ರಾಯಚೂರು | ಕಾಂಗ್ರೆಸ್‌ನವರು ಗೊಂದಲದಲ್ಲಿದ್ದು, ಹತಾಶರಾಗಿ ಮಾತನಾಡುತ್ತಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ

Date:

Advertisements

ದೆಹಲಿಯಿಂದ ಹಿಡಿದು ಬೆಂಗಳೂರುವರಗೆ ಕಾಂಗ್ರೆಸ್ ಗೊಂದಲದಲ್ಲಿದ್ದು, ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.

ರಾಯಚೂರಿನ ತಿಂತಣಿ ಬ್ರಿಜ್‌ನಲ್ಲಿ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದಾಗ ಮಾಧ್ಯಮದವರೊಂದಿಗೆ ಮಾತನಾಡಿದರು.

“ದೇಶ ಮತ್ತು ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಲೆಯಿಂದ ಕಾಂಗ್ರೆಸ್ ಆತಂಕಗೊಂಡಿದೆ. ನುಡಿದಂತೆ ನಡೆದಿದ್ದೇವೆಂದು ಜಾಹೀರಾತು ನೀಡಿದರೆ ಫಲಾನುಭವಿಗಳಿಗೆ ತಲುಪಿದಂತಲ್ಲ. ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ರಾಜ್ಯದಲ್ಲಿ ಬರಗಾಲ ಆವರಿಸಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಸರ್ಕಾರ ಯಾವ ಪರಿಹಾರವನ್ನೂ ಬಿಡುಗಡೆಗೊಳಿಸುತ್ತಿಲ್ಲ” ಎಂದು ಹೇಳಿದರು.

Advertisements

“ಒಂದು ಕಡೆ ಮೂರು ಮಂದಿ ಡಿಸಿಎಂ ಮಾಡುತ್ತೇವೆಂದರೆ ಮತ್ತೊಬ್ಬರು ಮಾಡುವದಿಲ್ಲವೆಂದು ಹೇಳಿತ್ತಾರೆ. ಆಯೋಧ್ಯೆಯ ಶ್ರೀರಾಮಮಂದಿರ ಉದ್ಘಾಟನೆಗೆ ಹೋಗುವದಿಲ್ಲ ಎನ್ನುತ್ತಾರೆ, ಮತ್ತೊಬ್ಬರು ಆಹ್ವಾನ ಬಂದಿಲ್ಲ ಅಂತಾರೆ. ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರೇ ಮತ ನೀಡಿದ್ದಾರೆನ್ನುವಂತೆ ಎಲ್ಲಿ ಅಲ್ಪಸಂಖ್ಯಾತರ ಓಟುಗಳು ಕೈತಪ್ಪುತ್ತವೊ ಎಂಬ ಆತಂಕದಿಂದ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭವನ್ನು ವಿರೋಧಿಸುತ್ತಿದ್ದಾರೆ. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪೂಜೆ ಮಾಡುವುದಾಗಿ ಹೇಳಿದರೆ, ನಮಗೆ ಆಹ್ವಾನ ನೀಡಿಲ್ಲವೆಂದು ಹೇಳುವ ಮೂಲಕ ಕಾಂಗ್ರೆಸ್ ಗೊಂದಲಕ್ಕೆ ಸಿಲುಕಿದೆ” ಎಂದರು.

“ಗೊಂದಲದ ಗೂಡಾಗಿರುವ ಕಾಂಗ್ರೆಸ್ ಪಕ್ಷ ರೈತರು, ಕಾರ್ಮಿಕರು, ಮಹಿಳೆಯರ ಜನವಿರೋಧಿ ಸರ್ಕಾರವಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹ

“ರಾಜ್ಯದ ಕೇಂದ್ರ ಸಚಿವರನ್ನು ಬದಲಾವಣೆ ಮಾಡುವ ವಿಚಾರ ಕೇಂದ್ರದ ವರಿಷ್ಠರಿಗೆ ಬಿಟ್ಟಿದ್ದು, ಲೋಕಸಭಾ ಚುನಾವಣೆಯಲ್ಲಿ ಯುವಕರಿಗೆ ಆದ್ಯತೆ ನೀಡಬೇಕೆನ್ನುವ ಒತ್ತಾಯವನ್ನು ಕೇಂದ್ರದ ವರಿಷ್ಟರಿಗೆ ತಿಳಿಸಲಾಗಿದೆ. ಪಕ್ಷವನ್ನು ಮೂರನೇ ಬಾರಿಗೆ ಅಧಿಕಾರಕ್ಕೆ ತರಲು ಬಿಜೆಪಿ ವರಿಷ್ಟರು ಎಲ್ಲ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ” ಎಂದರು.

ಈ ಸಂದರ್ಭದಲ್ಲಿ ಶಾಸಕರುಗಳಾದ ಡಾ ಶಿವರಾಜ ಪಾಟೀಲ್, ಮಾನಪ್ಪ ವಜ್ಜಲ, ಮಾಜಿ ಶಾಸಕ ಕೆ ಶಿವನಗೌಡ ನಾಯಕ, ದೊಡ್ಡಬಸವರಾಜ ಸಿಂಧನೂರು ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X