ರಾಯಚೂರು | ರೈತರ ಬೇಡಿಕೆ ಈಡೇರಿಕೆಗೆ ಆಗ್ರಹ; ಜ 26ರಂದು ಟ್ರ್ಯಾಕ್ಟರ್ ರ‍್ಯಾಲಿ

Date:

ರೈತರಿಗೆ ಮಾರಕವಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿರುವ ಕೇಂದ್ರ ಸರ್ಕಾರ ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದೇ ಇರುವುದನ್ನು ವಿರೋಧಿಸಿ ಜನವರಿ 26ರಂದು ಸಂಯುಕ್ತ ಹೋರಾಟ ಕರ್ನಾಟಕ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲಾಗುತ್ತದೆ ಎಂದು ಹೋರಾಟ ಸಮಿತಿ ಸಂಚಾಲಕ ಚಾಮರಸ ಮಾಲಿ ಪಾಟೀಲ್ ಹೇಳಿದರು.

- Advertisement -

ರಾಯಚೂರಿನಲ್ಲಿ ನಡೆದ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ರೂಪಿಸಲು ಸಮಿತಿ ರಚಿಸಬೇಕು. ವಿದ್ಯುತ್ ತಿದ್ದುಪಡಿ ಕಾಯ್ದೆ, ಲಿಖೀಂಪುರ ಪ್ರಕರಣ ಸೇರಿದಂತೆ ರೈತರ ಮೇಲೆ ಹಾಕಿರುವ ಕೇಸ್‌ಗಳನ್ನು ಹಿಂಪಡೆಯಬೇಕು. ಕಾರ್ಮಿಕ ಕಾಯ್ದೆ ಸೇರಿದಂತೆ ಭರವಸೆ ನೀಡಿದ್ದ ಕೇಂದ್ರ ಯಾವುದೇ ಕ್ರಮಕ್ಕೂ ಮುಂದಾಗದೇ ಇರುವುದನ್ನು ವಿರೋಧಿಸಿ  ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಟ್ರ್ಯಾಕ್ಟರ್‌ಗಳೊಂದಿಗೆ ರ‍್ಯಾಲಿ ನಡೆಸಲಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ರಾಜ್ಯ ಸರ್ಕಾರ ಮೂರು ಕಾಯ್ದೆಗಳನ್ನು ಹಿಂಪಡೆಯುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜನವರಿ 18ರಂದು ಸಭೆ ನಡೆಸಿ ಭರವಸೆ ನೀಡಿದ್ದಾರೆ. ಎಪಿಎಂಸಿ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ನಿಷೇದ ಕಾಯ್ದೆ, ಕಾರ್ಮಿಕರಿಗೆ 12 ತಾಸು ಬದಲು 8 ತಾಸು ನಿಗದಿಪಡಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ” ಎಂದು ಹೇಳಿದರು.

“ರಾಜ್ಯದಲ್ಲಿ ಬರಗಾಲ ಘೋಷಣೆಯಾದರೂ ಬಲವಂತದಿಂದ ಸಾಲ ವಸೂಲಿ ನಡೆಸಲಾಗುತ್ತಿದ್ದು, ಇದನ್ನು ಕೂಡಲೇ ತಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ. ಶೀಘ್ರದಲ್ಲಿ ಆದೇಶ ಹೊರಡಿಸುವುದಾಗಿಯೂ ಭರವಸೆ ನೀಡಿದ್ದಾರೆ. ಆದರೆ ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ಕೇಂದ್ರದ ಮೇಲೆ ಒತ್ತಡ ಹಾಕಬೇಕಿರುವ ಬಿಜೆಪಿ ನಾಯಕರು ಹೋರಾಟ ನಡೆಸುತ್ತಿಲ್ಲ. ಬರ ಪರಿಹಾರ ಅನುದಾನ ನೀಡದೇ ಇರುವ ಕೇಂದ್ರ ಸರ್ಕಾರವನ್ನು ಪ್ರಶ್ನಿಸದ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ದ ಯಾವ್ಯಾವುದಕ್ಕೋ ಹೋರಾಟ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಕೇಂದ್ರ ಸರ್ಕಾರ ಕಳೆದ 9 ವರ್ಷದಲ್ಲಿ ನೀಡಿದ್ದ ಯಾವ ಭರವಸೆಯನ್ನೂ ಈಡೇರಿಸಿಲ್ಲ. ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿದ್ದರು. ಆದರೆ ಖರ್ಚು ದ್ವಿಗುಣಗೊಂಡಿದೆಯೇ ಹೊತರು ರೈತ ಆದಾಯ ಕುಸಿಯುತ್ತಲೇ ಇದೆ. ನಿರುದ್ಯೋಗ ಪ್ರಮಾಣ ಏರಿಕೆಯಾಗುತ್ತಿದೆ. ಸರ್ಕಾರ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ. ಮಾಧ್ಯಮಗಳನ್ನು ಬಳಸಿಕೊಂಡು ಅಯೋಧ್ಯೆ ಮಂದಿರ ರಾಜಕೀಯ ಪ್ರಾರಂಭಿಸಿದೆ. ದೊಡ್ಡ ಕಂಪನಿಗಳ ಸಾಲವನ್ನು ರೈಟ್ ಆಫ್ ಮಾಡಿ ₹14 ಲಕ್ಷ ಕೋಟಿ ಮನ್ನಾ ಮಾಡಿರುವ ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಮಾತ್ರ ಮುಂದಾಗುತ್ತಿಲ್ಲ. ಇದನ್ನು ಕೇಂದ್ರಕ್ಕೆ ಮತ್ತೊಮ್ಮೆ ರೈತರ ಹೋರಾಟ ನೆನಪು ಮಾಡಿಕೊಡಲಾಗುತ್ತದೆ” ಎಂದರು.

ಜಿಲ್ಲಾ ಸಂಚಾಲಕ ಕೆ ಜಿ ವೀರೇಶ ಮಾತನಾಡಿ, “ಜನವರಿ 26ರಂದು ನಗರದಲ್ಲಿ ನಡೆಯಲಿರುವ ಟ್ರ್ಯಾಕ್ಟರ್ ರ‍್ಯಾಲಿ ನಗರದ ರಾಜೇಂದ್ರ ಗಂಜ್‌ನಿಂದ ಪ್ರಾರಂಭವಾಗಿ ಚಂದ್ರಮೌಳೇಶ್ವರ ವೃತ್ತ, ಮಹಾವೀರ ವೃತ್ತ, ತೀನ್ ಕಂದೀಲ್, ತಹಶೀಲ್ದಾರ್ ಕಚೇರಿ ಮೂಲಕ ಡಾ.ಬಿ‌ ಆರ್ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿ ಜಿಲ್ಲಾಧಿಕಾರಿಗೆ ಮನವಿ ನೀಡಲಾಗುತ್ತದೆ” ಎಂದರು.‌

ರಾಘವೇಂದ್ರ ಕುಷ್ಟಗಿ ಮಾತನಾಡಿ, “ಕೇಂದ್ರ ಸರ್ಕಾರ ವಚನಭ್ರಷ್ಟ ಸರ್ಕಾರವಾಗಿದೆ. ರೈತರ ಹೋರಾಟದ ಸಂದರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಮರೆತುಬಿಟ್ಟಿದೆ. ಇದು ಕೇವಲ ರೈತರ ಸಮಸ್ಯೆಯಲ್ಲ, ಅನ್ನ ಉಣ್ಣುವ ಎಲ್ಲರೂ ಸೇರಿ ಹೋರಾಟಕ್ಕೆ ಬೆಂಬಲಿಸಬೇಕಿದೆ. ರೈತರ ಹೋರಾಟಕ್ಕೆ ಬೆಂಬಲಿಸಿ ಅನ್ನದ ಋಣ ತೀರಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರಧಾನಿ ಮೋದಿ ಡೋಂಗಿ ಪ್ರಚಾರ ಮಾಡುತ್ತಿದ್ದಾರೆ: ಸಿಪಿಐ

“ರಾಜ್ಯದ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡಿದಲ್ಲಿ, ಆಗಲೂ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಡಿ ಎಸ್ ಶರಣಬಸವ, ಮುದುಕಪ್ಪ ನಾಯಕ, ಮಲ್ಲನಗೌಡ, ರವಿಕುಮಾರ, ಆಂಜಿನಯ್ಯ ಕುರುಬದೊಡ್ಡಿ, ಸಾಜಿದ್ ಹುಸೇನ್‌ ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...