ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಸೆಪ್ಟೆಂಬರ್ 09 ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಾದಾ ಸಾಹೇಬ್ ಎನ್ ಮೂರ್ತಿ ) ಬಣ ರಾಯಚೂರು ಜಿಲ್ಲಾಧ್ಯಕ್ಷ ಅಶೋಕ್ ನಂಜಲದಿನ್ನಿ ಹೇಳಿದರು.
ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಜಿಲ್ಲಾ ಘಟಕ ಸಭೆಯನ್ನು ಉದ್ದೇಶಿಸಿ ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
“ಪರಿಶಿಷ್ಟ ಜಾತಿ ಒಳಮೀಸಲಾತಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪಿನಂತೆ ಇದನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ ಮಾಡಲಾಗುವುದು” ಎಂದು ತಿಳಿಸಿದರು .
“ಒಳಮೀಸಲಾತಿ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲು ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಕರೆ ನೀಡಿದರು .
“ಜಿಲ್ಲೆಯ ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಕರಪತ್ರಗಳನ್ನು ಹಂಚುವ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಬೇಕು” ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ, ಎಮ್ ಮನೋಹರ್, ಹುಲಗಪ್ಪ ಸೈದಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಬೊಮ್ಮನಾಳ, ಸಿರವಾರ ತಾಲೂಕು ಅಧ್ಯಕ್ಷ ಚಂದ್ರಪ್ಪ ಕವಿತಾಳ, ಮಾನ್ವಿ ತಾಲೂಕು ಅಧ್ಯಕ್ಷ ಮಾರೆಪ್ಪ, ಕವಿತಾಳ ನಗರ ಘಟಕ ಅಧ್ಯಕ್ಷ ಯಾಕೋಬ ಹುಲಿ,ವ ವಿಜಯ ಕವಿತಾಳ ಹಿರೇಹಣಗಿ, ಹೀರಾ, ಚಿಂಚರಕಿ ಗ್ರಾಮ ಪಂಚಾಯತಿ ಘಟಕದ ಎಲ್ಲ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.
