‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

Date:

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ. ವರಿಷ್ಠ ನಾಯಕರನ್ನು ಭೇಟಿ ಮಾಡಿ, ಟಿಕೆಟ್‌ಗೆ ಮನವಿ ಮಾಡಿದ್ದೇನೆ. ಅನೇಕ ನಾಯಕರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮಾಜಿ ಸಂಸದ, ಬಿಜೆಪಿ ಮುಖಂಡ ಬಿ.ವಿ ನಾಯಕ ತಿಳಿಸಿದರು.

- Advertisement -

ರಾಯಚೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದಲ್ಲಿದ್ದ ನಾನು ಅನೇಕ ಕಾರಣದಿಂದ ಪಕ್ಷ ತೊರೆದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾನ್ವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದೇನೆ. ನನಗೆ ಪಕ್ಷಾತೀತವಾಗಿ ಅನೇಕ ಅಭಿಮಾನಿಗಳಿದ್ದು ಅವರ ಅಭಿಲಾಷೆಯಂತೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿಲು ಟಿಕೆಟ್‌ಗಾಗಿ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದೇನೆ. ಕೇಂದ್ರದಲ್ಲಿ ಈ ಬಾರಿ ಪುನಃ ಎನ್‌ಡಿಎ ಸರ್ಕಾರ ರಚನೆಯಾಗಲಿದೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ನನಗೆ ಟಿಕೆಟ್ ನೀಡದಿದ್ದರು ವರಿಷ್ಠರ ನಿರ್ಧಾರಕ್ಕೆ ಬದ್ದನಾಗಿ ಪಕ್ಷಕ್ಕಾಗಿ ದುಡಿಯುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದು, ಆಗ ಮೋದಿಯ ಅಲೆಯಲ್ಲಿಯೇ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಗೆಲುವು ಸಾಧಿಸಿದ್ದರು. ಈಗಲೋ ಮೋದಿ ಅಲೆಯಿದೆ. ವಿಶ್ವಮಟ್ಟದ ನಾಯಕರಾಗಿ ನರೇಂದ್ರ ಮೋದಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.

ರಾಜಕೀಯ ನೆಲೆ ಕಂಡುಕೊಳ್ಳಲು ಪಕ್ಷ ಬದಲಾವಣೆ ಮಾಡಿದ್ದೇನೆ. ನನಗೆ ದೇವದುರ್ಗ, ರಾಯಚೂರು, ಶಹಪುರ, ಮಾನ್ವಿಯಲ್ಲಿ ದೊಡ್ಡ ಅಭಿಮಾನ ಬಳಗವಿದೆ. ನಾನು ಸಂಸದನಾಗಿ ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆ, ಎಸ್‌ಸಿಪಿ, ಟಿಎಸ್‌ಪಿ ಯೋಜನೆಗೆ ಅನುದಾನ, ಕಾಡಾ ಕಚೇರಿ ಸ್ಥಾಪನೆ, ರಾಯಚೂರು ರಸ್ತೆ ಸುಧಾರಣೆಗೆ ಅನುದಾನ ತಂದಿದ್ದೇನೆ. ಹೀಗೆ ಅನೇಕ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಟಿಕೆಟ್ ನೀಡಿದರೆ ಗೆಲುವು ಸಾಧಿಸುತ್ತೇನೆ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ವೇಳೆ ಮಾಜಿ ಶಾಸಕ ಬಸವನಗೌಡ ಬ್ಯಾಗವಾಟ್, ಮಲ್ಲಿಕಾರ್ಜುನ, ಶರಣಪ್ಪ ಗೌಡ, ಅಯ್ಯಪ್ಪ ಮ್ಯಾಕಲ್, ಜೆ.ಸುಧಾಕರ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...