ಏಕಾಏಕಿ ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಎರಡು ಹಸು ಹಾಗೂ ಎಮ್ಮೆ ಸಾವನ್ನಪ್ಪಿರುವ ಘಟನೆ ಲಿಂಗಸೂಗೂರು ತಾಲ್ಲೂಕು ಮಟ್ಟೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಗ್ರಾಮದ ಅಮರೇಗೌಡ ಲಕ್ಕನಗೌಡ ಮಾಲಿ ಪಾಟೀಲ್ ಅವರಿಗೆ ಸೇರಿದ ಮೂರು ಜಾನುವಾರುಗಳು ಎಂದು ಹೇಳಲಾಗಿದೆ.

ಹೊರವಲಯದಲ್ಲಿ ಜಮೀನಿನಲ್ಲಿದ್ದ ವೇಳೆ ಸಿಡಿಲು ಬಡಿದಿದ್ದರಿಂದ ಸ್ಥಳದಲ್ಲಿ ಸಾವಿಗೀಡಾಗಿ ಸುಮಾರು 2 ಲಕ್ಷ ರೂ ನಷ್ಟವಾಗಿದೆ.ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ ಅಧ್ಯಕ್ಷೆ ದೇವಮ್ಮ ವಿರೇಶ ಹಾಗೂ ಪಿಡಿಓ ತಿಮ್ಮನಗೌಡ ಕಂದಾಯ ಇಲಾಖೆ ಗ್ರಾಮಲೆಕ್ಕಿಗರ ಸಹಾಯಕ ಶರಣಪ್ಪ ಭೇಟಿ ಜತೆ ನೀಡಿ ಕಂದಾಯ ಮತ್ತು ಪಶು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಇಬ್ಬರ ಸಾವು; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಗ್ರಾಮಸ್ಥರು ಹಾಗೂ ಹೋರಾಟಗಾರರು ನೈಸರ್ಗಿಕ ವಿಕೋಪದಡಿ ರೈತನಿಗೆ ಸೂಕ್ತ ಪರಿಹಾರ ಒದಗಿಸುವಂತೆ ಕಂದಾಯ ಇಲಾಖೆ ಮತ್ತು ಸರಕಾರಕ್ಕೆ ಒತ್ತಾಯಿಸಿದ್ದಾರೆ.
