ರಾಯಚೂರು | ಒಳ ಮೀಸಲಾತಿ ವರ್ಗೀಕರಣ ಗೊಂದಲ; ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ನೇಮಕಾತಿ ತಾತ್ಕಾಲಿಕ ಸ್ಥಗಿತಕ್ಕೆ ಮನವಿ

Date:

ರಾಜ್ಯದಲ್ಲಿ ಒಳ ಮೀಸಲಾತಿ ವರ್ಗೀಕರಣದ ಗೊಂದಲ ಇದ್ದ ಕಾರಣ ವಿಶ್ವ ವಿದ್ಯಾಲಯದಲ್ಲಿ ಯಾವುದೇ ರೀತಿಯ ಹುದ್ದೆಗಳ ನೇಮಕಾತಿಯನ್ನು ಅಧಿಕೃತ ಆದೇಶ ಬರುವವರೆಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬಾರದೆಂದು ಮಾದಿಗ ಮೀಸಲಾತಿ ಹೋರಾಟ ತಾಲೂಕ ಸಮಿತಿ ವತಿಯಿಂದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾಲಯದ ಕುಲಪತಿಗೆ ಮನವಿ ಸಲ್ಲಿಸಲಾಯಿತು.

- Advertisement -

ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲಾ ಸಮುದಾಯಗಳಿಗೆ ಮೀಸಲಾತಿಯಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಬೇಕೆಂದು 30 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದೆ. ಸರ್ವೋಚ್ಚ ನ್ಯಾಯಾಲಯವು ಮೀಸಲಾತಿ ಹೆಚ್ಚಳಕ್ಕೆ ಮಹತ್ವದ ತೀರ್ಪನ್ನು ನೀಡಿತ್ತು. ತೀರ್ಪಿನ ಅನ್ವಯ ರಾಜ್ಯ ಸರ್ಕಾರ ಹೆಚ್.ಎನ್. ನಾಗಮೋಹನ್‌ದಾಸ್ ರವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ಸರ್ಕಾರ ತರಾತುರಿಯಲ್ಲಿ ಶೇ17 ರಲ್ಲಿ ಎಡಗೈ ಸಮುದಾಯಕ್ಕೆ ಶೇ 6, ಬಲಗೈ ಸಮುದಾಯಕ್ಕೆ ಶೇ 6, ಕೋಲಂಬಿಸ್ ಸಮುದಾಯಕ್ಕೆ ಶೇ 5 ಕೊರವ, ಕೊರಚ, ಲಂಬಾಣಿ, ಭೋವಿ ಸಮುದಾಯಗಳಿಗೆ ಮೀಸಲಾತಿಯನ್ನು ಹಂಚಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಆದರೆ ಅಲೆಮಾರಿ ಜನಾಂಗಕ್ಕೆ ಮತ್ತು ಎಕೆ, ಎಡಿ, ಎಎ, ಈ ಜಾತಿಗಳ ಗೊಂದಲ ಮತ್ತು ಬ್ಯಾಕ್‌ಲಾಗ್ ಉದ್ಯೋಗಗಳಲ್ಲಿ 101 ಜಾತಿಗಳಿಗೆ ಮೋಸ ಮಾಡಿದೆ. ಸರ್ಕಾರದ ಈ ಧೋರಣೆಯ ವಿರುದ್ಧ ಒಳ ಮೀಸಲಾತಿಯ ವರದಿ ಹೈಕೋರ್ಟ್ ಮೆಟ್ಟಿಲೇರಿದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಗೊಂದಲದಲ್ಲಿದ್ದು ಸರ್ಕಾರ ಅಧಿಕೃತ ಮತ್ತು ಆದೇಶ ಹೊರಡಿಸುವವರೆಗೆ ಶ್ರೀ ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನು ಭರ್ತಿ ಮಾಡಬಾರದೆಂದು ಹಾಗೂ ರಾಜ್ಯ ಸರ್ಕಾರದಿಂದ ಸಂಪೂರ್ಣ ಒಳ ಮೀಸಲಾತಿ ಅಧಿಕೃತ ಆದೇಶ ಬರುವವರೆಗೂ ಎಲ್ಲಾ ನೇಮಕಾತಿ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಕಾಲಿಕ ಮಳೆಗೆ ಜೋಳ ಬೆಳೆ ಹಾನಿ; ಸಂಕಷ್ಟದಲ್ಲಿ ರೈತರು

ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ದುಳ್ಳಯ್ಯ ಗುಂಜಹಳ್ಳಿ,ಭೀಮೇಶ ತುಂಟಾಪೂರು, ಸುರೇಶ ದುಗನೂರ, ನಜಕ್ರಪ್ಪ ಹಂಚಿನಾಳ,ರAಜೀತ್ ದಂಡೋರ, ದಾವೀದ್ ಮರ್ಚೆಟ್ಟಾಳ, ಮಾರುತಿ ಮರ್ಚೆಟ್ಟಾಳ,ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...