ಕಾಲುವೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ ಘಟನೆ ದೇವದುರ್ಗ ತಾಲ್ಲೂಕು ಆಲ್ಕೋಡ್ ಗ್ರಾಮ ಪಂಚಾಯತ ವ್ಯಾಪ್ತಿಯ ಔಡಲಗುಡ್ಡ ಗ್ರಾಮದಲ್ಲಿ ನಡೆದಿದೆ.
ಶಿವರಾಜ ದೊರೆ (38) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಕಾಲುವೆಯಲ್ಲಿ ಹಾಕಿದ ಮೋಟಾರ್ ನಲ್ಲಿ ಕಸ ತೆಗೆಯಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಮಹಿಳೆ ಸಾವು
ಘಟನೆ ತಿಳಿದು ಗ್ರಾಮಸ್ಥರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅರಕೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
