ರಾಯಚೂರು | ಕೆಎಸ್‌ಆರ್‌ಪಿ ಸ್ಥಾಪನೆಗೆ ಒತ್ತಾಯ; ಸಿಎಂಗೆ ಬಹಿರಂಗ ಪತ್ರ

Date:

ಜಿಲ್ಲೆಯಲ್ಲೇ 13ನೇ ಕೆಎಸ್‌ಆರ್‌ಪಿ (ಕರ್ನಾಟಕ ರಾಜ್ಯ ರಿಸರ್ವ್ ಪೊಲೀಸ್) ಪಡೆಯನ್ನು ಸ್ಥಾಪಿಸಬೇಕೆಂದು ಯುವ ಹೋರಾಟಗಾರ ಅರುಣ್ ಭೂಪಾಲ್ ಅವರು ಮುಖ್ಯಮಂತ್ರಿ ಅವರಿಗೆ ಬಹಿರಂಗ ಪತ್ರ ಬರೆದು ಒತ್ತಾಯಿಸಿದ್ದಾರೆ. ಈ ಪತ್ರ ಖಾಕಿ ವಲಯ ಹಾಗೂ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಭದ್ರತಾ ಪರಿಸ್ಥಿತಿಯನ್ನು ಉಲ್ಲೇಖಿಸಿರುವ ಅವರು, “ಮಹಾನಗರಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಮೀಸಲಿಡುವ ಸರ್ಕಾರ, ಗಡಿಭಾಗದ ಜಿಲ್ಲೆಗಳಿಗೆ ಕನಿಷ್ಠ ಭದ್ರತಾ ವ್ಯವಸ್ಥೆ ಒದಗಿಸಲು ಯಾಕೆ ಹಿಂದೇಟು ಹಾಕುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

- Advertisement -

ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳು ಆಂಧ್ರ–ತೆಲಂಗಾಣ ಗಡಿಭಾಗಕ್ಕೆ ಹೊಂದಿಕೊಂಡಿರುವುದರಿಂದ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಶಾಶ್ವತ ಕೆಎಸ್‌ಆರ್‌ಪಿ ಪಡೆಯ ಅಗತ್ಯವಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ. ವಿ.ವಿ.ಐ.ಪಿ ಭೇಟಿಗಳು, ರಾಜಕೀಯ ಸಮಾವೇಶಗಳು, ಧಾರ್ಮಿಕ ಜಾತ್ರೆಗಳು, ಹಟ್ಟಿ ಚಿನ್ನದ ಗಣಿ, ಶಕ್ತಿನಗರ ವಿದ್ಯುತ್ ಉತ್ಪಾದನಾ ಘಟಕ ಹಾಗೂ ಉದ್ದೇಶಿತ ವಿಮಾನ ನಿಲ್ದಾಣದ ಹಿನ್ನೆಲೆಯಲ್ಲಿ ಭದ್ರತಾ ಸವಾಲು ಹೆಚ್ಚುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತುರ್ತು ಸಂದರ್ಭಗಳಲ್ಲಿ ಕಲಬುರಗಿ ಅಥವಾ ಮುನಿರಾಬಾದ್‌ನಿಂದ ಪಡೆ ಬರಲು ನಾಲ್ಕು ಗಂಟೆಗಳವರೆಗೆ ಸಮಯ ಹಿಡಿಯುತ್ತಿರುವುದು ಆತಂಕಕಾರಿ ಎಂದು ಅರುಣ್ ಭೂಪಾಲ್ ಅಭಿಪ್ರಾಯಪಟ್ಟಿದ್ದಾರೆ. ಕಲ್ಯಾಣ ಕರ್ನಾಟಕದ 25 ಶಾಸಕರು ಒಟ್ಟಾಗಿ ಮನವಿ ಸಲ್ಲಿಸಿದ್ದರೂ ಹಣಕಾಸು ಇಲಾಖೆ ಎರಡನೇ ಬಾರಿ ಪ್ರಸ್ತಾವನೆ ತಿರಸ್ಕರಿಸಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಅಗತ್ಯ ಭೂಮಿ ಹಾಗೂ ಅನುದಾನದ ವ್ಯವಸ್ಥೆ ಇದ್ದರೂ ಅನುಮತಿ ನೀಡದಿರುವುದನ್ನು ಅವರು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಾನ್ವಿ | ಲಾರಿ – ಬೈಕ್ ನಡುವೆ ಅಪಘಾತ; ಓರ್ವ ಸಾವು

ಐಆರ್‌ಬಿ–ಕೆಎಸ್‌ಆರ್‌ಪಿ ಪ್ರತ್ಯೇಕೀಕರಣದ ನಂತರ ಕಲ್ಯಾಣ ಕರ್ನಾಟಕ ಮೀಸಲಾತಿಯಲ್ಲಿ ನೇಮಕವಾದ ಸಿಬ್ಬಂದಿಗೆ ಪದೋನ್ನತಿ ಸಿಗದೆ ನಿವೃತ್ತಿಯಾಗುತ್ತಿರುವ ವಿಚಾರವನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯ ಬಜೆಟ್‌ನಲ್ಲಿ ರಾಯಚೂರಿನಲ್ಲಿ 13ನೇ ಕೆಎಸ್‌ಆರ್‌ಪಿ ಪಡೆಯ ಘೋಷಣೆ ಮಾಡಬೇಕು. ಇದು ಕೇವಲ ಒತ್ತಾಯವಲ್ಲ, ಸಂವಿಧಾನಬದ್ಧ ಹಕ್ಕು ಎಂದು ಅವರು ತಿಳಿಸಿದ್ದಾರೆ. ಈ ಕುರಿತು ಸರ್ಕಾರದ ಪ್ರತಿಕ್ರಿಯೆ ನಿರೀಕ್ಷಿಸಲಾಗುತ್ತಿದೆ.

237f7ffccb444279d008bf3b9996085b28ea2ee502b53dcd4b516808491f04d0?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...