ರಾಯಚೂರು | ಚುನಾವಣಾ ಆಯೋಗವನ್ನು ಹಿತಾಸಕ್ತಿಗೆ ಬಳಸಲು ಕೇಂದ್ರ ಸರ್ಕಾರ-ಆರ್‌ಎಸ್‌ಎಸ್ ಸಂಚು: ಕೆ ಪ್ರಕಾಶ

Date:

ಚುನಾವಣಾ ಆಯೋಗವನ್ನು ಪೂರ್ಣವಾಗಿ ಹಿತಾಸಕ್ತಿಗೆ ಬಳಸಿಕೊಳ್ಳಲು ಕಾನೂನು ಬದ್ಧವಾಗಿ ಮಾಡಲು ಕೇಂದ್ರ ಬಿಜೆಪಿ ಸರ್ಕಾರ ಆರ್‍ಎಸ್‍ಎಸ್ ಜೊತೆಗೂಡಿಕೊಂಡು ವಿಶೇಷ ತೀವ್ರ ಪರಿಷ್ಕರಣೆ(ಎಸ್‍ಐಆರ್) ನಡೆಸಲಾಗುತ್ತಿದೆ ಎಂದು ಸಿಪಿಐ(ಎಂ)ನ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ ಹೇಳಿದರು.

- Advertisement -

ಅವರಿಂದು ನಗರದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಎಸ್‍ಐಆರ್ ಹೆಸರಿನಲ್ಲಿ ಮತ ಅಧಿಕಾರಿ ನಿರಾಕರಣೆ ಕುರಿತು ದುಂಡು ಮೇಜಿನ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಬಿಜೆಪಿ ಸಂವಿಧಾನವನ್ನು ಸಮಗ್ರವಾಗಿ ತಿದ್ದುಪಡಿ ಮಾಡುವ ಮೂಲಕ ಹಿಂದೂ ರಾಷ್ಟ್ರ ಮಾಡುವ ಅವಕಾಶವನ್ನು ಬಯಸುತ್ತಿದ್ದರು. ಅದರ ಅವಕಾಶ ಸಿಕ್ಕಿಲ್ಲ
ಎಂಬುವ ಹಪಾಹಪಿ ಆರ್.ಎಸ್.ಎಸ್ ಮತ್ತು ಬಿಜೆಪಿಗೆ ಇದೆ. ಏನಾದರು ಮಾಡಬೇಕು ಎಂಬುವ ಹಿನ್ನೆಯಲ್ಲಿ ಬೇರೆ ಬೇರೆ ವಿಧಾನವನ್ನು ಮಾಡಲು ಮುಂದಾಗಿದ್ದಾರೆ. ಮುಖ್ಯವಾಗಿ ಚುನಾವಣಾ ಆಯೋಗವನ್ನು ಪೂರ್ಣವಾಗಿ ಹಿತಾಸಕ್ತಿಗೆ ಬಳಸಿಕೊಳ್ಳಲು ಕಾನೂನು ಬದ್ಧವಾಗಿ ಮಾಡಲು ವಿಶೇಷ ತೀವ್ರ ಪರಿಷ್ಕರಣೆ(ಎಸ್‍ಐಆರ್) ನಡೆಸಲಾಗುತ್ತಿದೆ.

ಹಿಂದೆಯೂ ಎಸ್‍ಐಆರ್ ನಡೆದಿದೆ. ಆದರೆ ನಿಯಮಗಳು ಬೇರೆಯಾಗಿದ್ದವು. ರಾಜ್ಯದಲ್ಲಿ 2002ರಲ್ಲಿ ನಡೆದಿದೆ. ಆಗ ನಡೆದಿದ್ದೆ ಗೊತ್ತಾಗಿದ್ದಿಲ್ಲ. ಆದ್ದರಿಂದ ರಾಜ್ಯ ಚುನಾವಣಾ ಆಯೋಗಕ್ಕೆ ಆಗ ಕೇಳಿದ್ದ ದಾಖಲೆಗಳ ಪಟ್ಟಿಗಳನ್ನು ನೀಡಿ ಎಂದು ಕೇಳಲಾಗಿತ್ತು ಇಂದಿಗೂ ನೀಡಿಲ್ಲ, ಆ ಪಟ್ಟಿಯಲ್ಲಿ ಇಲ್ಲದಿರುವ ನಿಯಮಗಳು, ಈಗ ಬಂದಿವೆ ಆದ್ದರಿಂದಲೇ ಪಟ್ಟಿಯನ್ನು ಆಯೋಗ ನೀಡುತ್ತಿಲ್ಲ. ಈ ಕುರಿತು ಜನರನ್ನು ಜಾಗೃತಿಗೊಳಿಸಬೇಕಾಗಿದೆ ಎಂದರು.

