ರಾಯಚೂರು | ಬೆಂಕಿ ಅವಘಡ; ಹೊತ್ತಿ ಉರಿದ ಕೆಮಿಕಲ್ ಫ್ಯಾಕ್ಟರಿ

Date:

  • ಕೆಮಿಕಲ್ ಸೋರಿಕೆಯಿಂದ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿರುವ ಆತಂಕ
  • ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಗೋದಾಮು ಸುಟ್ಟು ಹೋಗಿರುವ ಘಟನೆ ರಾಯಚೂರಿನ ವಡ್ಲೂರಿನಲ್ಲಿ ನಡೆದಿದೆ. ಜೊತೆಗೆ ಕೈಗಾರಿಕಾ ಪ್ರದೇಶದ ಸುತ್ತಲೂ ದಟ್ಟವಾದ ಹೊಗೆ ಆವರಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಕೆಮಿಕಲ್ ಹೊತ್ತಿ ಉರಿದಿದೆ.

ಅಗ್ನಿಶಾಮಕ ದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರೂ ಸತತ ಮೂರು ಗಂಟೆಯ ಬಳಿಕವೂ ನಿಯಂತ್ರಣಕ್ಕೆ ಬಂದಿಲ್ಲ. ಕೆಮಿಕಲ್ ಸೋರಿಕೆಯಿಂದ ಕ್ಷಣ ಕ್ಷಣಕ್ಕೂ ಆತಂಕ ಹೆಚ್ಚಾಗುತ್ತಿದ್ದು, ಅಕ್ಕಪಕ್ಕದ ಕಾರ್ಖಾನೆಗಳಿಗೂ ಬೆಂಕಿ ಹರಡುವ ಆತಂಕ ಶುರುವಾಗಿದೆ. ಅಗ್ನಿ ಅವಘಡದಿಂದಾಗಿ ಫ್ಯಾಕ್ಟರಿ ಒಳಗೆ ಇರುವ ಗ್ಯಾಸ್‌ ಲೀಕ್‌ ಆಗುತ್ತಿದ್ದು, ಸ್ಥಳಕ್ಕೆ ಐದು ಅಗ್ನಿಶಾಮಕ ದಳ ಬಂದಿದ್ದು, ಸತತವಾಗಿ ಕಾರ್ಯಾಚರಣೆ ನಡೆಸುತ್ತಿರುವುದು ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಮೂಲ ಸೌಕರ್ಯಗಳಿಗೆ ಆಗ್ರಹಿಸಿ ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

ಬೆಂಕಿ ಜ್ವಾಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದ್ದು, ಕಾರ್ಖಾನೆಯ ಸುತ್ತಲಿನ ಜನರನ್ನು ಸ್ಥಳಾಂತರಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಮನೆ, ಗುಡಿಸಲಿಗೂ ಬೆಂಕಿ ಹಬ್ಬುವ ಆತಂಕ ಇದೆ. ಇತ್ತ ಕಾರ್ಖಾನೆಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಾವು – ನೋವುಗಳ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಈ ಸದ್ಯ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೀತಾಫಲ ಹಣ್ಣಿಗೆ ಭಾರೀ ಬೇಡಿಕೆ; ಬೇಕಿದೆ ಮಾರುಕಟ್ಟೆ ಸೌಲಭ್ಯ

ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರ ಹಾಗೂ ಅಷ್ಟೇ ಸ್ವಾದಿಷ್ಟ, ರೋಗ...

ಕಾವೇರಿ ವಿವಾದ | ತಮಿಳು ನಟ ಸಿದ್ಧಾರ್ಥ್‌ ಕ್ಷಮೆ ಕೇಳಿದ ನಟ ಶಿವರಾಜ್‌ಕುಮಾರ್

ತಮಿಳು ನಟ ಸಿದ್ಧಾರ್ಥ್‌ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ...

ಕರ್ನಾಟಕ ಬಂದ್ | ದಾವಣಗೆರೆ: ತಮಿಳುನಾಡಿ ನೀರು ಹರಿಸದಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ವಹಣಾ...

ಹಾವೇರಿ | ಕಾವೇರಿ ನೀರು ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಲಿ

ರಾಜ್ಯ ಸರ್ಕಾರ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯ ವಿವಿಧ ಸಂಘಟನೆಗಳ...