ರಾಯಚೂರು | ಒಳಮೀಸಲಾತಿ ಜಾರಿಗೆ ಅಡ್ಡಿ; ಸಚಿವರು, ಅಧಿಕಾರಿಗಳ ವರ್ಗಾವಣೆಗೆ ಒತ್ತಾಯಿಸಿ ಪ್ರತಿಭಟನೆ

Date:

ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೆ ಅಡ್ಡಿ ಉಂಟು ಮಾಡುತ್ತಿರುವ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಮಣಿವಣ್ಣನ್, ಆಯುಕ್ತ ರಾಕೇಶ್ ಕುಮಾರ ಹಾಗೂ ಎಸ್.ಸಿ.ಪಿ., ಟಿ.ಎಸ್.ಪಿ. ಕೋ-ಆರ್ಡಿನೇಟರ್ ವೆಂಕಟಯ್ಯ ಸೇರಿ ಮೂವರನ್ನು ಬೇರೆ ಇಲಾಖೆಗೆ ವರ್ಗಾಯಿಸಬೇಕು ಎಂದು ಪ್ರತಿಭಟನೆ ನಡೆಸಿದರು.

- Advertisement -

ನಗರದ ಅಂಬೇಡ್ಕರ್ ವೃತ್ತದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ರಾಯಚೂರು ಜಿಲ್ಲಾ ಘಟಕ ವತಿಯಿಂದ ಕೂಡಲೇ ವರ್ಗಾಯಿಸಿ ಎಂದು ಘೋಷಣೆ ಕೂಗಿ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಪ್ರತಿಭಟನೆ ಉದ್ದೇಶಿಸಿ ಎಸ್ ಮಾರೆಪ್ಪ ವಕೀಲ ಮಾತನಾಡಿ, “ರಾಜ್ಯ ಸರ್ಕಾರ ಕಳೆದ ಒಂದು ತಿಂಗಳಿನಿಂದ ಪರಿಶಿಷ್ಟ ಒಳ ಮೀಸಲಾತಿ ಸಂಬಂಧ ನಿರ್ಣಯಗಳನ್ನು ಕೈಗೊಂಡಿದೆ. ಆದರೆ ಆ ನಿರ್ಣಯಗಳಲ್ಲಿ ಹಲವಾರು ಲೋಪ ದೋಷಗಳಿದ್ದು, ಅಲೆಮಾರಿ ಸಮುದಾಯವನ್ನು ಸೇರಿಸುವ ಮೂಲಕ ಅನ್ಯಾಯ ಮಾಡಲಾಗಿದೆ” ಎಂದು ಆರೋಪಿಸಿದರು.

