ರಾಯಚೂರು | ಎಫ್‌ಪಿವಿ ವೈರಸ್‌ಗೆ ರಾಯಚೂರಿನಲ್ಲಿ 38 ಬೆಕ್ಕುಗಳು ಬಲಿ

Date:

ಕಳೆದ ಕೆಲ ದಿನಗಳಿಂದ ಫೆಲಿನಾ ಪ್ಯಾನಲಿಕೊಪೆನಿಯಾ ವೈರಸ್‌ಗೆ (ಎಫ್‌ಪಿವಿ) ಸುಮಾರು ಜಿಲ್ಲೆಯಲ್ಲಿ 38ಕ್ಕೂ ಹೆಚ್ಚು ಬೆಕ್ಕುಗಳು ಮೃತಪಟ್ಟಿವೆ ಎಂದು ವರದಿಯಾಗಿದೆ.ಜಿಲ್ಲೆಯಲ್ಲಿ ಹಕ್ಕಿಜ್ವರದಿಂದ ಪಕ್ಷಿಗಳ ಮಾರಣಹೋಮ ನಡೆದಿದ್ದರೆ, ಈಗ ಈ ವೈರಸ್ ನಿಂದ ಬೆಕ್ಕುಗಳುಗೆ ಕುತ್ತು ಬಂದಿದೆ.

ಬೆಕ್ಕುಗಳಲ್ಲಿ ವಾಂತಿ ಭೇದಿ ಕಾಣಿಸಿಕೊಳ್ಳುತ್ತಿದ್ದು, ಚಿಕಿತ್ಸೆ ನೀಡಿದರೂ ಚೇತರಿಸಿಕೊಳ್ಳದೆ ಸಾವನ್ನಪ್ಪುತ್ತಿವೆ. ಪರ್ಶಿಯನ್ ಬೆಕ್ಕುಗಳನ್ನು ಸಾಕಿಕೊಂಡಿರುವ ಪ್ರಾಣಿಪ್ರಿಯರಲ್ಲಿ ಈಗ ಆತಂಕ ಹೆಚ್ಚಾಗುತ್ತಿದೆ. ಎಲ್ಲ ಜಾತಿಯ ಬೆಕ್ಕುಗಳಿಗೂ ಈ ವೈರಸ್ ಹರಡಿಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಕಳೆದ 20 ದಿನಗಳಲ್ಲಿ 70 ಬೆಕ್ಕುಗಳಲ್ಲಿ ವೈರಸ್ ಕಾಣಿಸಿಕೊಂಡಿದೆ. ಅದರಲ್ಲಿ 38 ಬೆಕ್ಕುಗಳು ಸಾವನ್ನಪ್ಪಿವೆ.


ವಿಚಿತ್ರ ಕಾಯಿಲೆಯಿಂದ ಬೆಕ್ಕುಗಳ ಸ್ಥಿತಿ ನೋಡಿ ಬೆಕ್ಕು ಸಾಕಿದ ಮಾಲೀಕರಲ್ಲಿ ಆತಂಕ ಸೃಷ್ಟಿಯಾಗಿದೆ.ಈ‌ ಬಗ್ಗೆ ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಎಸ್.ಎಸ್.ಪಾಟೀಲ್ ಮಾತನಾಡಿ, ಈ ವೈರಸ್ ಇಂದು‌ ನಿನ್ನೆಯದ್ದಲ್ಲ ಅನೇಕ ವರ್ಷಗಳಿಂದ ಇದೆ ಆದರೆ ಬಯಲಿಗೆ ಬರುತ್ತಿರಲಿಲ್ಲ.

- Advertisement -

ಈ ಸುದ್ದಿ ಓದಿದ್ದೀರಾ? ಲಿಂಗಸುಗೂರು | ಕರ್ತವ್ಯಲೋಪ; ಪುರಸಭೆ ಮುಖ್ಯಾಧಿಕಾರಿ ಅಮಾನತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಬೆಕ್ಕುಗಳು ಚಿಕ್ಕ ಮೂರು ವಾರದ ಮರಿಗಳಿದ್ದಾಗಲೇ ವ್ಯಾಕ್ಸಿನೇಶನ್ ಮಾಡಬೇಕಿದೆ. ಅದಾದ ಬಳಿಕ ಬೂಸ್ಟರ್ ಡೋಸ್ ನೀಡಬೇಕು. ಆದರೆ, ಈ ವ್ಯಾಕ್ಸಿನ್ ಸರ್ಕಾರದಿಂದ ಪೂರೈಕೆಯಾಗುತ್ತಿಲ್ಲ. ಖಾಸಗಿಯವರಿಂದಲೇ ಖರೀದಿಸಬೇಕಿದ್ದು, 900 ರೂ. ಖರ್ಚಾಗುತ್ತದೆ. ಬೆಕ್ಕು ಸಾಕಿದವರು ವ್ಯಾಕ್ಸಿನ್ ಹಾಕಿಸಿದರೆ ಬೀದಿ ಬೆಕ್ಕುಗಳಿಗೆ ಯಾವುದೇ ವ್ಯಾಕ್ಸಿನ್ ಸಿಗದೆ ಬೇಗನೇ ವೈರಸ್‌ಗೆ ತುತ್ತಾಗುತ್ತಿವೆ. ಇದು ಬೆಕ್ಕುಗಳಿಂದ‌ ಬೆಕ್ಕುಗಳಿಗೆ ಮಾತ್ರ ಹರಡುತ್ತದೆ. ಈ ವೈರಸ್ ಮನುಷ್ಯರಿಗೆ ಯಾವುದೇ ಅಪಾಯ ತರುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...