ಬೈಕ್ ಮತ್ತು ಸಾರಿಗೆ ಬಸ್ ಮಧ್ಯೆ ಡಿಕ್ಕಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ರಾಯಚೂರು ತಾಲೂಕಿನ ಯರಗೇರಾ ರಾಯಚೂರು ವಿಶ್ವವಿದ್ಯಾಲಯದ ಬಳಿ ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ಗೋನ್ವಾರ್ ಗ್ರಾಮದ ತಿಮ್ಮಾರೆಡ್ಡಿ ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಯಚೂರಿನಿಂದ ಮಂತ್ರಾಲಯ ಕಡೆಗೆ ಹೊರಟಿದ್ದ. ಈ ವೇಳೆ ಎದುರುಗಡೆಯಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ಘಟನೆಯಿಂದ ಬೈಕ್ ಸವಾರನ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನು ಓದಿದ್ದೀರಾ? ಚನ್ನಪಟ್ಟಣ | ಮತದಾರರಲ್ಲದವರು ಕ್ಷೇತ್ರದಲ್ಲಿರುವಂತಿಲ್ಲ: ಯಶವಂತ್ ಗುರುಕರ್
ಘಟನೆಯ ಬಳಿಕ ಮಾಹಿತಿ ಪಡೆದ ಯರಗೇರಾ ಪೊಲೀಸ್ ಠಾಣೆಯ ಪಿಎಸ್ ಐ ಅರುಣಕುಮಾರ ರಾಥೋಡ್ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ನಿಯಂತ್ರಿಸಿ ಗಾಯಾಳು ತಿಮ್ಮಪ್ಪನಿಗೆ ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದರು.
