ರಾಯಚೂರು | ದೇಶದ ಅಭಿವೃದ್ಧಿಗೆ ಸಂಘ ಸಂಸ್ಥೆಗಳ ಸಹಕಾರ ಅಗತ್ಯ: ಸತ್ಯ ನಾರಾಯಣರಾವ್

Date:

Advertisements

ದೇಶ ಅಭಿವೃದ್ಧಿಯಾಗಲು ಸರ್ಕಾರದ ಜವಾಬ್ದಾರಿಯೊಂದಿಗೆ ಇನ್ನಿತರ ಸಂಘ ಸಂಸ್ಥೆಗಳ ಸಹಕಾರವೂ ಅತ್ಯಗತ್ಯವಾಗಿರುತ್ತದೆ ಎಂದು ರಾಯಚೂರು ಜಿಲ್ಲಾ ಪೊಲೀಸ್ ಉಪ ಅಧೀಕ್ಷಕ ಸತ್ಯನಾರಾಯಣರಾವ್ ಅಭಿಪ್ರಾಯಪಟ್ಟರು.

ಮಾ ಆಶಾಪುರಿ ಕಲ್ಯಾಣ ಮಂಟಪದಲ್ಲಿ ರೋಟರಿ ಕ್ಲಬ್ ರಾಯಚೂರು ವಲಯ, ಇನ್ನರ್‌ವೀಲ್ ಕ್ಲಬ್ ಹಾಗೂ ಬಿಜಿಆರ್ ಮೈನಿಂಗ್ ಮತ್ತು ಇನ್ಫ್ರಾ ಲಿಮಿಟೆಡ್ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಸಬಲೀಕರಣ ಯೋಜನೆಯಡಿ ಮಹಿಳೆಯರಿಗೆ ಹೊಲಿಗೆ ಯಂತ್ರಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ನಗರ ಹಾಗೂ ಗ್ರಾಮೀಣ ಭಾಗದ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವರಿಗೆ ಸ್ವಯಂ ಉದ್ಯೋಗ ಸೃಷ್ಟಿಸಿ, ಕೌಟುಂಬಿಕ ಭದ್ರತೆ ನೀಡಲು ರೋಟರಿ ಕ್ಲಬ್‌ನಿಂದ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡುತ್ತಿದ್ದು, ವಿತರಣೆ ಜೊತೆಗೆ ಮಹಿಳೆಯರಿಗೆ ಹೊಲಿಗೆ ತರಬೇತಿಯನ್ನೂ ನೀಡಬೇಕು. ಇದರಿಂದ ಮಹಿಳೆಯರಿಗೆ ಜೀವನ ಭದ್ರತೆ ನೀಡಿದಂತಾಗುತ್ತದೆ” ಎಂದರು.

“ಜಿಲ್ಲೆಯು ಆರ್ಥಿಕವಾಗಿ ಬಡವಾಗಿರಬಹುದು ಆದರೆ ಹೃದಯ ವೈಶಾಲ್ಯತೆಯಲ್ಲಿ ಅತ್ಯಂತ ಶ್ರೀಮಂತ ಜಿಲ್ಲೆಯಾಗಿದೆ. ಇಂತಹ ಜಿಲ್ಲೆಯಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಸಂಘ ಸಂಸ್ಥೆಗಳು ಮುಂದಾಗಿರುವುದು ಶ್ಲಾಘನೀಯ. ಇದರ ಜೊತೆಗೆ ಆರೋಗ್ಯ ಮತ್ತು ಶಿಕ್ಷಣ ರಂಗಗಳನ್ನು ಪ್ರೋತ್ಸಾಹಿಸಲು ಸಂಸ್ಥೆಗಳು ಮುಂದಾಗಬೇಕಿದೆ. ಹೊಲಿಗೆ ಯಂತ್ರಗಳನ್ನು ಪಡೆದ ಮಹಿಳೆಯರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ವಿತರಣೆ ಮಾಡಿದ ಸಂಸ್ಥೆಗಳು ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡಿ, ಗಾರ್ಮೆಂಟ್ಸ್‌ಗಳನ್ನು ಸ್ಥಾಪಿಸಿ ಅಲ್ಲಿಯೇ ಉದ್ಯೋಗ ಒದಗಿಸಬೇಕು” ಎಂದು ಮನವಿ ಮಾಡಿದರು.

