ರಾಯಚೂರು | ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹ

Date:

ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಒದಗಿಸಬೇಕು ಎಂದು ಎಐಡಿಎಸ್‌ಒ ಕಾರ್ಯಕರ್ತರು ರಾಯಚೂರಿನ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

“ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸಿಗದೆ ಪರದಾಡುವಂತಾಗಿದೆ. ಸಂಜೆ 3:30ಕ್ಕೆ ಕೇವಲ ಒಂದು ಬಸ್ ಇದ್ದು, ವಿಶ್ವವಿದ್ಯಾಲಯದಿಂದ ರಾಯಚೂರು ಬಸ್ ನಿಲ್ದಾಣಕ್ಕೆ ಹೋರಡುತ್ತದೆ. ಆದರೆ ಹಲವು ವಿದ್ಯಾರ್ಥಿಗಳ ಪ್ರಯೋಗ ತರಗತಿಗಳು (ಲ್ಯಾಬ್) ಸಂಜೆ 5:30ರವರೆಗೂ ನಡೆಯುತ್ತಿದ್ದು, 3:30ರನಂತರ ವಿಶ್ವವಿದ್ಯಾಲಯದಿಂದ ಯಾವುದೇ ಬಸ್ ಇಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಸಾರಿಗೆ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಸಂಜೆ 5:30ಕ್ಕೆ ಬಸ್ ಕಲ್ಪಿಸುವ ವ್ಯವಸ್ಥೆ ಮಾಡಬೇಕು. ರಾಯಚೂರು ವಿಶ್ವವಿದ್ಯಾಲಯ ನಿಲ್ದಾಣಕ್ಕೆ ಯರಗೇರಾ ಕಡೆಯಿಂದ ಬರುವ ಎಲ್ಲ ಬಸ್‌ಗಳನ್ನು ನಿಲುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ತಡವಲಗಾ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಕ್ಕೆ ಮೆಚ್ಚುಗೆ

ಈ ಸಂದರ್ಭದಲ್ಲಿ ಎಐಡಿಎಸ್ಒ ಜಿಲ್ಲಾಧ್ಯಕ್ಷ ಹಯ್ಯಾಳಪ್ಪ, ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ವಿನೋದ್, ಮೇಘನಾ, ರಾಮು, ಮಲ್ಲಿಕಾರ್ಜುನ್, ಕ್ಯಾರೋಲಿನ್, ದೀಪಾ ಸೇರಿದಂತೆ ಬಹುತೇಕ ವಿದ್ಯಾರ್ಥಿಗಳು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...