ರಾಯಚೂರು | ಘನತ್ಯಾಜ್ಯ ಸಂಗ್ರಹ ಘಟಕ ಸ್ಥಳಾಂತರಕ್ಕೆ ಸಿಪಿಐಎಂಎಲ್ ಒತ್ತಾಯ

Date:

‌ಜನನಿಬಿಡ ಸ್ಥಳದಲ್ಲಿರುವ ಸಿಂಧನೂರು ಘನತ್ಯಾಜ್ಯ ಸಂಗ್ರಹ ಘಟಕವನ್ನು ಬೇರೆಡೆಗೆ ಸ್ಥಳಾಂತರ ಮಾಡಿ, ಜನರ ಜೀವ, ಬೆಳೆ ಮತ್ತು ಪರಿಸರ ಕಾಪಾಡಬೇಕೆಂದು ಒತ್ತಾಯಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ತಾಲೂಕು ಘಟಕವು ಜಿಲ್ಲಾಧಿಕಾರಿ ನಿತೀಶ್ ಕೆ ಅವರಿಗೆ ಮನವಿ ಸಲ್ಲಿಸಿತು.

“ಸಿಂಧನೂರು ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಘನತ್ಯಾಜ್ಯ ಕೂಡಾ ವರ್ಷದಿಂದ ವರ್ಷಕ್ಕೆ ದುಪ್ಪಟ್ಟಾಗುತ್ತಿದೆ. ಮಲ್ಲಾಪುರ-ದೇವರಗುಡಿ ರಸ್ತೆಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಸ್ಟೋರೇಜ್ ಶೆಡ್ ಗೆ ಅವೈಜ್ಞಾನಿಕವಾಗಿ ಕಸ ಎಸೆಯಲಾಗುತ್ತಿದೆ. ನಗರದಿಂದ 15 ಕೀಮಿ ದೂರದಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣ ಮಾಡಬೇಕೆಂಬ ನಿಯಮವಿದ್ದರೂ ಉಲ್ಲಂಘನೆ ಮಾಡಲಾಗಿದೆ. ಕೂಡಲೇ ಕಸ ವಿಲೇವಾರಿ ಘಟಕದ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು” ಎಂದು ಸಿಪಿಐಎಂಎಲ್‌ ಮುಖಂಡರು ಆಗ್ರಹಿಸಿದರು.

“ದಟ್ಟವಾದ ಕಲುಷಿತ ಗಾಳಿಯು ಜನರ ಆರೋಗ್ಯದ ಮೇಲೆ ಪರಿಸರದ ಜೀವ ಸಂಕುಲದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಇದಕ್ಕೆಲ್ಲಾ ನಗರಸಭೆಯೇ ನೇರವಾಗಿ ಹೊಣೆಯಾಗಲಿದೆ. ವಿಷದ ಗಾಳಿಯಿಂದ ಬಾಧಿತರಾದ ಜನರ ಆರೋಗ್ಯದ ವೆಚ್ಚವನ್ನು ಹಾಗೂ ಬೆಳೆ ನಷ್ಟವನ್ನು ನಗರಸಭೆಯವರೇ ಭರಿಸಬೇಕು” ಎಂದು ಒತ್ತಾಯಿಸಿದರು.

- Advertisement -

ಈ ಸುದ್ದಿ ಓದಿದ್ದೀರಾ?: ರಾಯಚೂರು | ಮಾಜಿ ಶಾಸಕನ ಬೆಂಬಲಿಗರಿಂದ ದೌರ್ಜನ್ಯ; ದಯಾಮರಣ ಕೋರಿ ಧರಣಿ ಕುಳಿತ ಕುಟುಂಬ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ವೇಳೆ ಎಂ.ಗಂಗಾಧರ, ವೆಂಕನಗೌಡ ಮಲ್ಲಾಪುರ, ಅಮರೇಗೌಡ ವನಸಿರಿ ಮಲ್ಲಾಪುರ, ಪರಶುರಾಮ ಮಲ್ಲಾಪುರ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...