ರಾಯಚೂರು | ಅಂಬೇಡ್ಕರ್‌ಗೆ ಅವಮಾನಿಸಿದ ಅಮಿತ್ ಶಾ ಗಡಿಪಾರಿಗೆ ಚಲವಾದಿ ಮಹಾಸಭಾ ಮಹಿಳಾ ಘಟಕ ಆಗ್ರಹ

Date:

ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಅವಮಾನಕರ ಹೇಳಿಕೆ ನೀಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಚಲವಾದಿ ಮಹಾಸಭಾ ಮಹಿಳಾ ಘಟಕದ ಪದಾಧಿಕಾರಿಗಳು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

“ಲೋಕಸಭಾ ಚಳಿಗಾಲ ಆದಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಡಿಸೆಂಬರ್‌ 18ರಂದು ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವುದು ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಅಂಬೇಡ್ಕ‌ರ್ ಹೆಸರು ಹೇಳುವುದು ಈಗ ಶೋಕಿಯಾಗಿಬಿಟ್ಟಿದೆ. ಇಷ್ಟೊಂದು ಬಾರಿ ದೇವರು ಹೆಸರು ಹೇಳಿದ್ದರೆ ಏಳು ಜನ್ಮಗಳವರಗೆ ಸ್ವರ್ಗ ಪ್ರಾಪ್ತಿಯಾಗುತ್ತಿತ್ತೆಂದು ಲೋಕಸಭಾ ಕಲಾಪದಲ್ಲಿ ನಾಲಿಗೆ ಹರಿಬಿಟ್ಟು ಬಾಬಾ ಸಾಹೇಬರಿಗೆ ಅವಮಾನ ಮಾಡುವ ಮೂಲಕ ರಾಷ್ಟ್ರದ್ರೋಹ ಕೃತ್ಯ ಎಸಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇಂಥ ಹೇಳಿಕೆ ಕೋಮು ಗಲಭೆಗಳಿಗೆ ಅವಕಾಶ ಕಲ್ಪಿಸುತ್ತಿದೆ. ಸಂವಿಧಾನದ ಅಡಿಯಲ್ಲಿ ಬಹುದೊಡ್ಡ ಜವಾಬ್ದಾರಿ ವಹಿಸಿಕೊಂಡ ಕೇಂದ್ರ ಗೃಹಸಚಿವ ಈ ರೀತಿ ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದ್ದು, ತಮ್ಮ ಸ್ಥಾನಕ್ಕೆ ಅಗೌರವ ತೋರಿದ್ದಾರೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಮಿತ್ ಶಾ ರಾಜೀನಾಮೆಗೆ ದಲಿತರಪರ ಹೋರಾಟಗಾರರ ಆಗ್ರಹ

“ದೇಶದಲ್ಲಿ ಹಿಂದೂ ಕೋಡ್ ಬಿಲ್ ಜಾರಿಗೆ ತಂದು ದೇಶದ ಎಲ್ಲ ಮಹಿಳೆಯರಿಗೆ ಸಮಾನ ಅವಕಾಶ ಮಾಡಿಕೊಡಲಾಗಿದೆ. ಅಂಬೇಡ್ಕರ್ ನಮಗೆ ನಿತ್ಯ ಸ್ಮರಣೆ. ಅವರನ್ನು ಈ ದೇಶದ ಪ್ರತಿ ಪ್ರಜೆಯೂ ಮರೆಯುವಂತಿಲ್ಲ” ಎಂದರು.

ಈ ಸಂದರ್ಭದಲ್ಲಿ ಈರಮ್ಮ, ಲಲಿತಾ ಆರೋಲೀ ಕರ್, ಅರ್ಚನಾ ಸುಂಕಾರಿ, ಸುಜಾತಾ ದಾದಾಸ್, ನಾಗರತ್ನ, ಲಕ್ಷ್ಮಿ, ಸಾವಿತ್ರಿ, ಪ್ರಿಯದರ್ಶಿನಿ ನಂದಿನಿ, ಮೀನಾಕ್ಷಿ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...