ರಾಯಚೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪ್ರವೇಶ ಶುಲ್ಕವನ್ನು ಕಡಿಮೆ ಮಾಡಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳ ಅಂಕಪಟ್ಟಿ ಮುದ್ರಿಸಿ ಒದಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ತಹಶೀಲ್ದಾರ್ ಪ್ರಕಾಶ ಬುಳ್ಳ ಅವರಿಗೆ ಮನವಿ ಸಲ್ಲಿಸಲಾಯಿತು.
ರಾಯಚೂರು ವಿಶ್ವವಿದ್ಯಾಲಯ 2024-25 ನೆಯ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಸ್ನಾತಕೋತ್ತರ ಪದವಿಗಳಿಗಾಗಿ ಸಾಮಾನ್ಯ ವಿದ್ಯಾರ್ಥಿಗೆ ಪ್ರತಿ ವಿಭಾಗಕ್ಕೆ ಪ್ರವೇಶವನ್ನು ಸಲ್ಲಿಸಲು ದರ 800 ಹಾಗೂ ಎಸ್ಸಿ ಮತ್ತು ಎಸ್‌ಟಿ ವರ್ಗದವರಿಗೆ 400 ಅನ್ನು ನಿಗದಿಪಡಿಸಿದೆ. ಒಂದು ವಿದ್ಯಾರ್ಥಿ ಹಲವು ವಿಭಾಗಗಳಿಗೆ ಅರ್ಜಿಯನ್ನು ಸಲ್ಲಿಸುವಾಗ ಪ್ರತಿ ಅರ್ಜಿಗೂ ಪ್ರತ್ಯೇಕವಾಗಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಇದನ್ನು ಕಡಿತಗೊಳಿಸಬೇಕು ಎಂದು ಆಗ್ರಹಿಸಿದರು.
ಶುಲ್ಕ ಹೆಚ್ಚಳದಿಂದ ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಬಹಳ ಹೊರೆಯನ್ನು ಉಂಟುಮಾಡುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದ ಬೇರೆ ವಿಶ್ವವಿದ್ಯಾಲಯಗಳು ಇದೆ. ಪ್ರವೇಶಾತಿಗಾಗಿ 200ರಿಂದ 400 ನಿಗದಿಪಡಿಸಿವೆ. ಆದರೆ ನಮ್ಮ ವಿಶ್ವವಿದ್ಯಾಲಯ ಅತಿ ಹೆಚ್ಚಿನ ಅರ್ಜಿ ಶುಲ್ಕವನ್ನು ನಿಗದಿ ಮಾಡಿದ್ದು ಸಮಂಜಸವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ವಿಭಾಗಗಳಿಗೆ ಪ್ರವೇಶಾತಿಯನ್ನು ಹೆಚ್ಚಿಸುವ ಸಲುವಾಗಿ ಅರ್ಜಿ ಶುಲ್ಕವನ್ನು ಕಡಿಮೆಗೊಳಿಸಬೇಕು. ಈಗಾಗಲೇ ರಾಯಚೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಮುಗಿಸಿ ಒಂದು ವರ್ಷ ಕಳೆಯುತ್ತಾ ಬಂದರೂ ಕೂಡ ಇನ್ನುವವರೆಗೂ ಅಂಕಪಟ್ಟಿ ವಿತರಿಸಲಾಗಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸವನ್ನು ಹಾಗೂ ಸರ್ಕಾರಿ ಸೌಲಭ್ಯವನ್ನು ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ. ಕೂಡಲೇ ಎಲ್ಲ ವಿಭಾಗದ ಅಂಕ ಪಟ್ಟಿಯನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಬೇಕು ಎಂದು ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ರಾಯಚೂರು | ಮನರೇಗಾ ಕೂಲಿ ದರ ,ಮಾನವ ದಿನಗಳ ಹೆಚ್ಚಳಕ್ಕೆ ಆಗ್ರಹಿಸಿ ಪತ್ರ ಚಳುವಳಿ
ಈ ಸಂದರ್ಭದಲ್ಲಿ ಸಮಿತಿಯ ತಾಲೂಕು ಅಧ್ಯಕ್ಷರಾದ ಮೌನೇಶ ತುಗ್ಗಲದಿನ್ನಿ, ತಾಲೂಕು ಪ್ರಧಾನ ಕಾರ್ಯದರ್ಶಿ ಹುಸೇನಪ್ಪ ಇರಕಲ್, ವಿದ್ಯಾರ್ಥಿ ಮುಖಂಡರಾದ ಅನಿಲ್ ಕುಮಾರ್,ಮೌನೇಶ, ಶೃತಿ,ವಿಜಯಲಕ್ಷ್ಮಿ, ಶೋಭಾ ಚಂದ್ರು, ವೀರೇಶ್ ಭಾಗವಹಿಸಿದ್ದರು.
