ರಾಯಚೂರು | ಏಮ್ಸ್ ಮಂಜೂರಾತಿಗೆ ಕೇಂದ್ರ ಸರ್ಕಾರ ಮೌನ: ರವಿ ಬೋಸರಾಜ್

Date:

ಏಮ್ಸ್ ಮಂಜೂರಾತಿಗಾಗಿ ನಡೆಸುತ್ತಿರುವ ಹೋರಾಟ ಸಾವಿರ ದಿನ ಪೂರೈಸಿದ್ದು, ಕೇಂದ್ರ ಸರಕಾರಕ್ಕೆ ಮನವಿ ಮಾಡಿದರೂ ಉದ್ದೇಶ ಪೂರ್ವಕವಾಗಿ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರವಿ ಬೋಸರಾಜ್ ಆರೋಪಿಸಿದರು.

- Advertisement -

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ರಾಯಚೂರಿನಲ್ಲಿ ಏಮ್ಸ್ ಮಂಜೂರಾತಿಗೆ ತನ್ನ ಎಲ್ಲ ಪ್ರಯತ್ನಗಳನ್ನೂ ನಡೆಸುತ್ತಿದೆ. ಆದರೆ ಕೇಂದ್ರ ಸರ್ಕಾರ ತಮಗೆ ಸಂಬಂಧವಿಲ್ಲದಂತೆ ದಿಕ್ಕು ತಪ್ಪಿಸುತ್ತಿದೆ. ಈ ಹಿಂದೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರಕ್ಕೆ ಎರಡು ಬಾರಿ ಪತ್ರ ಬರೆದಿದ್ದರೂ ಪ್ರಧಾನಿಯವರು ಮಾತನಾಡದೆ ಮೌನ ವಹಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಜಿಲ್ಲೆಯ ಹಾಗೂ ರಾಜ್ಯದ ಶಾಸಕರು ದೆಹಲಿಗೆ ತೆರಳಿದಾಗ ಏಮ್ಸ್ ಮಂಜೂರಾತಿಗಾಗಿ ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕಿದ್ದಾರೆ. ಆದರೂ ಕೇಂದ್ರ ಸರ್ಕಾರ ನಿರ್ಲಕ್ಷ್ಯ‌ ವಹಿಸುತ್ತಿರುವುದು ಸರಿಯಲ್ಲ. ಕೇಂದ್ರ ಸರ್ಕಾರ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳ ಅಭಿವೃದ್ಧಿಗೆ ಬಳಸುವ ರಾಷ್ಟ್ರೀಯ ಆರೋಗ್ಯ ಮಿಷನ್ ಅನುದಾನದಲ್ಲಿ ಆಸ್ಪತ್ರೆ ಅಭಿವೃದ್ದಿಪಡಿಸುವುದಾಗಿ ಹೇಳುವ ಮೂಲಕ ದಿಕ್ಕುತಪ್ಪಿಸುವ ಕೆಲಸ ಮಾಡಿದ್ದಾರೆ” ಎಂದು ಆರೋಪಿಸಿದರು.

“ರಾಜ್ಯದಿಂದಲೇ ಆಯ್ಕೆಯಾಗಿರುವ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಕೂಡಾ ರಾಜ್ಯದ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ದೇಶದ 22 ರಾಜ್ಯಗಳಲ್ಲಿ ಸ್ಥಾಪಿಸಲಾಗಿರುವ ಏಮ್ಸ್ ಕೇಂದ್ರವನ್ನು ಬೇರೆ ಯೋಜನೆಯಡಿ ಅನುದಾನ ನೀಡಿ ರಾಜ್ಯಕ್ಕೆ ಮಾತ್ರ ಎನ್‌ಆರ್‌ಎಚ್‌ಎಂ ಅನುದಾನ ನೀಡುವದಾಗಿ ಹೇಳುತ್ತಿರುವದು ಎಷ್ಟು ಸರಿ” ಎಂದು ಪ್ರಶ್ನಿಸಿದರು?.

“ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಹಾಗೂ ವಿಮಾನ ನಿಲ್ದಾಣ ನಿರ್ಮಿಸುವಂತೆ ಒತ್ತಾಯಿಸಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಸ್ತಾವನೆ ಸ್ಲಲಿಸಿದ್ದು, ಯಾವುದೇ ಅನುಮತಿಯಿಲ್ಲದೆ ಕಾಮಗಾರಿ ಪ್ರಾರಂಭಿಸಲಾಗಿತ್ತು. ಎಚ್‌ಕೆಡಿಬಿ ₹50 ಲಕ್ಷ ಅನುದಾನ ಹಿಂಪಡೆಯಲಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಜೆಟ್‌ನಲ್ಲಿ ಘೋಷಣೆಯೊಂದಿಗೆ ವಿಮಾನಯಾನ ಪ್ರಾಧಿಕಾರದಿಂದ ಸ್ಥಳಕ್ಕೆ ಅನುಮತಿ ಒದಗಿಸಲಾಯಿತು. ಈವರಗೆ ಸ್ಥಳಕ್ಕೆ ಅನುಮೋದನೆಯೇ ಇರಲಿಲ್ಲ. ಪರವಾನಿಗೆ ಇಲ್ಲದೇ ಟೆಂಡರ್ ಪ್ರಕ್ರಿಯೆ ನಡೆಸಲಾಗಿತ್ತು. ಮಹಾನಗರ ಪಾಲಿಕೆ ಪ್ರಸ್ತಾವನೆಯೂ ಬಿಜೆಪಿ ಅವಧಿಯಲ್ಲಿ ಸಲ್ಲಿಕೆಯಾಗಿದ್ದರೂ ಅನುಮೋದನೆ ದೊರೆತಿರಲಿಲ್ಲ. ಕಾಂಗ್ರೆಸ್ ಸರ್ಕಾರ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಿ ಮೂರು ಲಕ್ಷ ಜನಸಂಖ್ಯೆ ನಿಗದಿಗೊಳಿಸಿ ಮಹಾನಗರ ಪಾಲಿಕೆ ಘೋಷಿಸಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಪ್ಪು ಪಟ್ಟಿ ಧರಿಸಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

“ರಾಜ್ಯ ಸರ್ಕಾರದ ಮಹಾತ್ಮಗಾಂಧಿ ನಗರಾಭಿವೃದ್ಧಿ ಯೋಜನೆಯಡಿ ₹200 ಬಿಡುಗಡೆಗೊಳಿಸಲಾಗಿದೆ. ಕೇಂದ್ರ ಅನುದಾನ ನೀಡಿಲ್ಲ. ರಾಜ್ಯ ಸರ್ಕಾರವೇ ಅನುದಾನ ಮಂಜೂರಾತಿ ನೀಡಿದ ಪತ್ರವನ್ನು ಪ್ರದರ್ಶಿಸಿದರು. ಜಿಲ್ಲೆಯ ಬೇರೆ ಬೇರೆ ಪಕ್ಷದ ಮುಖಂಡರು ಏಮ್ಸ್ ಮಂಜೂರಾತಿ ಪಕ್ಷಾತೀತ ಹೋರಾಟಕ್ಕೆ ಎಲ್ಲರೂ ಬೆಂಬಲಿಸಬೇಕಿದೆ. ರಾಜಕೀಯ ಏನೇ ಇದ್ದರೂ ಪಕ್ಷಾತೀತವಾಗಿ ಹೋರಾಟ ಮಾಡುವ ಮೂಲಕ ಕೇಂದ್ರದ ಮೇಲೆ ಒತ್ತಡ ಹಾಕಬೇಕಿದೆ” ಎಂದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪಾಧ್ಯಕ್ಷ ಸಾಜೀದ ಸಮೀರ್, ನರಸಿಂಹಲು ಮಾಸದೊಡ್ಡಿ, ಮಹ್ಮದ ಶಾಲಂ, ಜಿಂದಪ್ಪ, ನರಸರೆಡ್ಡಿ, ಚಂದ್ರಶೇಖರ ರೆಡ್ಡಿ ಪೋಗಲ್, ಯು ಗೋವಿಂದರೆಡ್ಡಿ, ರಾಜೇಶ್ ಕುಮಾರ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...