ರಾಯಚೂರು | ಲಂಚಕ್ಕೆ ಬೇಡಿಕೆ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ

Date:

ಮಾನ್ವಿ ತಾಲೂಕಿನ ವಸತಿ ನಿಲಯದ ಬಾಕಿ ಹಣವನ್ನು ಮಂಜೂರು ಮಾಡಲು ಕಟ್ಟಡದ ಮಾಲೀಕರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾನ್ವಿ ಪ್ರಭಾರಿ ಅಧಿಕಾರಿ ಸಂಗನಬಸಪ್ಪ ಬಿರಾದಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

- Advertisement -

ರಾಯಚೂರು ಜಿಲ್ಲಾ ಕಚೇರಿಯಲ್ಲಿ ವ್ಯವಸ್ಥಾಪಕರಾಗಿರುವ ಇವರಿಗೆ ಮಾನ್ವಿಯ ಕಚೇರಿಯ ಪ್ರಭಾರ ಜವಾಬ್ದಾರಿ ನೀಡಲಾಗಿತ್ತು. ಮಾನ್ವಿಯಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ ನಡೆಸಲು ಕಟ್ಟಡವೊಂದನ್ನು ಬಾಡಿಗೆ ಪಡೆಯಲಾಗಿತ್ತು. ತಿಂಗಳಿಗೆ ₹60 ಸಾವಿರ ಬಾಡಿಗೆಯಂತೆ 11 ತಿಂಗಳ ಬಾರಿಗೆ ಹಣ ಬಾಕಿ ಉಳಿದಿತ್ತು. ಆ ಹಣವನ್ನು ಮಂಜೂರು ಮಾಡಿಸಲು ಕಟ್ಟಡ ಮಾಲೀಕರಿಂದ ₹15 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಕಟ್ಟಡ ಮಾಲೀಕ ತಿಪ್ಪಯ್ಯ ಶೆಟ್ಟಿ ಈ ಕುರಿತು ಮಂಗಳವಾರ ಲೋಕಾಯುಕ್ತರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಬುಧವಾರ ದಾಳಿ ನಡೆಸಿದ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಎಸ್‍ಪಿ ಎಂ ಎನ್ ಶಶಿಧರ, ಇನ್ಸ್ ಪೆಕ್ಟರ್ ಗಳಾದ ಕಾಳಪ್ಪ ಬಡಿಗೇರ್, ರವಿ ಪುರುಷೋತ್ತಮ್, ಮುಖ್ಯಪೇದೆಗಳಾದ ಶಿವರಾಮ ಸ್ವಾಮಿ, ಏಕಾಂಬರನಾಥ, ಸಿಬ್ಬಂದಿಯಾದ ಗೋಪಾಲರಾವ್ ಪವಾರ್, ಅಶೋಕ, ರವಿ, ಬಸವರಾಜ್, ಬಸಯ್ಯ, ಗೋಪಾಲ್, ಶರಣಬಸವ, ಅಜಿತ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...