ರಾಯಚೂರು | ಸಂಪೂರ್ಣ ಹದಗೆಟ್ಟ ರಸ್ತೆ: ಶೀಘ್ರವೇ ದುರಸ್ತಿ ಪಡಿಸುವಂತೆ ಗ್ರಾಮಸ್ಥರು, ವಿದ್ಯಾರ್ಥಿಗಳ ಆಗ್ರಹ

Date:

Advertisements

ರಾಯಚೂರು ತಾಲೂಕಿನ ಜೇಗರಕಲ್ ಮೀರಾಪುರ ಗ್ರಾಮದ ರಸ್ತೆಯು ಪೂರ್ತಿ ಹದೆಗೆಟ್ಟು,ತೆಗ್ಗು ಗುಂಡಿಗೆ ವಾಹನಗಳು ಕೆಟ್ಟು ನಿಲ್ಲುತ್ತಿವೆ. ತಕ್ಷಣವೇ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಜೇಗರಕಲ್ ಮೀರಾಪುರ ಗ್ರಾಮದ ರಸ್ತೆಯು ತೆಗ್ಗುಗುಂಡಿಯಿಂದ ಕೂಡಿದ್ದು ವಾಹನ ಸವಾರರಿಗೆ , ಸಾರ್ವಜನಿಕರಿಗೆ ತುಂಬಾ ತೊಂದರೆ ಆಗುತ್ತಿದೆ. ಅದನ್ನು ಸಂಬಂಧಪಟ್ಟ ಇಲಾಖೆ ದುರಸ್ತಿಗೊಳಿಸಿ, ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಗ್ರಾಮಕ್ಕೆ ಸಾರಿಗೆ ಬಸ್ ದಿನನಿತ್ಯ ಸಂಚರಿಸಿ ಶಾಲಾ ಕಾಲೇಜು ಮಕ್ಕಳಿಗೆ ನಗರಕ್ಕೆ ಬರುವುದಕ್ಕೆ ಅನುಕೂಲವಾಗುತ್ತಿತ್ತು. ರಸ್ತೆ ಪೂರ್ತಿ ಹದೆಗೆಟ್ಟು, ಸಾರಿಗೆ ಬಸ್‌ಗಳಿಗೂ ಹಾನಿಯಾಗುತ್ತಿದೆ. ಇದರಿಂದಾಗಿ ಗ್ರಾಮಕ್ಕೆ ಬರುವುದಕ್ಕೆ ಅವರು ಹಿಂದೇಟು ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ನೋವು ತೋಡಿಕೊಂಡಿದ್ದಾರೆ.

Advertisements
WhatsApp Image 2024 09 10 at 10.51.33 1

ದಿನನಿತ್ಯ ಬಸ್ ಶಾಲಾ ಮಕ್ಕಳಿಗೆ ಕರೆದುಕೊಂಡು ಹೋಗುವುದಕ್ಕೆ ಬರುತ್ತಿತ್ತು. ರಸ್ತೆ ಗುಂಡಿಗೆ ಕೆಟ್ಟು ನಿಂತು ವಾರ ಕಳೆದರೂ ಬಸ್ಬಾ ರದೆ ಶಾಲಾ ಕಾಲೇಜು ಮಕ್ಕಳಿಗೆ ನಗರಕ್ಕೆ ಹೋಗಲು ಸಮಸ್ಯೆ ಎದುರಾಗಿದೆ. ಇದರಿಂದ ಮಕ್ಕಳು ಶಿಕ್ಷಣದಿಂದ ದೂರು ಉಳಿಯುವ ಸಾಧ್ಯತೆಯಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ ? ರಾಯಚೂರು | ಬೀಳುವ ಹಂತಕ್ಕೆ ತಲುಪಿದ ಗಬ್ಬೂರು ಸರ್ಕಾರಿ ಪ್ರೌಢಶಾಲೆಯ ಕಟ್ಟಡ

ಈ ಬಗ್ಗೆ ಗ್ರಾಮಸ್ಥ ಶಿವುಕುಮಾರ ಮಾತನಾಡಿ, ರಸ್ತೆಯಲ್ಲಿ ಗುಂಡಿಗಳೋ, ಗುಂಡಿಗಳಲ್ಲಿ ರಸ್ತೆಯೋ ಎನ್ನುವ ಭೀತಿಯಾಗಿದೆ. ಮಳೆಗಾಲದ ಸಮಯದಲ್ಲಿ ತೆಗ್ಗುಗಳಲ್ಲಿ ನೀರು ನಿಂತು ಅಪಘಾತಗಳು ಸಂಭವಿಸಿವೆ. ಸಾರಿಗೆ ಬಸ್ ದಿನನಿತ್ಯ ಬೆಳಗ್ಗೆ ಶಾಲಾ ಕಾಲೇಜು ಮಕ್ಕಳನ್ನು ಕರೆದುಕೊಂಡು ನಗರಕ್ಕೆ ಸಂಚರಿಸುತ್ತಿತ್ತು. ಬಸ್ ಕೆಟ್ಟು ಹೋಗಿ ವಾರವಾದರೂ ಬಸ್ ಬಾರದೆ ಮಕ್ಕಳಿಗೆ ಹೋಗುವುದಕ್ಕೆ ಸಮಸ್ಯೆ ಎದುರಾಗಿದೆ. ಡಿಪೋದವರನ್ನು ಕೇಳಿದರೆ ಆ ರಸ್ತೆಗೆ ಓಡಾಡುವ ಬಸ್‌ಗಳು ಕೆಟ್ಟು ಹೋಗುತ್ತಿವೆ. ರಸ್ತೆ ಗುಂಡಿಗೆ ಬಸ್‌ಗಳು ಪಲ್ಟಿ ಆಗುವ ಸಾಧ್ಯತೆಯಿರುತ್ತದೆ. ಘಟನೆಗಳು ಸಂಭವಿಸಿದರೆ ಯಾರ ಹೊಣೆ ಎಂದು ಅಧಿಕಾರಿಗಳು ಹೇಳುತ್ತಾರೆ ಎಂದು ಹೇಳಿದರು.

WhatsApp Image 2024 09 10 at 10.52.06

ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ರಸ್ತೆಯನ್ನು ದುರಸ್ತಿಪಡಿಸಲು ಕ್ರಮ ಕೈಗೊಳ್ಳಲು ಆಗ್ರಹಿಸಿ ಗ್ರಾಮದ ಶಾಲಾ ಮಕ್ಕಳು ರಾಯಚೂರು ಅಪರ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ ಅವರಿಗೆ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X