ರಾಯಚೂರು | ಕಮೀಷನರ್ ದಯಾನಂದ ಅವರ ಅಮಾನತು ಕೂಡಲೇ ಹಿಂಪಡೆಯಲು ಆಗ್ರಹ

Date:

ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯವೆಂದು ಬಿಂಬಿಸಿ ರಾಜ್ಯ ಸರ್ಕಾರ ಬೆಂಗಳೂರು ನಗರ ಕಮಿಷನರ್ ದಯಾನಂದ ಅವರನ್ನು ಅಮಾನತ್ ಮಾಡಿರುವುದು ತೀವ್ರ ಖಂಡನೀಯ ಕೂಡಲೇ ರದ್ದುಗೊಳಿಸಿ ಹುದ್ದೆಯಲ್ಲಿ ಮುಂದುವರೆಸಬೇಕು ಎಂದು ವಾಲ್ಮೀಕಿ ನಾಯಕ ಸಂಘಟನೆಯಿಂದ ವತಿಯಿಂದ ದೇವದುರ್ಗ ತಹಶೀಲ್ದಾರ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದರು.

ಕರ್ನಾಟಕ ರಾಜ್ಯ ಸರಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ದಕ್ಷ ಪ್ರಾಮಾಣೀಕತೆಯಿಂದ ಕಾರ್ಯವನ್ನು ನಿರ್ವಹಿಸುತ್ತಿರುವ ನಾಯಕ ಸಮಾಜಕ್ಕೆ ಸೇರಿದವರಾದ ದಯಾನಂದ ಐ.ಪಿ.ಎಸ್ ಅಧಿಕಾರಿಯನ್ನು ವಿನಾಕಾರಣ ಅಮಾನತ್ ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಹಾಗೂ ಇದೇ ಮೊದಲು ಬಾರಿಗೆ ಕಮಿಷನರ್‌ನನ್ನು ಅಮಾನತ್ ಮಾಡಿರುವದರ ಹಿಂದೆ ಜಾತಿ ರಾಜಕಾರಣ ಇದೆ ಎಂದು ಆಗ್ರಹಿಸಿದರು.

ಸರ್ಕಾರದ ನಿರ್ಲಕ್ಷ್ಯದಿಂದ ಸಂಭವಿಸಿದೆ ಹೊರತು ಅಧಿಕಾರಿಗಳ ನಿರ್ಲಕ್ಷ ತನದಿಂದ ಸಂಭವಿಸಿಲ್ಲ.ಡಿ.ಸಿ.ಎಂ ಹಾಗೂ ಸಿ.ಎಂ ನಡುವೆ ಗುಂಪುಗಾರಿಕೆಯಿಂದ ಅಮಾಯಕರ 11 ಜನರ ಪ್ರಾಣ ಹೋಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಸುಮಾರು ಮೂರ್ನಾಲ್ಕು ಲಕ್ಷ ಜನದಟ್ಟಣೆಗೆ ಒಂದು ವಾರ ಸಿದ್ಧತೆಯಾಗಿರಬೇಕು. ಸಿದ್ದತೆವಿಲ್ಲದೆ ಘಟನೆಗೆ ಕಾರಣವಾಗಿದೆ ಎಂದು ಆರೋಪಿಸಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಚನ್ನಬಸವಪ್ಪ ಬೆಟ್ಟದೂರು ನೆನಪಿನ ದಿನಾಚರಣೆ ; ಜೂನ್ 13 ರಂದು ಅಧ್ಯಯನ ಶಿಬಿರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅಭಿವೃದ್ಧಿ ಕಾರ್ಯದಲ್ಲಿ ಸರ್ಕಾರ ಕಾಲಹರಣ ಮಾಡುತ್ತಿದ್ದು, ತಮ್ಮ ತಪ್ಪನ್ನು ತಿರುಚಲು ತಮಗೆ ಬೇಕಾದಂತೆ ಅಧಿಕಾರಿಗಳ ಮೇಲೆ ದರ್ಪ ತೋರಿಸಿ ಅಮಾನತು ಮಾಡಿದ್ದಾರೆ.ಕೂಡಲೇ ಆದೇಶವನ್ನು ಹಿಂಪಡೆದು ಅದೇ ಹುದ್ದೆಯಲ್ಲಿ ಮುಂದುವರೆಸಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಆಮ್ ಆದಿ ಪಾರ್ಟಿ ಜಿಲ್ಲಾಧ್ಯಕ್ಷ ಭೀಮರಾಯ ನಾಯಕ,ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ; ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ,...