ಇದೇ ವೇಳೆ ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷ ಡಾ.ರಝಾಕ್ ಉಸ್ತಾದ್ ಮಾತನಾಡಿ, ಚುನಾವಣೆಗಳನ್ನು ಗೆಲ್ಲಲು ಬೇಕಾದ
ದಾರಿಗಳನ್ನು ಬಿಜೆಪಿ ಕೇಂದ್ರ ಸರ್ಕಾರ ಕಂಡುಕೊಳ್ಳುತ್ತಿದೆ. ಬಿಹಾರದಲ್ಲಿ 25 ಸಾವಿರಕ್ಕೂ ಹೆಚ್ಚಿನ ಓಟುಗಳನ್ನು ಡಿಲಿಟ್ ಮಾಡಲಾಗಿದೆ. ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ತೋರಿಸಲಾಯಿತು. ಅವರ ವಿರುದ್ಧ ಎಫ್‍ಐಆರ್ ದಾಖಲಿಸಲಾಯಿತು. ಇಡೀ ಕಾರ್ಯವನ್ನು ತಮಗೆ ಬೇಕಾದಂತೆ ಮಾಡಿಕೊಂಡಿದ್ದಾರೆ ಎಂಬುವುದು ತಿಳಿಯುತ್ತದೆ ಎಂದರು.

ಬಿಜೆಪಿ ಸರ್ಕಾರಕ್ಕೆ ದೇಶದಲ್ಲಿ ಜನರು ಶಾಂತಿಯಿಂದ ನೆಮ್ಮದಿಯಿಂದ ಬದುಕಬಾರದೆಂಬ ಮನಸ್ಸು ಆರ್.ಎಸ್.ಎಸ್ ಮತ್ತು ಬಿಜೆಪಿಗೆ ಇದೆ. ಅವರು ಆರೋಪ ಮಾಡುವುದೆಲ್ಲ ತಮ್ಮ ವಿರೋಧಿ ಪಕ್ಷದ ರಾಜ್ಯ ಸರ್ಕಾರಗಳ ಮೇಲೆ ಮಾಡುತ್ತಿದ್ದಾರೆ. ತಾವು ಜವಾಬ್ದಾರಿಯಿಂದ ನುಣಿಚಿಕೊಂಡು. ತಮ್ಮ
ಅಸಮರ್ಥತೆಯನ್ನು ದೇಶದ ಜನರ ಮೇಲೆ ಹೇರುವ ಕೆಲಸ
ಮಾಡುತ್ತಿದ್ದಾರೆ. ಆದ್ದರಿಂದ ಎಸ್‍ಐಆರ್ ಮೂಲಕ ಜನರಿಗೆ ತೊಂದರೆ ಕೊಡಲಾಗುತ್ತಿದೆ ಎಂದು ತಿಳಿಸಿದರು. ಸಭೆಯನ್ನು ಉದ್ದೇಶೀಸಿ ಅನೇಕ ಮುಖಂಡರುಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮನೆ ಕಳ್ಳತನ ; 88,000 ರೂ ಜಪ್ತಿ ಮೂವರ ಆರೋಪಿ ಬಂಧನ

ಈ ಸಂದರ್ಭದಲ್ಲಿ ಸರ್ವೋದಯ ಪಕ್ಷದ ರಾಜ್ಯಾಧ್ಯಕ್ಷ ಚಾಮರಸ
ಮಾಲೀಪಾಟೀಲ್, ಆಮ್ ಆದ್ಮಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ನಸರತ್, ಸಿಪಿಐಎಂಎಲ್‍ನ ನಾಗರಾಜ ಪೂಜಾರ್, ಸಿಪಿಎಂನ ರಾಜ್ಯ ಕಾರ್ಯದರ್ಶಿ ಚಂದ್ರಪ್ಪ ಹೊಸಕೇರೆ, ಜಿಲ್ಲಾ
ಕಾರ್ಯದರ್ಶಿ ಕೆ.ಜಿ.ವೀರೇಶ, ಖಾಜಾ ಅಸ್ಲಂ , ಜಾನವೆಸ್ಲಿ, ಜೈಭೀಮ್, ಡಿ.ಎಸ್.ಶರಣಬಸವ, ಎಚ್.ಪದ್ಮಾ , ಮಾರೆಪ್ಪ ಹರವಿ, ವಿಜಯಲಕ್ಷ್ಮಿ, ಅಜೀಜ್ ಜಾಗೀರದಾರ ಸೇರಿದಂತೆ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...