ರಾಯಚೂರು | ಅಮಿತ್ ಶಾ ರಾಜೀನಾಮೆಗೆ ಆಗ್ರಹ; ಡಿ.27ರಂದು ಬೃಹತ್‌ ಪ್ರತಿಭಟನೆ

Date:

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ವಿರುದ್ಧ ಅವಮಾನಕರ ಹೇಳಿಕೆ ನೀಡಿದ ಕೇಂದ್ರ ಗೃಹಸಚಿವ ಅಮಿತ್ ಶಾ ರಾಜೀನಾಮೆ ಆಗ್ರಹಿಸಿ ಡಿಸೆಂಬರ್‌ 27ರಂದು ದಲಿತರಪರ ಮತ್ತು ಅಲ್ಪಸಂಖ್ಯಾತರ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಸಲಾಗುತ್ತದೆ ಎಂದು ದಲಿತಪರ ಮುಖಂಡ ಎಸ್ ಮಾರೆಪ್ಪ ವಕೀಲರು ಹೇಳಿದರು.

- Advertisement -

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “2025ರೊಳಗೆ ಭಾರತವನ್ನು ಹಿಂದೂ ರಾಷ್ಟ್ರವಾಗಿ ಘೋಷಣೆ ಮಾಡುವ ಉದ್ದೇಶದಿಂದ ಅಂಬೇಡ್ಕರ್ ಮತ್ತು ಸಂವಿಧಾನ ವಿರೋಧಿ ಚಟುವಟಿಕೆಯಾಗಿ ಬಿಜೆಪಿ ನಡೆಯುತ್ತಿದೆ. ಆರ್‌ಎಸ್‌ಎಸ್‌ ಮತ್ತು ಮನುವಾದಿಗಳ ಮನಸ್ಥಿತಿ ಹೊಂದಿರುವ ಬಿಜೆಪಿಗರಿಗೆ ಅಂಬೇಡ್ಕರ್ ಮತ್ತು ಸಂವಿಧಾನದ ಮೇಲೆ ಕಿಂಚತ್ತೂ ಗೌರವವಿಲ್ಲ. ಇಂತಹವರು ಸಂವಿಧಾನದ ಮೇಲೆ ಪ್ರಮಾಣವಚನ ಮಾಡಬಾರದಿತ್ತು” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

“ಈ ದೇಶದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮತ್ತು ಅವರ ಮೇಲೆ ನಂಬಿಕೆ ಇಲ್ಲದಿದ್ದರೆ ಕೇಂದ್ರ ಗೃಹಸಚಿವ ಸೇರಿದಂತೆ ಯಾರೇ ಇರಲಿ ರಾಜೀನಾಮೆ ನೀಡಿ ಹೊರ ನಡೆಯಲಿ. ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆ ಆರ್‌ಎಸ್‌ಎಸ್‌ ಮತ್ತು ಮನುವಾದಿಗಳ ಮನಸ್ಥಿತಿ ಭಾವನೆಯಾಗಿದೆ. ದೇಶ ಸೇರಿದಂತೆ ವಿದೇಶಗಳಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಮಾಡಿದ್ದಾರೆ. ಇದನ್ನು ಸಹಿಸದ ಬಿಜೆಪಿಗರು ಈ ರೀತಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ” ಎಂದರು.

“ಅಂಬೇಡ್ಕರ್ ಮೇಲೆ ಇವರಿಗಿರುವ ನಿಜವಾದ ಒಳವಿಚಾರ ಅಮಿತ್ ಶಾ ಹೇಳಿಕೆ ಮೂಲಕ ಹೊರಬಿದ್ದಿದೆ. ಸಂವಿಧಾನದ ಅಡಿಯಲ್ಲಿ ನರೇಂದ್ರ ಮೋದಿ ನಂತರ ಬಹುದೊಡ್ಡ ಜವಾಬ್ದಾರಿ ವಹಿಸಿಕೊಂಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ತಮ್ಮ ನಾಲಿಗೆ ಹರಿಬಿಡುವ ಮೂಲಕ ಈ ದೇಶದ ಬಹುಸಂಖ್ಯಾತರ ವಿರೋಧಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಅಂಬೇಡ್ಕರ್ ಅವರ ನಾಮಸ್ಮರಣೆ ನಮಗೆ ಫ್ಯಾಶನ್ ಅಲ್ಲ. ಅದು ನಮ್ಮ ಜೀವನ. ಇಂದು ನಮ್ಮ ಅಸ್ತಿತ್ವ, ನಮ್ಮ ಬದುಕು ಮತ್ತು ನಮಗಿರುವ ಸವಲತ್ತು ಡಾ. ಬಿ ಆರ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದ ಬಲದಿಂದಾಗಿ ದೊರತಿದೆ. ಪ್ರಸ್ತುತ ಕಾಲಘಟ್ಟದಲ್ಲಿ ರಾಜಕೀಯದಲ್ಲಿ ಅನೇಕ ಬದಲಾವಣೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಅಂಬೇಡ್ಕರ್ ಮತ್ತು ಸಂವಿಧಾನದ ವಿಚಾರಧಾರೆ ಅಗತ್ಯವಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕೇಂದ್ರ ಗೃಹಮಂತ್ರಿ ಅಮಿತ್ ಶಾ ರಾಜೀನಾಮೆಗೆ ಸಿಪಿಐ ಆಗ್ರಹ

ಅಂಬೇಡ್ಕರ್ ವಿರೋಧಿ ಚಟುವಟಿಕೆ ಅನುಸರಿಸುವ ಯಾವುದೇ ಪಕ್ಷವಿರಲಿ ಅವರಿಗೆ ತಕ್ಕ ಪಾಠ ಕಲಿಸಲು ಉತ್ತರ ಭಾರತದ ಜನರು ಇಂದಿಗೂ ಮುಂಚೂಣಿ ವಹಿಸಿಕೊಂಡಿದ್ದಾರೆ. ಅಂಬೇಡ್ಕರ್ ಅವರನ್ನು ಅವಮಾನ ಮಾಡಿರುವ ಬಿಜೆಪಿಗರಿಗೆ ತಕ್ಕಪಾಠ ಕಲಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರವೀಂದ್ರನಾಥ ಪಟ್ಟಿ, ಎಂ ಆರ್ ಭೇರಿ, ಜಾನ್ ವೆಸ್ಲಿ, ಹೇಮರಾಜ್ ಆಸ್ಕಿಹಾಳ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ರದ್ದುಗೊಳಿಸಿ, CEC ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ...

ಉಡುಪಿ | ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು

ಪ್ರಶ್ನೆಗಳನ್ನು ಎತ್ತುವುದಷ್ಟೇ ಮುಖ್ಯವಲ್ಲ; ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವೂ ಅಗತ್ಯ. ಸಾಹಿತ್ಯವು...

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ...

ಇಂಡಿ |‌ ಜೋಡೆತ್ತು ಕೃಷಿಕರ ಪ್ರತಿಭಟನೆ; ಅಹವಾಲು ಆಲಿಸಿದ ಶಾಸಕ ಯಶವಂತರಾಯಗೌಡ ಪಾಟೀಲ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಜೋಡೆತ್ತಿನ ಕೃಷಿಕರ ಬೇಡಿಕೆಗಳನ್ನು...