ್ಥಳೀಯ ಚುನಾವಣೆ: ಕಾಂಗ್ರೆಸ್ ಬಲಗೊಳಿಸಲು ಯಶವಂತರಾಯಗೌಡ ಪಾಟೀಲ ಕರೆ

ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ...

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...