ರಾಯಚೂರು | ಕೇಂದ್ರದ ರೈತ, ಕಾರ್ಮಿಕ ವಿರೋಧಿ ನೀತಿಗೆ ಖಂಡನೆ; ಫೆ.16ರಂದು ಪ್ರತಿಭಟನೆ

Date:

ಕೇಂದ್ರದ ಬಿಜೆಪಿ ಸರ್ಕಾರ ರೈತ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಫೆಬ್ರವರಿ 16ರಂದು ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಸಂಘಟನೆ ಗ್ರಾಮೀಣ ಭಾರತ ಬಂದ್ ನಡೆಸಲಿದೆ ಎಂದು ಟಿಯುಸಿಐ ಜಿಲ್ಲಾಧ್ಯಕ್ಷ ಜಿ ಅಮರೇಶ ಹೇಳಿದರು.

- Advertisement -

ರಾಯಚೂರು ನಗರದಲ್ಲಿ ನಡೆದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “10ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಹೋರಾಟವನ್ನು ಬೆಂಬಲಿಸಿ ಭಾಗವಹಿಸಲಿವೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸುಳ್ಳುಗಳನ್ನು ಹೇಳುತ್ತಲೇ ಜನರ ದಾರಿ ತಪ್ಪಿಸುತ್ತಾ ಬಂದಿದೆ. ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರೂ, ಮಾತು ಮರೆತಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಳವಾಗಿದೆ. ದುಡಿಯುವ ಜನರ ವೇತನ ಕುಸಿದು ಕೆಲಸ ದೊರೆಯದ ಸ್ಥಿತಿ ಆವರಿಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ರೈತರ ದುಡಿಮೆಗೆ ಬೆಲೆಯೇ ಇಲ್ಲದೆ ಹೋಗಿದೆ. ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಘೋಷಣೆಯಾಗಿದ್ದರೂ ದೊರೆಯದೇ ಹೋಗುತ್ತಿರುವುದರಿಂದ ಕನಿಷ್ಠ ಬೆಂಬಲ ಕಾಯ್ದೆ ರೂಪಿಸಲು ಮುಂದಾಗುತ್ತಿಲ್ಲ. ಕಾರ್ಮಿಕರು ಸೌಲಭ್ಯ ಪಡೆಯಲು ಸಾಧ್ಯವಾಗದೇ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ತರಲು ಹೊರಟಿದೆ” ಎಂದರು.

“ರೈತರು ಹಾಗೂ ಕಾರ್ಮಿಕರಿಗೆ ಜೀವನ ಭದ್ರತೆಯೇ ಇಲ್ಲದಂತಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿ, ಇರುವ ಆದಾಯವೂ ಕುಸಿತವಾಗುವ ನೀತಿ ರೂಪಿಸುತ್ತಿದೆ. ರೈತ ಮತ್ತು ಕಾರ್ಮಿಕ ನೀತಿಗಳ ವಿರುದ್ದ ರೈತರು, ಕಾರ್ಮಿಕರ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆಗೆ ಬೆಂಬಲಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸಿ ಸಿಪಿಐ ಪ್ರತಿಭಟನೆ

“ಬೀಜಗಳ ಸಬ್ಸಿಡಿಯನ್ನು ಶೇ.50ಕ್ಕೆ ಹೆಚ್ಚಿಸುವುದು, ರಸಗೊಬ್ಬರ, ವಿದ್ಯುತ್ ಸಬ್ಸಿಡಿ ನೀಡುವುದು, ಉದ್ಯೋಗ ಖಾತ್ರಿ ಯೋಜನೆಯಡಿ ದಿನಕ್ಕೆ ₹500 ದಿನಗೂಲಿ ನಿಗದಿಪಡಿಸುವುದು, ಎಲ್ಲರಿಗೂ ₹31,000 ಕನಿಷ್ಠ ವೇತನ ನಿಗದಿಪಡಿಸುವುದು, ಗುತ್ತಿಗೆ ಪದ್ದತಿ ರದ್ದುಗೊಳಿಸಿ ಸಾಮಾಜಿಕ ಭದ್ರತೆ ಒದಗಿಸುವಂತೆ ರಾಯಚೂರು, ಸಿಂಧನೂರು, ಮಸ್ಕಿ, ಹಟ್ಟಿ ಸೇರಿದಂತೆ ಏಳು ಕಡೆ ಸಂಘಟನೆಯಿಂದ ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆ ನಡೆಸಲಾಗುತ್ತದೆ” ಎಂದರು. ‌

ಅಜೀಜ ಜಹಾಗೀರದಾರ, ಜಿ ಅಡವಿರಾವ್, ನಿರಂಜನ್, ಲಕ್ಷ್ಮಣ ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...