ರಾಯಚೂರು | ಅಂಬೇಡ್ಕರ್ ಭಾವಚಿತ್ರ ಇಟ್ಟು ಧ್ವಜಾರೋಹಣ ನಡೆಸುವಂತೆ ಆಗ್ರಹ

Date:

ಸ್ವಾತಂತ್ರ‍್ಯ ದಿನಾಚರಣೆ ದಿನ ನಗರಸಭೆಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಡದೇ ಅಪಮಾನ ಮಾಡಿದ್ದು, ಈ ಭಾಗವಾಗಿ ಶನಿವಾರ ರಾಯಚೂರು ನಗರಸಭೆಯಲ್ಲಿ ʼನಮ್ಮ ಭೂಮಿ ನಮ್ಮ ಮಣ್ಣುʼ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಧ್ವಜಾರೋಹಣ ನಡೆಸಬೇಕು ಎಂದು ಆಗ್ರಹಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರಿಗೆ ಮನವಿ ಸಲ್ಲಿಸಿದರು.

“ಸ್ವಾತಂತ್ರ‍್ಯ ದಿನಾಚರಣೆ ದಿನದಂದು ನಗರಸಭೆ ಆವರಣದಲ್ಲಿ ಧ್ವಜಾರೋಹಣದ ವೇಳೆ ಅಂಬೇಡ್ಕರ್ ಭಾವಚಿತ್ರ ಇಡದೇ ನಗರಸಭೆ ಪೌರಾಯಕ್ತರು ಅವಮಾನ ಮಾಡಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಜಿಲ್ಲಾಧಿಕಾರಿ ಮಾತನಾಡಿದ್ದು, “ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮ ವಹಿಸಲಾಗುತ್ತದೆ. ಅಂಬೇಡ್ಕರ್ ಅವರ ಭಾವಚಿತ್ರ ಇಡಲು ಅದೇಶವಿದ್ದು, ಕೆಲ ಇಲಾಖೆಗಳು ಇಡದೇ ಇರುವುದರಿಂದ ನೊಟೀಸ್ ಜಾರಿ ಮಾಡಲಾಗುವುದು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಎಂ ಆರ್ ಬೇರಿ ಮಾತನಾಡಿ, “ನಗರಸಭೆ ಆವರಣದಲ್ಲಿ ʼನಮ್ಮ ಭೂಮಿ ನಮ್ಮ ಮಣ್ಣು ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಧ್ವಜಾರೋಹಣ ಹಾಗೂ ಸಂವಿಧಾನ ಪೀಠಿಕೆ ಬೋಧನೆ ಮಾಡಲಾಗುತ್ತದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಬೆಳಿಗ್ಗೆ ಎಲ್ಲ ಸಂಘಟನೆಗಳ ಮುಖಂಡರು, ಅಧಿಕಾರಿಗಳು ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಅನಧಿಕೃತ ಕಟ್ಟಡ; ತೆರವಿಗೆ ಕರವೇ ಆಗ್ರಹ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ದುರುಗೇಶ, ರವೀಂದ್ರನಾಥ ಪಟ್ಟಿ, ಎಸ್ ರಾಜು, ಎಂ ಈರಣ್ಣ, ಶೇಖರ ರಾಂಪುರ, ವಿಶ್ವನಾಥ ಪಟ್ಟಿ, ಹೇಮರಾಜ ಅಸ್ಕಿಹಾಳ, ಅನಿಲ್ ಕುಮಾರ, ರಾಘವೇಂದ್ರ ಬೋರಡ್ಡಿ, ಮಲ್ಲೇಶ ಕೊಲಿಮಿ, ಭರತ ಕುಮಾರ, ಚನ್ನಬಸವ ಯಕ್ಲಾಸಪುರು, ಮೌನೇಶ ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೀಟ್ ಅವ್ಯವಹಾರ: ನ್ಯಾಯಾಂಗ ತನಿಕೆಗೆ ಡಿವಿಪಿ ಆಗ್ರಹ

ನೀಟ್‌ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ, ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು....

ದರ್ಶನ್ ಪ್ರಕರಣ | ವಿಶೇಷ ಪ್ರಾಸಿಕ್ಯೂಟ‌ರ್ ಆಗಿ ಪಿ ಪ್ರಸನ್ನ ಕುಮಾರ್‌ ನೇಮಕ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 19 ಆರೋಪಿಗಳು...