ರಾಯಚೂರು | ಪೊಲೀಸರ ಹಲ್ಲೆಯಿಂದ ಸಾವು ಆರೋಪ; ಪ್ರಕರಣ ಸಿಐಡಿ ಕೈಗೆ

Date:

ರಾಯಚೂರಿನ ಈಶ್ವರ ನಗರದ ವೀರೇಶ ಎಂಬ ಯುವಕ ಪೊಲೀಸರ ತೀವ್ರ ಹಲ್ಲೆಯಿಂದ ಸಾವನ್ನಪ್ಪಿದ್ದ ಎನ್ನಲಾದ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸಿದ್ದು, ತನಿಖೆ ಆರಂಭಿಸಿದ ತಂಡ ನಗರಕ್ಕೆ ಆಗಮಿಸಿದೆ.

- Advertisement -

ವೀರೇಶನ ಸಾವು ಪ್ರಕರಣದ ತನಿಖೆ ನಿಸ್ಪಕ್ಷಪಾತ ನಡೆಸಬೇಕು ಎಂದು ವೀರೇಶ ಕುಟುಂಬ ನೀಡಿದ ದೂರಿನ ಅನ್ವಯ ಬಳ್ಳಾರಿ ವಲಯದ ಐಜಿ ಲೋಕೇಶ್ ಕುಮಾರ ಇವರು ಸಿಐಡಿ ತನಿಖೆಗೆ ಶಿಫಾರಸು ಮಾಡಿರುವ ಹಿನ್ನಲೆ ತಂಡ ನಗರಕ್ಕೆ ಆಗಮಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಡಿವೈಎಸ್‌ಪಿ ಮಾಲತೇಶ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನ ಭೇಟಿ ಮಾಡಿ ತಂಡ ಚರ್ಚೆ ನಡೆಸಿದೆ ಎನ್ನಲಾಗಿದೆ.

ವೀರೇಶ ಪತ್ನಿ ನರಸಮ್ಮರೊಂದಿಗೆ ಜಗಳವಾಡಿಕೊಂಡಿದ್ದ. ಸಂಬಂಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪಶ್ಚಿಮ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿತ್ತು. ವಿಚಾರಣೆ ಹೆಸರಿನಲ್ಲಿ ಪಿಎಸ್‌ಐ ಮಂಜುನಾಥ ಹಾಗೂ ಸಿಪಿಐ ನಾಗರಾಜ ಮೇಕಾ ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದರಿಂದ ವೀರೇಶನ ಸಾವು ಸಂಭವಿಸಿದೆ ಎಂದು ಆರೋಪಿಸಿ ಮತ್ತೆ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ರಾಯಚೂರು | ಕಾಲುವೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪಾದಯಾತ್ರೆ

ಈಗಾಗಲೇ ಪ್ರಕರಣ ಸಂಬಂಧ ಪಿಎಸ್‌ಐ ಮಂಜುನಾಥ ಮತ್ತು ಸಿಪಿಐ ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...