ರಾಯಚೂರು | ರಸ್ತೆ ಕಾಮಗಾರಿ ವಿಚಾರ: ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ

Date:

ರಾತ್ರಿ ವೇಳೆ ರಸ್ತೆ ಕಾಮಗಾರಿ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಕೈಕೈ ಮಿಲಾಯಿಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಸೋಮವಾರ ರಾತ್ರಿ ನಡೆದಿದೆ.

- Advertisement -

ಕಾಮಗಾರಿ ಉಸ್ತುವಾರಿ ವಹಿಸಿಕೊಂಡಿದ್ದ ಗುತ್ತಿಗೆದಾರರು ಕಾಂಗ್ರೆಸ್ ಕಾರ್ಯಕರ್ತರೂ ಆಗಿದ್ದು, ನಗರದ ಬಸವೇಶ್ವರ ವೃತ್ತದಿಂದ ಪುರಸಭೆಯವರೆಗೂ ಕಾಮಗಾರಿಯ ನಡೆಸುತ್ತಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ರಾತ್ರಿಯ ವೇಳೆ ರಸ್ತೆಯ ಕಾಮಗಾರಿ ನಡೆಸುತ್ತಿರುವ ಬಗ್ಗೆ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ರಾತ್ರಿಯ ವೇಳೆ ಕಾಮಗಾರಿ ನಡೆಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು, ಹೊಡೆದಾಡುವ ಹಂತಕ್ಕೆ ತಲುಪಿದೆ ಎಂದು ಹೇಳಲಾಗಿದೆ.

ರಾತ್ರಿ ವೇಳೆ ಸಂಚಾರ ಕಡಿಮೆ ಇರುವ ದೃಷ್ಟಿಯಿಂದ ಕಾಮಗಾರಿಯನ್ನು ಪ್ರಾರಂಭಿಸಲಾಗಿತ್ತು. ಇದನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ರಾತ್ರಿ ಮಾಡುವುದು ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಗುತ್ತಿಗೆದಾರ ರಸೂಲ್ ಖುರೇಷಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, ಬಿಜೆಪಿ ಪಕ್ಷದ ಕಾರ್ಯಕರ್ತರು ಈ ರಸ್ತೆಯ ಕಾಮಗಾರಿ ಎಸ್ ಸಿ ಎಸ್ ಟಿ ಅನುದಾನದಲ್ಲಿ ನಡೆಯುತ್ತಿದೆ ಎಂದು ನಿಲ್ಲಿಸಲು ಬಂದರು. ಇದು ಕೆ ಕೆ ಆರ್ ಡಿ ಬಿ ಅನುದಾನದಲ್ಲಿ ನಡೆಯುತ್ತಿದೆ ಎಂದು ಜೆಇ,ಇನ್ನಿತರ ಅಧಿಕಾರಿಗಳು ಹೇಳಿದರೂ ಕೂಡ ಅವರು ಸಮಾಧಾನವಾಗಿಲ್ಲ. ಈ ವೇಳೆ ಮಾತಿಗೆ ಮಾತು ಬೆಳೆಸಿ, ವಾಗ್ವಾದ ನಡೆಸಿದ್ದಾರೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಕಾಲುವೆಗೆ ಬಿದ್ದ ಗೂಡ್ಸ್ ಆಟೋ: ಮಹಿಳಾ ಕೂಲಿಕಾರರನ್ನು ನಡು ನೀರಲ್ಲಿ ಬಿಟ್ಟು ಚಾಲಕ ಪರಾರಿ!

ವಾಗ್ವಾದದ ನಡುವೆಯೇ ಗುಂಪಿನಲ್ಲಿದ್ದ ಒಬ್ಬ ಬಿಜೆಪಿ ಕಾರ್ಯಕರ್ತ ಕಾಮಗಾರಿಗೆ ಹಾಕಿದ್ದ ಬ್ಯಾರಿಕೇಡ್ ಅನ್ನು ಜೋರಾಗಿ ತಳ್ಳಿದ್ದಾನೆ. ಈ ವೇಳೆ ಸ್ಥಳಕ್ಕೆ ಬಂದಿದ್ದ ಕಾಂಗ್ರೆಸ್ ಪಕ್ಷದ ಕೆಲವು ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಈ ವೇಳೆ ನೂಕಾಟ ನಡೆದಿದೆ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...