ರಾಯಚೂರು | ಮಹಿಳೆಯರ ವಿವಿಧ ಬೇಡಿಕೆ ಈಡೇರಿಕೆಗೆ ಸಿಐಟಿಯು ಆಗ್ರಹ

Date:

ಸಮಾಜದಲ್ಲಿ ಪುರುಷ ಸಮನಾಗಿ ಬೆಳೆದಿರುವ, ಬೆಳೆಯುತ್ತಿರುವ ಮಹಿಳೆಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ, ಉದ್ಯೋಗ ಖಾತರಿ ಸೇರಿದಂತೆ ವಿವಿಧ ರೀತಿಯ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯುನಿಯನ್ಸ್‌ (ಸಿಐಟಿಯು) ಹಾಗೂ ದುಡಿಯುವ ಮಹಿಳೆಯರ ಸಮನ್ವಯ ಸಮಿತಿಗಳು ಪ್ರತಿಭಟನೆ ನಡೆಸಿದವು.

- Advertisement -

ರಾಯಚೂರು ನಗರದ ಸಾರ್ವಜನಿಕ ಉದ್ಯಾನವನದಿಂದ ತಹಶೀಲ್ದಾರ್ ಕಚೇರಿವರೆಗೆ ರ‍್ಯಾಲಿ ನಡೆಸಿ ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. “ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಮಾಣ ಹೆಚ್ಚಳವಾಗುತ್ತಿದೆ, ಕೌಟುಂಬಿಕ ಹಿಂಸೆಯ ಕಾರಣದಿಂದ ಮಹಿಳೆಯು ತೀವ್ರ ಶೋಷಣೆಗೆ ಒಳಗಾಗುತ್ತಿದ್ದಾಳೆ. ದುಡಿಯುವ ಮಹಿಳೆಯರ ಹಕ್ಕುಗಳ ಮೇಲೆ ಸರ್ಕಾರ ನಿರಂತರ ದಾಳಿ ಮಾಡುತ್ತಿದೆ. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಪ್ರತಿಭಟನಾ ದಿನಾಚರಣೆ ಆಚರಿಸಿ ಮಹಿಳೆಯನ್ನೂ ಪುರುಷನಂತೆ ಸಮಾನವಾಗಿ ಕಾಣಬೇಕು” ಎಂದು ಸಂಘಟನೆಯ ಮುಖಂಡರು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಮಹಿಳೆಯರಿಗೆ ಉದ್ಯೋಗಗಳನ್ನು ಖಚಿತಪಡಿಸಬೇಕು, ಮಹಿಳೆಯರನ್ನು ಕಾರ್ಮಿಕರು ಅಥವಾ ರೈತರು ಎಂದು ಪರಿಗಣಿಸಬೇಕು. ಸರ್ಕಾರದ ವಿವಿಧ ಸ್ಕೀಮ್‌ಗಳಡಿ ಗೌರವಧನಕ್ಕೆ ಕೆಲಸ ಮಾಡುವ ಕಾರ್ಮಿಕರೆಂದು ಗುರುತಿಸಿ 45ನೇ ಐಎಲ್‌ಸಿ ಪ್ರಕಾರ ಕನಿಷ್ಠ ವೇತನ, ಸೇವಾ ಭದ್ರತೆ, ಗ್ರಾಚ್ಯುಟಿ ಸೌಲಭ್ಯಗಳನ್ನು ನೀಡಬೇಕು. ಎಲ್ಲಾ ಮಹಿಳೆಯರಿಗೂ ಮುಪ್ಪಿನ ರಜೆ, ಹೆರಿಗೆ ರಜೆ, ಹೆರಿಗೆ ಸೌಲಭ್ಯ ನೀಡಬೇಕು” ಎಂದು ಒತ್ತಾಯಿಸಿದರು.

“ಕೆಲಸದ ಸ್ಥಳಗಳಲ್ಲಿ ನಡೆಯುವ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮವಹಿಸಬೇಕು. ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳಾ ಹಕ್ಕುಗಳ ರಕ್ಷಣೆಗೆ ಇರುವ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ರಾತ್ರಿ ಪಾಳಯದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು” ಎಂದರು.

ಇದನ್ನೂ ಓದಿ: ರಾಯಚೂರು | ಸ್ನಾನ ಮಾಡಲು ಹೊಂಡಕ್ಕೆ ಜಿಗಿದ ವ್ಯಕ್ತಿ ನಾಪತ್ತೆ

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷೆ ಶಕುಂತಲಾ ಪಾಟೀಲ್, ಹೆಚ್. ಪದ್ಮಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಸ್. ಶರಣಬಸವ, ಕಾರ್ಯದರ್ಶಿ ರಂಗಮ್ಮ ಅನ್ವರ, ಅಕ್ಕ ಮಹಾದೇವಿ, ವರಲಕ್ಷ್ಮಿ, ತಾಯಮ್ಮ, ಕಲ್ಯಾಣಮ್ಮ, ಗೋಕುರಮ್ಮ, ತಾಯಮ್ಮ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...