ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

Date:

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ ರೇಕಲಮರಡಿ, ಲಿಂಗಸುಗೂರು, ಗೊರೆಬಾಳ ಬಳಿಕ ಜೂಲಗುಡ್ಡದಲ್ಲೂ ಜೀವಜಲವು ವಿಷಜಲವಾಗಿದೆ. ರೇಕಲಮರಡಿ ಗ್ರಾಮದಲ್ಲಿ ಒಳೆದ ವಾರ ಕಲುಷಿತ ನೀರು ಕುಡಿದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು. ಬಾಲಕನೊಬ್ಬ ಮೃತಪಟ್ಟಿದ್ದ. ಇದೀಗ, ಲಿಂಗಸುಗೂರು ತಾಲೂಕಿನ ಜೂಲಗುಡ್ಡ ಗ್ರಾಮದಲ್ಲೂ ಕಲುಷಿತ ನೀರು ಕುಡಿದು 8 ಮಂದಿ ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ‌

- Advertisement -

ಕುಡಿಯುವ ನೀರಿನ ಪೈಪ್ ಒಡೆದು ಇದಕ್ಕೆ ಕಲುಷಿತ ನೀರು ಸೇರಿದ ಪರಿಣಾಮ ಕಳೆದ ಮೂರು ದಿನಗಳಿಂದ ಈ ನೀರು ಕುಡಿದ ಗ್ರಾಮಸ್ಥರಲ್ಲಿ ತೀವ್ರ ವಾಂತಿ ಭೇದಿ ಕಾಣಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಚರಂಡಿ ಮಗ್ಗುಲಲ್ಲೇ ಕುಡಿಯುವ ನೀರಿನ ಪೈಪ್ ಹಾದು ಹೋಗಿದ್ದು, ಮೂರು ಕಡೆ ಪೈಪ್‌ಗೆ ಹಾನಿಯಾಗಿದೆ. ಕುಡಿಯುವ ನೀರಿನ ‌ಪೈಪ್‌ನಲ್ಲಿ ಸಣ್ಣ ಸಣ್ಣ ತೂತಗಳಾಗಿವೆ. ಈ ಮೂಲಕ ಚರಂಡಿ ನೀರು ಮಿಶ್ರಣವಾಗಿರಬಹುದೆಂದು ಅಂದಾಜಿಸಲಾಗಿದೆ. ಸುಮಾರು 200 ಮನೆಗಳಿಗೆ ಚರಂಡಿ ಮಿಶ್ರಿತ ನೀರು ಪೂರೈಕೆ ಆಗಿದೆ. ಈ ನೀರನ್ನು ಕುಡಿದವರು ಅಸ್ವಸ್ಥಗೊಂಡಿದ್ದಾರೆ.

ರೇಕಲಮರಡಿ: ನೀರು ಸರಬರಾಜು ಸ್ಥಗಿತ

ರೇಕಲಮರಡಿ ಗ್ರಾಮದಲ್ಲಿ ಜನರು ಕಲುಷಿತಗೊಂಡ ನೀರು ಸೇವಿಸಿದ್ದರಿಂದ ಗ್ರಾಮಸ್ಥರು ಅಸ್ವಸ್ಥರಾಗಿದ್ದರು. ಸಿರವಾರ ಸರ್ಕಾರಿ ಆಸ್ಪತ್ರೆ ಸೇರಿದ್ದ ಹನುಮೇಶ್‌ (5) ಎಂಬ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮೃತಪಟ್ಟಿದ್ದ. ಇನ್ನು ಹನುಮೇಶ್‌ನ ಅಕ್ಕ ನರಸಮ್ಮ (8) ಕೂಡ ಅಸ್ವಸ್ಥಗೊಂಡಿದ್ದು, ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಲುಷಿತ ನೀರಿಗೆ ಬಾಲಕ ಬಲಿ; 30 ಮಂದಿ ಅಸ್ವಸ್ಥ

ಸದ್ಯ ರೆಕಲಮರಡಿ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಸ್ಥಗಿತಗೊಂಡಿದೆ. ಬೇರೆ ಗ್ರಾಮಗಳಿಂದ ಕುಡಿಯುವ ನೀರನ್ನು ವಾಟರ್ ಟ್ಯಾಂಕ್‌ಗಳ ಮೂಲಕ ತಂದು ಪೂರೈಕೆ ಮಾಡಲಾಗುತ್ತಿದೆ. ಇತ್ತ ಗ್ರಾಮದಲ್ಲಿ ಚಿಕಿತ್ಸಾ ಕ್ಯಾಂಪ್ ನಿರ್ಮಾಣ ಮಾಡಿದ್ದು, 2 ಆ್ಯಂಬುಲೆನ್ಸ್, ಹಿರಿಯ ವೈದ್ಯರು, ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗೆ ತೆರಳಿ ಗ್ರಾಮಸ್ಥರ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಗ್ರಾಮಸ್ಥರ ಆರೋಗ್ಯ ಸ್ಥಿತಿ ಹತೋಟಿಗೆ ಬಂದಿದ್ದು, ಸ್ಥಳಕ್ಕೆ ಶಾಸಕಿ ಕರಿಯಮ್ಮ ಜಿ ನಾಯಕ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...