ತೀವ್ರ ರಕ್ತಸ್ರಾವದಿಂದ ಬಾಣಂತಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಮೃತಳನ್ನು ಸಿರವಾರ ತಾಲ್ಲೂಕು ಬಲ್ಲಟಗಿ ಗ್ರಾಮದ ನಿವಾಸಿ ಶಿವಗಂಗಮ್ಮ ಗಂಗಾಧರ (25) ಮೃತ ಬಾಣಂತಿ ಎಂದು ಗುರುತಿಸಲಾಗಿದೆ.
ಕಳೆದ ಬುದುವಾರ ಮಾನ್ವಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಲ್ಲೂಕು ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಮಾಡಿದ್ದರು. ಗಂಡು ಮಗುವಿಗೆ ಜನ್ಮ ನೀಡಿದರು. ಆ ಬಳಿಕ ಆಕೆಗೆ ತೀವ್ರ ರಕ್ತಸ್ರಾವ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರ ಸಲಹೆಯ ಮೇರೆಗೆ ಆಕೆಯನ್ನು ರಾಯಚೂರು ರಿಮ್ಸ್ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕುಡಿಯುವ ನೀರಿಗಾಗಿ ಪಂಚಾಯಿತಿಗೆ ಬೀಗ
ಮೃತ ಬಾಣಂತಿ ಸಹೋದರ ಮಾತನಾಡಿ, ಮಾನ್ವಿ ತಾಲ್ಲೂಕು ಆಸ್ಪತ್ರೆ ದಾಖಲಿಸಿದಾಗ ರಕ್ತಸ್ರಾವ ಹೆಚ್ಚಾಗಿದೆ ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಎಂದು ಆರೋಪಿಸಿದರು.

ಸರ್ಕಾರಿ ವೈದ್ಯಾಧಿಕಾರಿಗಳು ಸರಿಯಾಗಿ ತಮ್ಮ ಕೆಲಸ ತಾವುಗಳು ಮಾಡದೇ, ಪ್ರಾಯೋಗಿಕ ಅಥವಾ ಟ್ರೈನಿಂಗ್ ನಲ್ಲಿ ಇರುವ ನರ್ಸ್, ಬಿಟ್ಟು ಹೋಗುತ್ತಾರೆ. ಅನುಭವ ಇಲ್ಲದ ಇರುವ ನರ್ಸ್ಗಳು ಏನು ಮಾಡಲು ಸಾಧ್ಯ ಅಲ್ವಾ..! ಈ ಕೊಡಲೇ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು.
ಬಡ ಜೀವಗಳನ್ನು ಉಳಿಸಬೇಕು.