ದಲಿತ ಮುಖಂಡರೊಬ್ಬರನ್ನು ಮಾರಕಾಸ್ರ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ. ಹತ್ಯೆಗೆ ಹಳೇ ವೈಷಮ್ಯ ಕಾರಣ ಎಂದು ಹೇಳಲಾಗಿದೆ.
ತಾಲೂಕಿನ ಮದ್ಲಾಪುರ ಗ್ರಾಮದ ಬಳಿ ಘಟನೆ ನಡೆಸಿದ್ದು, ದಲಿತ ಮುಖಂಡ ಪ್ರಸಾದ್ ಹತ್ಯೆಯಾಗಿರುವ ದುರ್ದೈವಿ. ಅವರು ಭತ್ತದ ಗದ್ದೆಗೆ ನೀರು ಕಟ್ಟಲು ತೆರಳುತ್ತಿದ್ದಾಗ ಬೈಕ್‌ನಲ್ಲಿ ತೆರಳಿದ್ದರು. ಈ ವೇಳೆ, ಮೂವರು ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ, ಮುಂಗೈ ತುಂಡರಸಿ ಕೊಲೆ ಮಾಡಿದ್ದಾರೆ.
ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳು ರಬಣಕಲ್ ಗ್ರಾಮದವರು ಎಂದು ಆರೋಪಿಸಲಾಗಿದೆ
ಘಟನಾ ಸ್ಥಳಕ್ಕೆ ರಾಯಚೂರು SP ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾನ್ವಿ ತಾಲೂಕು ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.
ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹತ್ಯೆಯನ್ನು ಖಂಡಿಸಿ ದಲಿತ ಸಂಘಟನೆಗಳು ಮಾನ್ವಿ ತಾಲೂಕಿನ ಸರ್ಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿವೆ.