ರಾಯಚೂರು | ಹೊರಗುತ್ತಿಗೆ ಸಿಬ್ಬಂದಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ

Date:

ಹಾಸ್ಟೆಲ್, ವಸತಿ ಶಾಲೆ ಹಾಗೂ ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ರಾಯಚೂರು ಜಿಲ್ಲಾ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಕೆಲಸ ಮಾಡುವ ಕಾರ್ಮಿಕರಿಗೆ ತಿಂಗಳಿಗೆ ಕನಿಷ್ಠ ವೇತನ ಮಾಸಿಕ ₹31 ಸಾವಿರ ನೀಡಬೇಕು. ನೇರವಾಗಿ ಇಲಾಖೆಯಿಂದ ಖಾತೆಗೆ ವೇತನ ಜಮಾ ಮಾಡಬೇಕು. ನಿವೃತ್ತಿವರೆಗೆ ಸೇವಾ ಭದ್ರತೆ ಒದಗಿಸಿಕೊಡಬೇಕು. ಕಾರ್ಮಿಕ ಕಾನೂನು ಪ್ರಕಾರ ಕಡ್ಡಾಯವಾಗಿ ವಾರಕ್ಕೆ ಒಂದು ರಜೆ ನೀಡಬೇಕು ಹಾಗೂ ಕೆಲಸದ ಸಮಯ ನಿಗದಿಪಡಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ, ಐಡಿ ಕಾರ್ಡ್, ಸರ್ವೀಸ್ ಸರ್ಟಿಫಿಕೇಟ್, ಇಎಸ್‌ಐ ಮತ್ತು ಪಿಎಫ್ ಹಣ ತುಂಬಿದ ರಶೀದಿ ಕೊಡಬೇಕು. ಹಿಂದುಳಿದ ವರ್ಗ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿಗಳ ಸಂಖ್ಯೆ ಕಡಿತ ಮಾಡಿರುವ ಆದೇಶ ರದ್ದಾಗಬೇಕು. 50 ವಿದ್ಯಾರ್ಥಿಗಳಿಗೆ 3 ಜನ ಸಿಬ್ಬಂದಿಯಂತೆ ಹಿಂದಿನ ಪದ್ಧತಿ ಮುಂದುವರಿಸಬೇಕು. ಪ್ರತಿ ತಿಂಗಳು 5ನೇ ತಾರೀಕಿನಂದು ವೇತನ ಪಾವತಿಸಬೇಕು. ಬಾಕಿ ಇರುವ ಸಂಬಳವನ್ನು ತಕ್ಷಣ ಪಾವತಿ ಮಾಡಬೇಕು ಎಂದು ಒತ್ತಾಯಿಸಿದರು.

10 ವರ್ಷ ಸೇವೆ ಸಲ್ಲಿಸಿರುವ ಎಲ್ಲ ಹೊರಗುತ್ತಿಗೆ ಸಿಬ್ಬಂದಿಗಳನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ತರಬೇಕು. ಬಿಸಿಎಂ ಇಲಾಖೆಯಲ್ಲಿ ಕೆಲಸ ಕಳೆದುಕೊಂಡಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ಮತ್ತೆ ಮರು ನೇಮಕ ಮಾಡಿಕೊಳ್ಳಬೇಕು. ಹೊಸದಾಗಿ ಪ್ರಾರಂಭ ಮಾಡುವ ಹಾಸ್ಟೆಲ್‌ಗಳಿಗೆ ಕಡ್ಡಾಯವಾಗಿ ನೇಮಕ ಮಾಡಬೇಕು. ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರಿಂದ ಶೌಚಾಲಯ ಸ್ವಚ್ಛ ಮಾಡಿಸಬಾರದು, ವಸತಿ ನಿಲಯ ಮತ್ತು ಹಾಸ್ಟೆಲ್‌ಗಳಿಗೆ ವಾರ್ಡನ್ ಗಳು ಮಕ್ಕಳ ಅಡುಗೆಗೆ ಅಗತ್ಯವಾಗಿ ಬೇಕಾದ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಸರಿಯಾದ ಪ್ರಮಾಣದಲ್ಲಿ ತಂದು ಕೊಡಬೇಕು. ನಿವೃತ್ತಿ ನಂತರ ಜೀವನ ನಿರ್ವಹಣೆಗೆ 10 ಲಕ್ಷ ಪರಿಹಾರ ನೀಡಬೇಕು ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಅಕ್ರಮ ಕಲ್ಲು ಗಣಿಗಾರಿಕೆ ವಿರೋಧಿಸಿ ಧರಣಿ

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷೆ ರೇಣುಕಮ್ಮ, ಕಾರ್ಯದರ್ಶಿ ಕರಿಯಪ್ಪ ಅಚ್ಚೊಳ್ಳಿ, ರವಿಕುಮಾರ, ಸಾಬಣ್ಣ, ಶಂಕರ ಗುರು ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...