ರಾಯಚೂರು | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ದಸಂಸ ಒತ್ತಾಯ

Date:

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಥಳ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಪಟ್ಟಣ ಪಂಚಾಯತ್ ಅಧಿಕಾರಿ ಅಕ್ರಂ ಅವರಿಗೆ ಮನವಿ ಸಲ್ಲಿಸಿತು.

- Advertisement -

“ಪಟ್ಟಣದಲ್ಲಿ ಸಾವಿರಾರು ಜನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ವಾಸಿಸುತ್ತಿದ್ದಾರೆ. ಸದರಿ ಪಟ್ಟಣದಲ್ಲಿ ಅಂಬೇಡ್ಕರ್ ಭವನದ ಅವಶ್ಯಕತೆ ಇದ್ದು, ಭವನ ನಿರ್ಮಾಣ ಮಾಡುವುದು ಪಟ್ಟಣದ ಬಹುಜನರ ಬೇಡಿಕೆಯಾಗಿದೆ. ಈಗಾಗಲೇ ಹಟ್ಟಿ ಪಟ್ಟಣದ ಬುದ್ದಿನ್ನಿ ಲೇಔಟ್‌ನಲ್ಲಿ ಸ್ಥಳ ಕೂಡಾ ಬಹಳಷ್ಟು ವರ್ಷಗಳಿಂದ ಮೀಸಿಲಿರಿಸಿದ್ದು, ಇಲ್ಲಿಯವರೆಗೂ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ. ಸ್ಥಳ ಮೀಸಲಿಟ್ಟು ಬಹಳ ವರ್ಷಗಳೇ ಕಳೆದರೂ ಭವನದ ವಿಚಾರದಲ್ಲಿ ಮೀನಾಮೇಷ ಎಣಿಸುವುದು ದೇಶದ ಸಂವಿಧಾನ ಶಿಲ್ಪಿಗೆ ಮಾಡುವ ಅತೀ ದೊಡ್ಡ ಅಗೌರವ ಎನಿಸಿಕೊಳ್ಳುತ್ತದೆ. ಅವರಿಗೆ ಸೂಕ್ತ ಗೌರವ ನೀಡುವುದು ದೇಶದ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ?: ರಾಯಚೂರು | ಕನ್ನಡ ಕನಸುಗಳನ್ನು ಒಂದೆಡೆ ಸೇರಿಸುವ ಕೆಲಸವಾಗಬೇಕಿದೆ: ಹಿರಿಯ ಸಾಹಿತಿ ಮುಕ್ಕುಂದಿ

ಠರಾವ್ ಪಾಸ್ ಮಾಡದೇ ಹೋದಲ್ಲಿ ಮುಂದೆ ನಡೆಯುವ ಹೋರಾಟಕ್ಕೆ ತಾವೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದರು.‌ ಈ ವೇಳೆ ಯಲ್ಲಪ್ಪ ಮಾಚನೂರು, ಪ್ರಶಾಂತ ದೀನ ಸಮುದ್ರ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...