ರಾಯಚೂರು | ಶೋಷಣೆ ಮುಕ್ತ ಸಮಾಜ ಕಟ್ಟುವುದು ಸ್ವಾತಂತ್ರ್ಯ ಪಡೆಯುವಷ್ಟೇ ಮುಖ್ಯ: ಚನ್ನಬಸವ

Date:

ಸಮಾಜದಲ್ಲಿ ಮನುಷ್ಯ ಮನುಷ್ಯನನ್ನು ಶೋಷಿಸುವುದನ್ನು ತೊಲಗಿಸಿ ಸಹಕಾರದೊಂದಿಗೆ ಬದುಕುವಂತಾಗಬೇಕು. ಶೋಷಣೆ ಮುಕ್ತ ಸಮಾಜ ಕಟ್ಟುವುದು ಸ್ವಾತಂತ್ರ್ಯ ಪಡೆಯುವುದರಷ್ಟೇ ಮುಖ್ಯ ಎಂದು ಎಐಡಿವೈಒ ರಾಯಚೂರು ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್‌ ಅಭಿಪ್ರಾಯಪಟ್ಟರು.

- Advertisement -

ನಗರದ ಮಾವಿನಕೆರೆ ಉದ್ಯಾನವನದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ರಾಜಿರಹಿತ ಪಂಥದ ನಾಯಕ ಚಂದ್ರಶೇಖರ್ ಆಜಾದ್ ಅವರ ಸ್ಮರಣ ದಿನವನ್ನು ಆಚರಿಸಿ ಮಾತನಾಡಿದ ಅವರು, “ಆಜಾದ್ ಅವರು ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ತಮ್ಮದೇ ಆದ ಪ್ರಮುಖ ಪಾತ್ರ ವಹಿಸಿದ್ದಾರೆ. ಪ್ರಬಲ ಶಕ್ತಿಗಳು ದುರ್ಬಲರ ಮೇಲೆ ನಡೆಸುತ್ತಿದ್ದ ಶೋಷಣೆಯನ್ನು ಕೊನೆಗಾಣಿಸಬೇಕು ಎಂಬುದು ಅವರ ಹೋರಾಟದ ಮುಖ್ಯ ಉದ್ದೇಶವಾಗಿತ್ತು. ಅಂತಹ ಮಹನೀಯರ ದೇಶಪ್ರೇಮ, ತ್ಯಾಗ, ಬಲಿದಾನಗಳೇ ಇಂದು ನಾವು ಸ್ವತಂತ್ರವಾಗಿ ಬದುಕಲು ಕಾರಣ” ಎಂದರು.

“ಬ್ರಿಟಿಷರ ವಿರುದ್ಧ ನಡೆದ ಗುಂಡಿನ ಕಾಳಗದಲ್ಲಿ ಆಜಾದ್ ಮರಣ ಹೊಂದಿದರು. ಹೋರಾಟದ ಕಿಚ್ಚು ಅಂದಿನ ಯುವ ಜನರಿಗೆ ಸ್ಪೂರ್ತಿಯ ಸೆಲೆಯಾಗಿತ್ತು. ಅವರ ಜೀವನಾದರ್ಶಗಳು ಇಂದಿಗೂ ಜೀವಂತ. ಅಂತಹ ವೀರ ನಾಯಕರನ್ನು ಮತ್ತೆ ಮತ್ತೆ ಸ್ಮರಿಸಿಕೊಳ್ಳುವುದು ಇಂದಿನ ದಿನಗಳಲ್ಲಿ ಅಗತ್ಯವೆಂದು” ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ?: ರಾಯಚೂರು | ವಿವಿಗಳನ್ನು ಮುಚ್ಚುವ ತೀರ್ಮಾನ ಕೂಡಲೇ ಹಿಂಪಡೆಯಲು ಸಿಪಿಐಎಂ ಆಗ್ರಹ

ಈ ವೇಳೆ ಹಿರಿಯ ಉಪನ್ಯಾಸಕ ಅಮೃತ್, ಎನ್ಎಸ್ಎಸ್ ಅಧಿಕಾರಿ ರಂಜಿತ್ ಕುಮಾರ್, ಉಪನ್ಯಾಸಕ ನರೇಶ್ ಕುಮಾರ್, ಪ್ರವೀಣ್ ಹಾಗೂ ಹಲವು ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...