ರಾಯಚೂರು | ಛಲವಾದಿ ನಾರಾಯಣಸ್ವಾಮಿ ಕೂಡಲೇ ಕ್ಷಮೆಯಾಚಿಸಬೇಕು ;ವಿಧಾನ ಪರಿಷತ್ ಸದಸ್ಯ ಎ.ವಸಂತ್

Date:

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕೂಡಲೇ ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ ಹೇಳಿದರು

- Advertisement -

ಪತ್ರಿಕಾ ಹೇಳಿಕೆ ನೀಡಿ ಛಲವಾದಿ ನಾರಾಯಣಸ್ವಾಮಿ ಇತ್ತೀಚಿಗೆ ಕಲಬುರಗಿಗೆ ಭೇಟಿ ನೀಡಿದಾಗ ಪ್ರಿಯಾಂಕ್ ಅವರನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೆ ನಾಲಿಗೆ ಹರಿಬಿಟ್ಟು ಅವಾಚ್ಯ ಪದಗಳಿಂದ ಮಾತನಾಡಿರುವುದು ಅಕ್ಷಮ್ಯ ಅಪರಾಧ ಹಾಗೂ ತೀವ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಛಲುವಾದಿ ನಾರಾಯಣಸ್ವಾಮಿಯವರು ಕಳೆದ ಮೂವತ್ತು ವರ್ಷಗಳ ಕಾಲ ಕಾಂಗ್ರೆಸ್ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಅವರ ನೆರಳಿನಲ್ಲಿ ರಾಜಕೀಯವಾಗಿ ಬೆಳೆದು ಹಾಗೂ ಹಲವು ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಗಟ್ಟಿಯಾಗಿ ಹೀಗೆ ಮಾತನಾಡುವುದು ಸರಿಯಾದುದಲ್ಲ ಎಂದರು.

ದೇಶದ ಪ್ರಧಾನ ಮಂತ್ರಿಗಳನ್ನು ಪ್ರಶ್ನೆ ಮಾಡಲು ಪ್ರಿಯಾಂಕ್ ಯಾರು ಎಂದು ಕೇಳಿರುವ ಚಲುವಾದಿ ನಾರಾಯಣಸ್ವಾಮಿಯವರು ದೇಶದ ಪ್ರಜಾಪ್ರಭುತ್ವದ ತಳಹದಿ ಮರೆತಿದ್ದಾರೆ.ಬಿಜೆಪಿಯ ಮನುವಾದಿಗಳು ಟೀಕಿಸುವ ಮೂಲಕ ತಮ್ಮ ನೈತಿಕ ದಿವಾಳಿತನ ಪ್ರದರ್ಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಾಳೆಯಿಂದ ಚಿಂತನ-ಮಂಥನ ಕಾರ್ಯಕ್ರಮ

ದೇಶದ ಸಾಮಾನ್ಯ ನಾಗರಿಕ ಕೂಡ ಪ್ರಧಾನ ಮಂತ್ರಿಗಳನ್ನು ಪ್ರಶ್ನೆ ಮಾಡಬಹುದು.ಪ್ರಜಾಪ್ರಭುತ್ವದಲ್ಲಿ ಅಧಿಕಾರದಲ್ಲಿ ಇರುವವರು ಯಾರೇ ಆಗಲಿ ಹಾಗೂ ಉನ್ನತ ದರ್ಜೆಯಲ್ಲಿರಲಿ ಸಾಮಾನ್ಯ ಪ್ರಜೆಗೆ ಉತ್ತರಿಸಬೇಕಾಗುತ್ತದೆ ಎನ್ನುವ ಕನಿಷ್ಠ ತಿಳುವಳಿಕೆ ಇಲ್ಲದಿರುವಂತಹ ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕನಾಗಿರುವದು ಈ ರಾಜ್ಯದ ದುರಂತ ಎಂದು ಕಟುವಾಗಿ ಟೀಕಿಸಿದರು.

ಛಲುವಾದಿ ನಾರಾಯಣಸ್ವಾಮಿಯವರು ಬಿಜೆಪಿ ಹಾಗೂ ಆರ್ ಎಸ್ ಎಸ್ ನಾಯಕರನ್ನು ಖುಷಿಪಡಿಸಲು ಸಲುವಾಗಿ ಇಲ್ಲಸಲ್ಲದ ಹೇಳಿಕೆ ನೀಡಿದ್ದು ಕೂಡಲೇ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ಎಲ್ಲಿಯೇ ಪ್ರಯಾಣ ಬೆಳೆಸಿದರು ಕಾಂಗ್ರೆಸ್ ಕಾರ್ಯಕರ್ತರಿಂದ ಹಾಗೂ ಖರ್ಗೆ ಅಭಿಮಾನಿಗಳಿಂದ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...