ರಾಯಚೂರು | ಬಿಜೆಪಿ–ಜೆಡಿಎಸ್ ಪಾದಯಾತ್ರೆಯಿಂದ ಸಿದ್ದರಾಮಯ್ಯನವರಿಗೆ ಮಾನಸಿಕ ಹಿಂಸೆ: ಕಾಂಗ್ರೆಸ್ ಮಹಿಳಾ ಘಟಕ

Date:

ಮುಡಾ ಹಗರಣ ಮುಂದಿಟ್ಟುಕೊಂಡು ಬಿಜೆಪಿ–ಜೆಡಿಎಸ್ ನಾಯಕರು ಪಾದಯಾತ್ರೆ ಮಾಡುವ ಮೂಲಕ ಸಿದ್ದರಾಮಯ್ಯನವರಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ರಾಯಚೂರು ಕಾಂಗ್ರೆಸ್ ಮಹಿಳಾ ಘಟಕದ ಮುಖಂಡರಾದ ಶ್ರೀದೇವಿ ನಾಯಕ ಆರೋಪಿಸಿದರು.

ರಾಯಚೂರಿನ ಪ್ರೆಸ್‌ ಕ್ಲಬ್‌ನಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯನವರ ಪತ್ನಿಯ ನಿವೇಶನ ಮುಡಾದಿಂದ ಬೇರೆಯವರಿಗೆ ಹಂಚಿಕೆ ಮಾಡಿದೆ. ಆನಂತರ ಬಿಜೆಪಿಯೇ ರೂಪಿಸಿದ 50;50 ಅನುಪಾತದ ನಿಯಮದ ಪ್ರಕಾರವೂ ಪರಿಹಾರ ನೀಡದೇ ಶೇ 38 ರಷ್ಟು ಮಾತ್ರ ಪರಿಹಾರ ನೀಡಿದ್ದಾರೆ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರಿಗೆ ಅನ್ಯಾಯವಾದರೂ ಸಿದ್ದರಾಮಯ್ಯನವರ ವಿರುದ್ಧ ಹೋರಾಟ ಮಾಡಿ ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಮುಡಾ ಹಗರಣಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತರ ದೂರಿಗೆ ಸ್ಪಂದಿಸಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೊಟೀಸ್ ನೀಡಿದ್ದು ಖಂಡನೀಯ. ರಾಜ್ಯಪಾಲರು ಬಿಜೆಪಿಯಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ಬಿಗ್‌ ಬ್ರೇಕಿಂಗ್‌: ಎಚ್‌ಡಿಕೆ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿಯನ್ನು 10 ತಿಂಗಳಿಂದ ಬಚ್ಚಿಟ್ಟಿದ್ದ ರಾಜ್ಯಪಾಲ

ಹಿಂದೆ ಜೆಡಿಎಸ್ ವರಿಷ್ಠ ದೇವೆಗೌಡರ ಕುಟುಂಬದಿಂದ ಮುಡಾ ಅಕ್ರಮ ನಿವೇಶನ ಪಡೆದ, ಡಿನೋಟಿಫೈ ಮಾಡಿದ ಆರೋಪವಿತ್ತು. ಇದನ್ನು ಬಿಜೆಪಿಯ ಅವಧಿಯಲ್ಲಿ ತನಿಖೆ ನಡೆಸದೇ, ಈಗ ಸಿದ್ದರಾಮಯ್ಯನವರನ್ನು ಗುರಿಯಾಗಿಸಿ ಪಾದಯಾತ್ರೆ ಮಾಡುವುದರ ಹಿಂದೆ ದುರುದ್ದೇಶ ಹೊಂದಿದ್ದಾರೆ ಎಂದು ಆರೋಪಿಸಿದರು.

ಪಕ್ಷದ ಪದಾಧಿಕಾರಿಗಳಾದ ಮಂಜುಳಾ ಅಮರೇಶ, ಶಶಿಕಲಾ ಭೀಮರಾಯ, ಪ್ರೇಮಲತಾ, ಖಾಸಿಂಬೀ, ಭಾರತಿ ಇದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಬೀದಿ ನಾಯಿಗಳ ಸರ್ವೆ, ಸಂತಾನ ನಿಯಂತ್ರಣ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳಲ್ಲಿ ಬೀದಿ ನಾಯಿಗಳ ಸಮೀಕ್ಷೆ ಕಾರ್ಯವನ್ನು 15 ದಿನದೊಳಗಾಗಿ...

ಶಿರಾಡಿ ಘಾಟ್‌ನಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಸಾವು; ಐವರಿಗೆ ಗಾಯ

ಎರಡು ಕಾರುಗಳು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ...

ಬೀದರ್ | ಸೆ.15ಕ್ಕೆ ರಾಜ್ಯಾದ್ಯಂತ ಪ್ರಜಾಪ್ರಭುತ್ವ ದಿನಾಚರಣೆ : ಸಚಿವ ಈಶ್ವರ ಖಂಡ್ರೆ

ನಮ್ಮ ಸರಕಾರದ ತೀರ್ಮಾನದಂತೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸೆ.15ರಂದು ಕರ್ನಾಟಕ ರಾಜ್ಯದಾದ್ಯಂತ...

ಮಂಡ್ಯ | ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರ ಕಡೆಗಣಿಸಿದ ಜಿಲ್ಲಾಡಳಿತ: ಕಾರಸವಾಡಿ ಮಹದೇವ

ಈವೆಂಟ್ ಮ್ಯಾನೆಜ್‌ಮೆಂಟ್‌ ಹೆಸರಲ್ಲಿ ಕಮಿಷನ್ ಆಸೆಗೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರನ್ನು...