ರಾಯಚೂರಿನಲ್ಲಿ ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದ ಡಿ ದರ್ಜೆಯ ಸಿಬ್ಬಂದಿಯೊಬ್ಬರು ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಎಸಿ ಕಚೇರಿಯ ಲ್ಯಾಂಡ್ ರೆಕಾರ್ಡ್ ಕಿಪರ್ ಹುದ್ದೆಯಲ್ಲಿ ಡಿ ದರ್ಜೆ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದ ವಾಸಿಂ ( 42) ಆತ್ಮಹತ್ಯೆ ಮಾಡಿಕೊಂಡಿರುವ ಸಿಬ್ಬಂದಿ. ಕೂಲೆಂಟ್ ವಾಟರ್ ಬಾಟಲ್ ನಲ್ಲಿ ಆ್ಯಸಿಡ್ ಬೇರಸಿ ಸೇವಿಸಿದ್ದ ವಾಸಿಂ ನಗರದಲ್ಲಿರೋ ಈಜುಕೊಳದ ಬಳಿ ತೆರಳಿ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದು ಬಂದಿದೆ.
ರಾಯಚೂರಿನ ಸಂಕಲ್ಪ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದನ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ.
ರಾಯಚೂರು ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದ ಘಟನೆಯಾಗಿದ್ದು ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿದ್ದಾರೆ.