ರಾಯಚೂರು | ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

Date:

ಬಿಜೆಪಿ ನೇತೃತ್ವದ ಕೇಂದ್ರದ ಎನ್ ಡಿಎ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಾವಣೆ ವಿರೋಧಿಸಿ ರಾಯಚೂರು ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕ‌ ವತಿಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಯುಪಿಎ ಸರ್ಕಾರದಿಂದ ಜಾರಿಗೊಳಿಸಿದ್ದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರದ ಎನ್ ಡಿಎ ಸರ್ಕಾರ ಬದಲಾಯಿಸಿ ಗಾಂಧೀಜಿ ಅವರ ಹೆಸರು ತೆಗೆದು ಹಾಕಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾನಿರತರು ಮಹಾತ್ಮ ಗಾಂಧೀಜಿ ಅವರ ಪೋಸ್ಟರ್‌ಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪ್ರತಿಭಟನೆ ಉದ್ದೇಶಿಸಿ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ ಬೇಣ್ಣೆ ಅವರು ಮಾತನಾಡಿ, ಬಡವರ ಬದುಕಿಗೆ ಆಸರೆಯಾಗಿರುವ ನರೇಗಾ ಯೋಜನೆಯ ಹೆಸರನ್ನು ಬದಲಿಸಿ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ)” (VB-G RAM G) ಎಂದು ಮಾಡಿರುವುದು ಖಂಡನೀಯ. ಭಾರತ ಮಾತ್ರವಲ್ಲದೇ ಇಡೀ ವಿಶ್ವಕ್ಕೆ ಮಹಾತ್ಮಾ ಗಾಂಧಿ ಅವರು ಏನು ಎನ್ನುವುದು ಗೊತ್ತಿದೆ. ಬಿಜೆಪಿ ಸರ್ಕಾರ ಆರ್ ಎಸ್ಎಸ್ ನಾಯಕರನ್ನು ಮೆಚ್ಚಿಸಲು ಮಹಾತ್ಮಾ ಗಾಂಧಿ ಅವರ ಹೆಸರು ತೆಗೆದುಹಾಕಿದೆ ಎಂದು ದೂರಿದರು.

ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಮುಂದುವರಿಸದಿದ್ದರೆ ದೆಹಲಿ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ನರೇಗಾ ಯೋಜನೆ ಬಡವರ ಪರದ ಉದ್ಯೋಗ ಖಾತ್ರಿ ಯೋಜನೆ. ಅದರ ಹೆಸರನ್ನು ಬದಲಿಸುವ ಅಗತ್ಯವೇನು? ಗಾಂಧೀಜಿ ಅವರ ಹೆಸರನ್ನು ತೆಗೆದುಹಾಕುವ ಮೂಲಕ ಬಿಜೆಪಿ ಸರ್ಕಾರ ದೇಶದ ಮಹಾನ್ ನಾಯಕನಿಗೆ ಅಪಮಾನ ಮಾಡುತ್ತಿದೆ ಎಂದು ಅವರು ಹೇಳಿದರು.

ಪ್ರತಿಭಟನಾಕಾರರು ನರೇಗಾ ಯೋಜನೆಯ ಹೆಸರನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು ಮತ್ತು ಬಡವರ ಹಿತಕ್ಕೆ ವಿರುದ್ಧವಾದ ಯಾವುದೇ ಬದಲಾವಣೆಗಳನ್ನು ಕೈ ಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಮೊದಲಿನಿಂದಲೂ ಆರ್‌ಎಸ್‌ಎಸ್ ಮತ್ತು ಬಿಜೆಪಿಗೆ ಮಹಾತ್ಮ ಗಾಂಧಿ ಅವರನ್ನು ಕಂಡರೆ ಆಗಲ್ಲ. ಹಾಗಾಗಿಯೇ ನರೇಗಾ ಯೋಜನೆಯಿಂದ ಮಹಾತ್ಮಗಾಂಧಿ ಅವರ ಹೆಸರನ್ನು ಕೈಬಿಟ್ಟು ವಿಬಿ-ಜಿರಾಮ್ ಜಿ ಹೆಸರನ್ನು ಇಟ್ಟಿದೆ. ಇದು ಸರಿಯಲ್ಲ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟಿರುವುದು ದ್ವೇಷದ ರಾಜಕಾರಣ ಎಂದು ಪ್ರತಿಭಟನಾನಿರತ ಕಾಂಗ್ರೆಸಿಗರು ದೂರಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಂಪಿಸಿಎಲ್- ಕೃಷ್ಣಬ್ರಿಡ್ಜ್ ರಸ್ತೆಯಲ್ಲಿ ನಿಲ್ಲದ ರಸ್ತೆ ಅಪಘಾತ

ಪ್ರತಿಭಟನೆತಲ್ಲಿ ಆರತಿ ಚಂದ್ರಶೇಖರ, ಸುರೇಖಾ, ಕವಿತಾ, ಪ್ರತಿಭಾರೆಡ್ಡಿ ವಂದಾನ, ರೇಹಾನ ಬೇಗಂ ಹರಿವಿನ್ ಬೇಗಂ.ಪಿ ಮಾದೇವಿ, ಲಕ್ಷ್ಮಿ ನರಸಿಂಹಲುಬಿ.ಉಮಾ ಜ್ಯೋತಿ ಅಮಿತಾ ಬೇಗಂ, ನೀರ್ಮಲಾ ಭಂಡಾರಿ ಶಾಬನ ಬೇಗಂ, ಸುರೇಖಾ ಸೇರಿದಂತೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...