ರಾಯಚೂರು | ತುಂಗಭದ್ರಾ ಎಡದಂಡೆ ನಾಲೆಯ ಜಮೀನುಗಳಿಗೆ ಸಮರ್ಪಕ ನೀರು ಹರಿಸುವಂತೆ ಒತ್ತಾಯ

Date:

ತುಂಗಭದ್ರಾ ಎಡದಂಡೆ ನಾಲೆಯ ಕೆಳಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಘಟಕದಿಂದ ತಹಶೀಲ್ದಾರ್ ಗ್ರೇಡ್ 2 ಅಬ್ದುಲ್ ವಾಹಿದ ಅವರಿಗೆ ಮನವಿ ಸಲ್ಲಿಸಿದರು.

- Advertisement -

“ಸದರಿ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸದೆ ರೈತರು ಬೆಳೆದ ಬೆಳೆಗಳು ಹಾಳಾಗಿದ್ದು, ನಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ಅಧಿಕಾರಿಗಳು ರೈತರ ಜಮೀನುಗಳಿಗೆ ನೀರು ಹರಿಸಬೇಕು. ಈ ವರ್ಷ ನಮ್ಮ ಭಾಗಕ್ಕೆ ಸಂಪೂರ್ಣ ಮಳೆ ಇಲ್ಲದೇ ರೈತರು ಬರಗಾಲದಿಂದ ಕಂಗಾಲಾಗಿದ್ದಾರೆ. ಅಲ್ಪಪ್ರಮಾಣದ ಮಳೆಯಾಗಿದ್ದು, ತುಂಗಭದ್ರಾ ಎಡದಂಡೆ ನಾಲೆಯ ಉಪಕಾಲುವೆಗಳಾದ 76, 82, 85 ಹಾಗೂ 89 ಈ ಕಾಲುವೆಗಳ ಕೆಳಭಾಗಕ್ಕೆ ನೀರಿಲ್ಲದೇ ಶೇ.50ರಷ್ಟೂ ಬೆಳೆ ಬಾರದೆ ರೈತರು ನಷ್ಟ ಅನುಭವಿಸುತ್ತಿದ್ದು, ಸರ್ಕಾರ ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ನೀರು ಹರಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಈ ಭಾಗದ ರೈತರಿಗೆ ದಿನದಿಂದ ದಿನಕ್ಕೆ ವಿದ್ಯುತ್ ಸಮಸ್ಯೆ ಹೆಚ್ಚಾಗುತ್ತಿದ್ದು, ಇದನ್ನು ಸರಿಪಡಿಸಬೇಕು. ರೈತರು ಬೆಳೆದಿರುವ ಬೆಳೆಗಳ ಕಟಾವು ಹಂತದಲ್ಲಿರುವ ಬೆಳೆಗಳಿಗೆ ಕೂಡಲೇ ಸರ್ಕಾರ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕು. ರೈತರು ಮಾರುಕಟ್ಟೆಯಲ್ಲಿ ಹತ್ತಿಯನ್ನು ಮಾರಲು ಹೋದಾಗ ಪ್ರತಿ ಕ್ವಿಂಟಾಲ್‌ಗೆ ಎರಡು ಕೆಜಿಯಂತೆ ತೂಕದಲ್ಲಿ ಮೋಸ ಮಾಡಿ ಹತ್ತಿಯನ್ನು ಲಪಟಾಯಿಸುತ್ತಿದ್ದಾರೆ. ರೈತರಿಗೆ ನ್ಯಾಯ ಒದಗಿಸಬೇಕು, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಅ.21ರಂದು ವಿಧಾನಪರಿಷತ್ ಉಪಚುನಾವಣೆ; ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ

“ವಿದ್ಯುತ್ ಕೃಷಿ ಪಂಪಸೆಟ್‌ಗಳಿಗೆ ಸರ್ಕಾರದ ನಿಯಮದ ಪ್ರಕಾರ 7 ತಾಸು ವಿದ್ಯುತ್ ಒದಗಿಸಬೇಕು ಎಂದಾಗಿದೆ. ಆದರೆ ಸರಿಯಾದ ಸಮಯಕ್ಕೆ ವಿದ್ಯುತ್ ಒದಗಿಸದೇ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ. ಬೆಳಗಿನ ಜಾವ ಹಾಗೂ ರಾತ್ರಿ ಸೊಳ್ಳೆಕಾಟ. ಇದರಿಂದ ರೈತರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ರೈತ ಮುಖಂಡ ಸುಗರಯ್ಯ ಮಠ, ಜಿಲ್ಲಾ ಕಾರ್ಯದರ್ಶಿ ಲಿಂಗಾರೆಡ್ಡಿ ಪಾಟೀಲ್, ಬಸವರಾಜ್, ದೇವೇಂದ್ರಪ್ಪ ನಾಯಕ, ಚನ್ನ ಬಸವ, ಶರಣಪ್ಪ ಗೌಡ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...