ರಾಯಚೂರು | ಕಲ್ಲಿದ್ದಲು ಕೊರತೆ; ವಿದ್ಯುತ್ ಘಟಕಗಳು ಸ್ಥಗಿತ

Date:

ತಾಂತ್ರಿಕ ಸಮಸ್ಯೆ ಹಾಗೂ ಕಲ್ಲಿದ್ದಲು ಕೊರತೆಯಿಂದಾಗಿ ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ (ಆರ್‌ಟಿಪಿಎಸ್‌) ನಾಲ್ಕು ಘಟಕಗಳು ಹಾಗೂ ವೈಟಿಪಿಎಸ್‌ನ ಒಂದು ಘಟಕ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಿವೆ. ‌

ಆರ್‌ಟಿಪಿಎಸ್‌ನಲ್ಲಿ 1720 ಮೆವ್ಯಾ ವಿದ್ಯುತ್ ಉತ್ಪಾದಿಸುವ 8 ಘಟಕಗಳಲ್ಲಿ ನಾಲ್ಕು ಘಟಕಗಳು ಸ್ಥಗಿತಗೊಂಡಿವೆ. ಐದನೇ ಘಟಕದಲ್ಲಿಯೂ ಉತ್ಪಾದನೆ ಇಳಿಕೆಯಾಗಿದ್ದು, 430 ಮೆವ್ಯಾ ಮಾತ್ರ ಉತ್ಪಾದನೆಯಾಗುತ್ತಿದೆ. 210 ಮೆವ್ಯಾ ವಿದ್ಯುತ್ ಉತ್ಪಾದಿಸುವ ಒಂದು ಮತ್ತು ಎರಡನೇ ಘಟಕ ಸ್ಥಗಿತಗೊಂಡು ತಿಂಗಳು ಗತಿಸುತ್ತಿದೆ. ಆರನೇ ಘಟಕಕ್ಕೆ ಕಲ್ಲಿದ್ದಲು ಕೊರತೆ, ಏಳನೇ ಘಟಕದಲ್ಲಿ ಕಲ್ಲಿದ್ದಲು ಸಮಸ್ಯೆಯಿಂದ ಸ್ಥಗಿತಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಭಾರೀ ಮಳೆಯಿಂದ ರಸ್ತೆ, ಬೆಳೆ ಜಲಾವೃತ; ಜನಜೀವನ ಅಸ್ತವ್ಯಸ್ತ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

800 ಮೆವ್ಯಾ ವಿದ್ಯುತ್ ಉತ್ಪಾದಿಸುವ ವೈಟಿಪಿಎಸ್ ಎರಡನೇ ಘಟಕ ಬ್ಲಾಯರ್ ಟ್ಯೂಬ್ ಸೋರಿಕೆಯಿಂದಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದ ಒಟ್ಟು 1,720 ಮೆಗಾವ್ಯಾಟ್ ವಿದ್ಯುತ್ ಸಾಮರ್ಥ್ಯವಿರುವ ಕೇಂದ್ರದಿಂದ ಪ್ರಸ್ತುತ ಕೇವಲ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ರಾಯಚೂರು ಸಿಟಿ ಜರ್ನಲಿಸ್ಟ್‌ ಹಫೀಜ್‌ ಅವರ ಮಾಹಿತಿ ಆಧರಿಸಿದ ವರದಿ
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ....

ತುಮಕೂರು | ಕಲೆಯ ಗ್ರಹಿಕೆ ಮೇಲೆ ನಿರ್ಬಂಧ ಹೇರುವುದು ಅಪಾಯಕಾರಿ: ವಿಮರ್ಶಕ ರಾಘವೇಂದ್ರರಾವ್

ಕಲೆಯ ಗ್ರಹಿಕೆ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮಬದ್ಧವಾಗಿದ್ದರೂ ನಿರ್ಬಂಧ...

ಗದಗ | ಪ್ರತಿಯೊಬ್ಬರಿಗೂ ಮುಖ್ಯವಾದ ಸಂಪತ್ತು ಆರೋಗ್ಯ; ಎಂಎಲ್‌ಸಿ ಸಂಕನೂರ

ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾದ ಸಂಪತ್ತಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ...

ತುಮಕೂರಿನಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳ ಒತ್ತಾಯ

ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ಕೊಡುವಂತೆ...