WhatsApp Image 2025 09 09 at 5.32.51 PM

ಒಳ ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳು ನಿರಂತರವಾಗಿ ದಾರಿ ತಪ್ಪಿಸುತ್ತಿದ್ದು, ಸರ್ಕಾರದಿಂದ ಬರುವ ಆದೇಶಗಳನ್ನು ಪಾಲನೆ ಮಾಡದೇ ಇರುವುದಾಗಿ ಅವರು ದೂರಿದರು. ಬಡ್ತಿ ಹಾಗೂ ಬ್ಲಾಕ್ ಲಾಗ್ ಸಂಬಂಧಿತ ವಿಷಯಗಳಲ್ಲಿಯೂ ತಡೆ ಉಂಟುಮಾಡುತ್ತಿರುವುದರಿಂದ ಸಾವಿರಾರು ಹಿಂದುಳಿದ ಸಮುದಾಯಗಳ ಜೊತೆಗೆ ಚಲ್ಲಾಟವಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾಗಮೋಹನದಾಸ್ ಆಯೋಗದ ವರದಿಯನ್ನು ಸ್ವೀಕರಿಸಿ ಬಹಿರಂಗಪಡಿಸಿ ಸಂಪುಟ ಸಭೆಯಲ್ಲಿ ಮಂಡಿಸಲಾಗಿದೆ. 59 ಅಲೆಮಾರಿ ಸಮುದಾಯಗಳಿಗೆ ಶೇ.1 ರಷ್ಟು, 17 ಸಮುದಾಯಗಳುಳ್ಳ ಮಾದಿಗ-ಮಾದಿಗ ಸಂಬಂಧಿತ ಸಮುದಾಯಗಳಿಗೆ ಶೇ.6 ರಷ್ಟು, 19 ಸಮುದಾಯಗಳುಳ್ಳ ಛಲವಾದಿ-ಹೊಲೆ ಸಮುದಾಯಗಳಿಗೆ ಶೇ.5 ರಷ್ಟು ಸ್ಪೃಶ್ಯ ಸಮುದಾಯಗಳಾದ ಬಂಜಾರ, ವಡ್ಡ, ಕೊರಮ, ಕೊರಚ, 59 ಅಲೆಮಾರಿ ಸಮುದಾಯಗಳಿಗೆ ಶೇ.5 ರಂತೆ ಒಳಮೀಸಲಾತಿ ಕಲ್ಪಿಸಲಾಯಿತು. 2022 ನೇ ಸಾಲಿನ ರೋಸ್ಟರ್ ಬಿಂದುಗಳಿಗೆ ಸಂಬಂಧಿಸಿದ ಡಿ.ಪಿ.ಎ.ಆರ್. ಕಡತವನ್ನು ದುರುದ್ದೇಶದಿಂದ ವಾಪಸ್ ಮಾಡುವ ಸಂಭವವಿದೆ. ಈ ಎಲ್ಲಾ ಗೊಂದಲಗಳಿಗೆ ಮುಖ್ಯ ಕಾರಣವೇ ಸಮಾಜ ಕಲ್ಯಾಣ ಇಲಾಖೆಯು ಒಂದೇ ಸಮುದಾಯದ ಹತೋಟಿಯಲ್ಲಿ ಇರುವುದರಿಂದ ಇತರೆ ಪರಿಶಿಷ್ಟ ಸಮುದಾ ಯಗಳ ಹಿತಾಸಕ್ತಿಯನ್ನು ಬಲಿಕೊಡಲಾಗುತ್ತದೆ ಎಂದು ದೂರಿದರು.

WhatsApp Image 2025 09 09 at 5.35.27 PM

ಸಮಾಜ ಕಲ್ಯಾಣ ಸಚಿವ ಮತ್ತು ಸಮಾಜ ಕಲ್ಯಾಣ ಇಲಾಖೆಯಲ್ಲಿನ ಪ್ರಮುಖ ಹುದ್ದೆಗಳನ್ನು ಹೊಂದಿದ ಹೊಲೆಯ-ಛಲವಾದಿ ಸಮುದಾಯದ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು, ಒಂದೇ ಸಮುದಾಯದ ಆಡಳಿತ ಆ ಸಮುದಾಯದ ಪಕ್ಷಪಾತಿತನವೇ ಆಗುತ್ತದೆ ಎಂದು ಆಪಾದಿಸಿದರು. ಹೊಲೆಯ-ಛಲವಾದಿ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಊಟಿ ಚಿನ್ನದ ಗಣಿ ರಸ್ತೆ ದುರಸ್ತಿಗೆ ಕೆಪಿಆರ್ ಎಸ್ ಆಗ್ರಹ

ಈ ಸಂದರ್ಭದಲ್ಲಿ ಹೇಮರಾಜ ಅಸ್ಕಿಹಾಳ, ಶಿವರಾಯ ಅಕ್ಕರಕಿ, ಎಸ್ ಮಾರೆಪ್ಪ ವಕೀಲ, ಹನುಮಂತ ಮನ್ನಾಪೂರ, ನರಸಿಂಹಲು ಮರ್ಚಟಾಳ, ಶ್ರೀನಿವಾಸ ಕೊಪ್ಪರ, ತಾಯಪ್ಪ ಗಧಾರ, ಲಕ್ಷ್ಮಣ ಕಲ್ಲೂರು, ಹನುಮಂತ ಕೋಟೆ ಸೇರಿದಂತೆ ಸಮುದಾಯದ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...