ರೋಟರಿ ಕೇಂದ್ರ ಅಧ್ಯಕ್ಷ ಶರಣಬಸವ ಜೋಳದಡಗಿ ಮಾತನಾಡಿ, “ಮಹಿಳೆಯರಿಗೆ ನೀಡಲಾಗುತ್ತಿರುವ ಹೊಲಿಗೆ ಯಂತ್ರಗಳು ಅವರ ಸ್ವಾಭಿಮಾನದ ಸಂಕೇತವಾಗಿದೆ. ಎಷ್ಟೇ ಕಷ್ಟ ಕಾಲ ಎದುರಾದರೂ ಕುಟುಂಬವನ್ನು ನಡೆಸುವ ಮಹಿಳೆಯರಿಗೆ ಹೊಲಿಗೆ ಯಂತ್ರಗಳು ತುಂಬಾ ಸಹಕಾರಿಯಾಗಲಿವೆ” ಎಂದು ತಿಳಿಸಿದರು.

ರೋಟರಿ ಇಂಟರ್‌ನ್ಯಾಷನಲ್‌ನ ಗವರ್ನರ್ ತ್ರಿವಿಕ್ರಮ ಜೋಶಿ ಮಾತನಾಡಿ, “ಅಗತ್ಯ ಮತ್ತು ಬಡ ಮಹಿಳೆಯರಿಗೆ ನೀಡಲಾಗುತ್ತಿರುವ ಹೊಲಿಗೆ ಯಂತ್ರಗಳು ಮಹಿಳೆಯರಿಗೆ ಉಪಜೀವನ ನಡೆಸಲು ಸಹಕಾರಿಯಾಗಲಿದೆ. ಈಗಾಗಲೇ ರೋಟರಿ ಕ್ಲಬ್‌ನಿಂದ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಮುಂದೆ ಇನ್ನೂ ಹೆಚ್ಚಿನ ಸಮಾಜಮುಖಿ ಕಾರ್ಯಗಳು ಆಗಬೇಕಿದೆ” ಎಂದರು.

ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ 70 ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.

ಇದನ್ನೂ ಓದಿ: ರಾಯಚೂರು | ಯುವಕರು ಉದ್ಯೋಗ ಮೇಳಗಳ ಪ್ರಯೋಜನ ಪಡೆದುಕೊಳ್ಳಿ: ಸಚಿವ ಶರಣಪ್ರಕಾಶ ಪಾಟೀಲ

Advertisements

ಈ ವೇಳೆ ಬಿಜಿಆರ್ ಮೈನಿಂಗ್ ಮತ್ತು ಇನ್ಫ್ರಾ ಲಿಮಿಟೆಡ್‌ನ ನಿರ್ದೇಶಕ ವಿ.ಬಾಲಕೋಟಿ ರೆಡ್ಡಿ, ಜುಬ್ಲಿ ಹಿಲ್ಸ್ ರೋಟರಿ ಕ್ಲಬ್‌ನ ಲಕ್ಷಿರೆಡ್ಡಿ, ರೋಟರಿ ಇಂಟರ್‌ನ್ಯಾಷನಲ್ ಸಹಾಯಕ ಗವರ್ನರ್ ಎಂ.ಕೆ.ವೆಂಕಟೇಶ, ರೋಟರಿ ಕ್ಲಬ್‌ನ ಯೋಜನಾ ಅಧ್ಯಕ್ಷ ಶಿವಗಿರೀಶ, ಪದಾಧಿಕಾರಿಗಳಾದ ಪ್ರಬಣ್ಣಗೌಡ, ಹನುಮಂತ ರೆಡ್ಡಿ, ಮಲ್ಲಿಕಾರ್ಜುನ, ಲಲಿತಾ ಸತ್ಯಕುಮಾರ ಸೇರಿದಂತೆ ಕ್ಲಬ್‌ನ ಪದಾಧಿಕಾರಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X