ರಾಯಚೂರಿನ ಬಿಸಿಎಂ ಪ್ರಿ-ಮೆಟ್ರಿಕ್ ಬಾಲಕರ ವಸತಿ ನಿಲಯದ ಕೊಠಡಿಯೊಂದರ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಮೂವರು ವಿಧ್ಯಾರ್ಥಿ ಗಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ರಾಯಚೂರು ತಾಲೂಕಿನ ಉಡಮ್ ಗಲ್ ಖಾನಾಪುರ ಗ್ರಾಮದ ಬಿಸಿಎಂ ಪ್ರಾಥಮಿಕ ಮೆಟ್ರಿಕ್ ವಸತಿ ನಿಲಯದಲ್ಲಿ ಮೇಲ್ಛಾವಣಿ ಪ್ಲಾಸ್ಟರ್ ಕುಸಿದು ಬಿದ್ದು ಈ ಘಟನೆ ಸಂಭವಿಸಿದೆ.
ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಕಾರ್ತಿಕ್ , ಕಿರಣ್ , ಗುರುವೇಶ್ ಎಂದು ಗುರುತಿಸಲಾಗಿದೆ.
ಕೊಠಡಿಯಲ್ಲಿ ಸುಮಾರು 15 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರು ಎನ್ನಲಾಗಿದೆ. ಅದರಲ್ಲಿ ಮೂರು ಮಕ್ಕಳಿಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಜಿಲ್ಲಾ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದು, ಮಕ್ಕಳ ಆರೋಗ್ಯ ವಿಚಾರಿಸಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಯವರನ್ನು ಸಂಪರ್ಕಿಸಲಾಯಿತಾದರೂ, ಸಂಪರ್ಕಕ್ಕೆ ಲಭ್ಯವಾಗಿಲ್ಲ.
